ಹುಬ್ಬಳ್ಳಿ:ದೀಪಾವಳಿ/ಛತ್ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿರ್ವಹಿಸಲು ಹುಬ್ಬಳ್ಳಿ-ಕೊಲ್ಲಂ, ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್-ಸಂತ್ರಗಾಚಿ, ಯಶವಂತಪುರ-ಕೊಟ್ಟಾಯಂ ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್-ಕಲಬುರಗಿ ಮತ್ತು ಹುಬ್ಬಳ್ಳಿ-ಮುಜಾಫರ್‌ಪುರ ಮಾರ್ಗದ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲು ನೈಋತ್ಯ ರೈಲ್ವೆ ನಿರ್ಧರಿಸಿದೆ.
ಹುಬ್ಬಳ್ಳಿ-ಕೊಲ್ಲಂ ಮಾರ್ಗ:ಹುಬ್ಬಳ್ಳಿ- ಕೊಲ್ಲಂ ಮಾರ್ಗದಲ್ಲಿ 07313 ಸಂಖ್ಯೆಯ ವಿಶೇಷ ಎಕ್ಸ್‌ಪ್ರೆಸ್ ರೈಲು ಅಕ್ಟೋಬರ್ 26 ರಂದು ಹುಬ್ಬಳ್ಳಿಯ ಎಸ್‌ಎಸ್‌ಎಸ್ ರೈಲು ನಿಲ್ದಾಣದಿಂದ ಮಧ್ಯಾಹ್ನ 3:15ಕ್ಕೆ ಹೊರಟು ಮರುದಿನ ಸಂಜೆ 5:10 ಕ್ಕೆ ಕೊಲ್ಲಂ ನಿಲ್ದಾಣ ತಲುಪಲಿದೆ. ಹಿಂದಿರುಗುವ ಪ್ರಯಾಣದಲ್ಲಿ, ರೈಲು ಸಂಖ್ಯೆ 07314 ಅಕ್ಟೋಬರ್ 27 ರಂದು ಕೊಲ್ಲಂನಿಂದ ರಾತ್ರಿ 8:30 ಕ್ಕೆ ಹೊರಟು, ಮರುದಿನ ರಾತ್ರಿ 8:45 ಕ್ಕೆ ಹುಬ್ಬಳ್ಳಿಗೆ ತಲುಪಲಿದೆ.
ಈ ರೈಲು ಹಾವೇರಿ, ರಾಣಿಬೆನ್ನೂರು, ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು, ಚಿಕ್ಕಬಾಣಾವರ, ಎಸ್‌ಎಂವಿಟಿ ಬೆಂಗಳೂರು, ಕೃಷ್ಣರಾಜಪುರಂ, ಬಂಗಾರಪೇಟೆ, ಸೇಲಂ, ಕರೂರ್, ದಿಂಡಿಗಲ್, ಮಧುರೈ, ವಿರುಡುನಗರ, ಶಿವಕಾಶಿ, ರಾಜಪಾಳ್ಯಮ್, ಶ್ರೀವಿಲ್ಲಿಪುತ್ತೂರು, ಕಡಯನಲ್ಲೂರು, ತೆಂಕಾಶಿ, ಸೆಂಗೋಟ್ಟೈ, ತೆನಮಲೈ, ಪುನಲೂರು, ಆವನೀಶ್ವರಂ, ಕೊಟ್ಟಾರಕರ ಮತ್ತು ಕುಂದರ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.
ಬೆಂಗಳೂರು-ಸಂತ್ರಗಾಚಿ ಮಾರ್ಗ:ಬೆಂಗಳೂರು-ಸಂತ್ರಗಾಚಿ ಮಾರ್ಗದಲ್ಲಿ 06211 ಸಂಖ್ಯೆಯ ವಿಶೇಷ ಎಕ್ಸ್‌ಪ್ರೆಸ್ ರೈಲು ಅಕ್ಟೋಬರ್ 26 ರಂದು ಬೆಳಗ್ಗೆ 10:15 ಗಂಟೆಗೆ ಎಸ್ಎಂವಿಟಿ ಬೆಂಗಳೂರಿನಿಂದ ಹೊರಟು ಮರುದಿನ ಸಂಜೆ 7:45 ಗಂಟೆಗೆ ಸಂತ್ರಗಾಚಿ ತಲುಪಲಿದೆ. ಹಿಂದಿರುಗುವ ಪ್ರಯಾಣದಲ್ಲಿ, ರೈಲು ಸಂಖ್ಯೆ 06212 ಅಕ್ಟೋಬರ್ 27 ರಂದು ಸಂತ್ರಗಾಚಿಯಿಂದ ರಾತ್ರಿ 11:30ಕ್ಕೆ ಹೊರಟು, ಮರುದಿನ ಎಸ್ಎಂವಿಟಿ ಬೆಂಗಳೂರು ನಿಲ್ದಾಣಕ್ಕೆ ಮಧ್ಯಾಹ್ನ 12:30 ಗಂಟೆಗೆ ಆಗಮಿಸಲಿದೆ.
ಈ ರೈಲು ಕೃಷ್ಣರಾಜಪುರಂ, ಕಟ್ಪಾಡಿ, ರೇಣಿಗುಂಟಾ, ಗುಡೂರು, ನೆಲ್ಲೂರು, ಓಂಗೋಲ್, ವಿಜಯವಾಡ, ರಾಜಮಂಡ್ರಿ, ದುವ್ವಾಡ, ಕೊತ್ತವಲಸ, ವಿಜಯನಗರಂ, ಶ್ರೀಕಾಕುಳಂ ರೋಡ್, ಪಲಾಸ, ಬ್ರಹ್ಮಪುರ, ಖುರ್ದಾ ರೋಡ್, ಭುವನೇಶ್ವರ, ಕಟಕ್, ಭದ್ರಕ್, ಬಾಲೇಶ್ವರ ಮತ್ತು ಖರಗ್ಪುರ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿದೆ.
ಯಶವಂತಪುರ-ಕೊಟ್ಟಾಯಂ ಮಾರ್ಗ:ಯಶವಂತಪುರ-ಕೊಟ್ಟಾಯಂ ಮಾರ್ಗದಲ್ಲಿ 06215 ಸಂಖ್ಯೆಯ ವಿಶೇಷ ಎಕ್ಸ್‌ಪ್ರೆಸ್ ರೈಲು ಅಕ್ಟೋಬರ್ 29 ರಂದು ಸಂಜೆ 6:30ಕ್ಕೆ ಯಶವಂತಪುರದಿಂದ ಹೊರಟು ಮರುದಿನ ಬೆಳಿಗ್ಗೆ 8:10 ಕ್ಕೆ ಕೊಟ್ಟಾಯಂ ನಿಲ್ದಾಣ ತಲುಪಲಿದೆ. ವಾಪಸ್ ಪ್ರಯಾಣದಲ್ಲಿ, ರೈಲು ಸಂಖ್ಯೆ 06216 ಅಕ್ಟೋಬರ್ 30 ರಂದು ಬೆಳಗ್ಗೆ 11:10 ಕ್ಕೆ ಕೊಟ್ಟಾಯಂನಿಂದ ಹೊರಟು, ಮರುದಿನ ಅಂದರೆ ಅಕ್ಟೋಬರ್ 31 ರಂದು ಬೆಳಗ್ಗೆ 1:15 ಗಂಟೆಗೆ ಯಶವಂತಪುರ ನಿಲ್ದಾಣಕ್ಕೆ ಆಗಮಿಸಲಿದೆ.