ಕರ್ನಾಟಕ

karnataka

ETV Bharat / state

ಮಹಾಮಾರಿ ಭೀತಿ: ಕಳೆದ 24 ಗಂಟೆಯಲ್ಲಿ 293 ಮಂದಿಯಲ್ಲಿ ಡೆಂಗ್ಯೂ ಪತ್ತೆ! - Dengue Cases

ರಾಜ್ಯದಲ್ಲಿ 24 ಗಂಟೆಯಲ್ಲಿ 293 ಮಂದಿಗೆ ಡೆಂಗ್ಯೂ ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 358ಕ್ಕೆ ಏರಿಕೆಯಾಗಿದೆ.

By ETV Bharat Karnataka Team

Published : Jul 10, 2024, 10:11 PM IST

DENGUE CASES
ಡೆಂಗ್ಯೂ ಪ್ರಕರಣಗಳ ಸಂಖ್ಯೆ (ETV Bharat)

ಬೆಂಗಳೂರು:ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 293 ಮಂದಿಯಲ್ಲಿ ಡೆಂಗ್ಯೂ ಪತ್ತೆಯಾಗಿದೆ. ಇದರಿಂದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 358ಕ್ಕೆ ಏರಿದೆ. ಬಿಬಿಎಂಪಿ ವ್ಯಾಪ್ತಿಯಲ್ಲೇ ಅತಿ ಹೆಚ್ಚು ಪ್ರಕರಣಗಳು ಇಂದು ದಾಖಲಾಗಿವೆ.

ಕಳೆದ 24 ಗಂಟೆಯಲ್ಲಿ 1874 ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಈ ಪೈಕಿ 293 ಜನರಿಗೆ ಡೆಂಗ್ಯೂ ದೃಢಪಟ್ಟಿದೆ. ಇದರಲ್ಲಿ 1 ವರ್ಷದೊಳಗಿನ 2, 1 ರಿಂದ 18 ವರ್ಷದೊಳಗಿನ 101, 18 ವರ್ಷ ಮೇಲ್ಪಟ್ಟವರು 190 ಮಂದಿ ಇದ್ದಾರೆ. ರಾಜ್ಯದಲ್ಲಿ ಡೆಂಗ್ಯೂ ಸಾವಿನ ಪ್ರಮಾಣ ಶೇ.0.08 ಇದೆ. ಪ್ರಸ್ತುತ 100 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ರಾಜ್ಯದಲ್ಲಿ ಜನವರಿಯಿಂದ ಇಲ್ಲಿಯವರೆಗೆ ಒಟ್ಟು 7,840 ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ. ಇದರಲ್ಲಿ ಒಟ್ಟು 7 ಮಂದಿ ಡೆಂಗ್ಯೂನಿಂದ ಮೃತಪಟ್ಟಿದ್ದಾರೆ.

ಇದನ್ನೂ ಓದಿ:ಡೆಂಗ್ಯೂ ಪ್ರಕರಣ ಹೆಚ್ಚಳ: ಸ್ಲಂ‌ ನಿವಾಸಿಗಳಿಗೆ ಉಚಿತ ಸೊಳ್ಳೆ ಪರದೆ ನೀಡಲು ಸಿಎಂ ಸೂಚನೆ - Dengue Case Spread

ಡೆಂಗ್ಯೂ ಪ್ರಕರಣಗಳ ಹೆಚ್ಚಳ ಸಂಬಂಧ ಬುಧವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ, ಸ್ಲಂ‌ ನಿವಾಸಿಗಳಿಗೆ ಉಚಿತ ಸೊಳ್ಳೆ ಪರದೆ ನೀಡಲು ಸೂಚನೆ ನೀಡಿದ್ದಾರೆ. ಅಲ್ಲದೇ ಮಳೆಗಾಲ ಮುಗಿಯುವ ತನಕ ಅಧಿಕಾರಿಗಳು ನಿತ್ಯ ಪರಿಶೀಲನೆ ನಡೆಸುವಂತೆಯೂ ಹೇಳಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಒಟ್ಟು ಇಲ್ಲಿವರೆಗೆ (ಬುಧವಾರ) 7,362 ಪ್ರಕರಣಗಳು ಪತ್ತೆಯಾಗಿವೆ. ಈ ಪೈಕಿ 303 ಸಕ್ರಿಯ ಡೆಂಗ್ಯೂ ಪ್ರಕರಣಗಳಿವೆ. ಈವರೆಗೆ ರಾಜ್ಯದಲ್ಲಿ 7 ಡೆಂಗ್ಯೂನಿಂದ ಸಾವುಗಳಾಗಿವೆ. ಸ್ಲಂ ನಿವಾಸಿಗಳಿಗೆ ಉಚಿತ ಸೊಳ್ಳೆ ಪರದೆ ನೀಡಲು ಸೂಚನೆ ನೀಡಲಾಗಿದೆ. ಎಲ್ಲಿ ಸೊಳ್ಳೆಗಳು ಹೆಚ್ಚಿರುತ್ತವೆ ಅಲ್ಲಿ ಉಚಿತ ಸೊಳ್ಳೆ ಪರದೆ ನೀಡಲಾಗುತ್ತದೆ ಎಂದು ಇದೇ ವೇಳೆ ತಿಳಿಸಿದ್ದಾರೆ.

ABOUT THE AUTHOR

...view details