ಶಿವಮೊಗ್ಗ: ರಾಜ್ಯ ರಸ್ತೆ ಅಭಿವೃದ್ಧಿಗೆ ರಾಜ್ಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದಿಂದ ಭೂಮಿ ಕಳೆದುಕೊಂಡು ಪರಿಹಾರ ನೀಡುವಲ್ಲಿ ವಿಳಂಬವಾದ ಹಿನ್ನೆಲೆಯಲ್ಲಿ ನ್ಯಾಯಾಲಯವು ಜಿಲ್ಲಾಧಿಕಾರಿ ಕಚೇರಿ ಜಪ್ತಿಗೆ ಆದೇಶ ಮಾಡಿದೆ. ತಮಗೆ ನೀಡಿರುವ ಪರಿಹಾರದಲ್ಲಿ ಅನ್ಯಾಯವಾಗಿದೆ ಎಂದು ನ್ಯಾಯಾಲಯದ ಮೆಟ್ಟಿಲೇರಿದ್ದ ವ್ಯಕ್ತಿಗೆ ಪರಿಹಾರ ಒದಗಿಸುವಲ್ಲಿ ವಿಳಂಬವಾದ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿಯ ಪೀಠೋಪಕರಣಗಳನ್ನು ಜಪ್ತಿ ಮಾಡುವಂತೆ ಜಿಲ್ಲಾ ನ್ಯಾಯಾಲಯದ ಅಮೇಲ್ಜಾರಿ ಸಂಖ್ಯೆ 16/2024ರಲ್ಲಿ ಆದೇಶ ಹೊರಡಿಸಿದೆ.
ಭೂ ಸ್ವಾಧೀನದ ಹಣ ನೀಡದ ಜಿಲ್ಲಾಧಿಕಾರಿ ಕಚೇರಿ ಜಪ್ತಿಗೆ ಕೋರ್ಟ್ ಆದೇಶ (COURT NOTICE) ಪ್ರಕರಣದ ಹಿನ್ನೆಲೆ :ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದ ಅಗಡಿ ಆಶೋಕ್ ಎಂಬುವರಿಗೆ ಸೇರಿದ ನಿವೇಶನದ ಸ್ಪಲ್ಪ ಭಾಗವನ್ನು ರಾಜ್ಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ (ಕೆ-ಶಿಪ್) 2011ರಲ್ಲಿ ವಶಪಡಿಸಿಕೊಂಡಿತ್ತು. ಈ ನಿವೇಶನಕ್ಕೆ ಸಂಬಂಧಿಸಿದಂತೆ ಕಾನೂನು ಬದ್ಧವಾಗಿ ಪರಿಹಾರ ನೀಡಿಲ್ಲ ಎಂದು ನಿವೇಶನದ ಮಾಲೀಕರಾದ ಅಶೋಕ್ ನ್ಯಾಯಾಲಯದ ಮೆಟ್ಟಿಲೇರಿದ್ದರು.
ಭೂ ಸ್ವಾಧೀನದ ಹಣ ನೀಡದ ಜಿಲ್ಲಾಧಿಕಾರಿ ಕಚೇರಿ ಜಪ್ತಿಗೆ ಕೋರ್ಟ್ ಆದೇಶ (COURT NOTICE) ಹೈಕೋರ್ಟ್ ನಿರ್ದೇಶನದಂತೆ ಪಿರ್ಯಾದಿದಾರರಾದ ಅಗಡಿ ಅಶೋಕ್ ಅವರಿಗೆ ಮೂರು ತಿಂಗಳೊಳಗೆ 3.93 ಕೋಟಿ ರೂ. ಸೇರಿದಂತೆ ಒಟ್ಟು 4.44 ಕೋಟಿ ರೂ., ಪರಿಹಾರ ನೀಡುವಂತೆ ಜಿಲ್ಲಾಧಿಕಾರಿ ಕಚೇರಿಗೆ ಸೂಚನೆ ನೀಡಿತ್ತು. ಆದರೆ, ಪರಿಹಾರ ನೀಡುವಲ್ಲಿ ವಿಳಂಬವಾದ ಹಿನ್ನೆಲೆಯಲ್ಲಿ ಜಿಲ್ಲಾ ನ್ಯಾಯಾಲಯವು ಜಿಲ್ಲಾಧಿಕಾರಿ ಕಚೇರಿಯ ಚರಾಸ್ತಿಯಾದ ಪೀಠೋಪಕರಣಗಳನ್ನು ಜಪ್ತಿ ಮಾಡಬೇಕು. ಹಾಗೂ ಮುಂದಿನ ಆದೇಶದವರೆಗೆ ವಶಕ್ಕೆ ಪಡೆಯುವಂತೆ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.
ಪಿರ್ಯಾದಿದಾರ ಪರವಾಗಿ ಸೊರಬದ ವಕೀಲರಾದ ಪಿ.ವಿ. ಖರೆ ಹಾಗೂ ದಿನಕರ್ ಭಟ್ ಭಾವೆ ವಾದ ಮಂಡಿಸಿದ್ದರು.
ಇದನ್ನೂ ಓದಿ: ಮುನಿರತ್ನ ಪ್ರಕರಣದ ಬಗ್ಗೆ ಸಮುದಾಯದ ನಾಯಕರು, ಸ್ವಾಮೀಜಿಗಳು ಮಾತಾಡಬೇಕು: ಡಿಸಿಎಂ ಡಿಕೆಶಿ - Muniratna Case