ಕರ್ನಾಟಕ

karnataka

ETV Bharat / state

ಸರ್ಕಾರದ ಕಾರ್ಯಕ್ರಮಗಳನ್ನು ಪ್ರಾಮಾಣಿಕವಾಗಿ ಜನರಿಗೆ ತಲುಪಿಸಿ: ಸರ್ಕಾರಿ ನೌಕರರಿಗೆ ಸಿಎಂ ಸಲಹೆ - CM Siddaramaiah - CM SIDDARAMAIAH

ಸರ್ಕಾರಿ ನೌಕರರು ಯೋಜನೆಗಳನ್ನು ಸಮರ್ಪಕವಾಗಿ ಜನರಿಗೆ ತಲುಪಿಸುವ ಜೊತೆಗೆ ಸರ್ಕಾರದ ನಿಲುವುಗಳಿಗೆ ತಕ್ಕ೦ತೆ ಕಾರ್ಯ ನಿರ್ವಹಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸಿಎಂ ಭೇಟಿಯಾದ ರಾಜ್ಯ ಸರ್ಕಾರಿ ನೌಕರರ ಸಂಘ
ಸಿಎಂ ಭೇಟಿಯಾದ ರಾಜ್ಯ ಸರ್ಕಾರಿ ನೌಕರರ ಸಂಘ (ETV Bharat)

By ETV Bharat Karnataka Team

Published : Jul 17, 2024, 5:45 PM IST

ಬೆಂಗಳೂರು: ಸರ್ಕಾರದ ಕಾರ್ಯಕ್ರಮಗಳನ್ನು ಪ್ರಾಮಾಣಿಕವಾಗಿ ಜನರಿಗೆ ತಲುಪಿಸುವ ಕಾರ್ಯ ಮಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರಿ ನೌಕರರಿಗೆ ಕಿವಿಮಾತು ಹೇಳಿದರು. ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಕುರಿತಾಗಿ 7ನೇ ವೇತನ ಆಯೋಗದ ಶಿಫಾರಸುಗಳನ್ನು ಸರ್ಕಾರ ಅಂಗೀಕರಿಸಿರುವ ಹಿನ್ನೆಲೆಯಲ್ಲಿ ಕೃಷ್ಣಾದಲ್ಲಿ ಇಂದು ರಾಜ್ಯ ಸರ್ಕಾರಿ ನೌಕರರ ಸಂಘದ ಧನ್ಯವಾದ ಸ್ವೀಕರಿಸಿ ಅವರು ಮಾತನಾಡಿದರು.

ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಜನರಿಗೆ ತಲುಪಿಸುವ ಜೊತೆಗೆ ಸರ್ಕಾರದ ನಿಲುವುಗಳಿಗೆ ತಕ್ಕ೦ತೆ ಕಾರ್ಯ ನಿರ್ವಹಿಸಬೇಕು.
7ನೇ ವೇತನ ಆಯೋಗದ ಶಿಫಾರಸುಗಳನ್ನು ಸರ್ಕಾರ ಪೂರ್ಣವಾಗಿ ಒಪ್ಪಿಕೊಂಡಿದೆ. ಇದರಿಂದ ಸರ್ಕಾರಕ್ಕೆ 20 ಸಾವಿರ ಕೋಟಿ ರೂ. ಹೆಚ್ಚಿನ ಹೊರೆಯಾಗಲಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ, ಮಾಜಿ ಅಧ್ಯಕ್ಷರು ಸೇರಿದಂತೆ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ:ಕನ್ನಡಿಗರಿಗೆ ಖಾಸಗಿ ಸಂಸ್ಥೆಗಳಲ್ಲಿ ಮೀಸಲಾತಿ: ಹಳೇ ಟ್ವೀಟ್ ಡಿಲೀಟ್ ಮಾಡಿ ಹೊಸ ಪೋಸ್ಟ್ ಹಾಕಿದ ಸಿಎಂ - reservation for Kannadigas in job

ABOUT THE AUTHOR

...view details