ಕರ್ನಾಟಕ

karnataka

ETV Bharat / state

ಹೇಮಂತ್ ನಿಂಬಾಳ್ಕರ್ ಎತ್ತಂಗಡಿ: ವಾರ್ತಾ ಇಲಾಖೆಗೆ ಸೂರಳ್ಕರ್ ವಿಕಾಸ್ ಕಿಶೋರ್ ನೂತನ ಆಯುಕ್ತ - Hemant Nimbalkar - HEMANT NIMBALKAR

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ‌ಇಲಾಖೆಯ ಆಯುಕ್ತರಾಗಿದ್ದ ಹೇಮಂತ್ ನಿಂಬಾಳ್ಕರ್ ಅವರನ್ನು ವರ್ಗಾಯಿಸಿ, ಆ ಸ್ಥಾನಕ್ಕೆ ನೂತನ ಆಯುಕ್ತರಾಗಿ ಸೂರಳ್ಕರ್ ವಿಕಾಸ್ ಕಿಶೋರ್ ಅವರನ್ನು ಸರ್ಕಾರ ನೇಮಿಸಿದೆ.

ವಾರ್ತಾ ಇಲಾಖೆ ನೂತನ ಆಯುಕ್ತ
ವಾರ್ತಾ ಇಲಾಖೆ ನೂತನ ಆಯುಕ್ತ

By ETV Bharat Karnataka Team

Published : Mar 31, 2024, 7:19 AM IST

ಬೆಂಗಳೂರು:ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ‌ಇಲಾಖೆಯ ನೂತನ ಆಯುಕ್ತರಾಗಿ ಸೂರಳ್ಕರ್ ವಿಕಾಸ್ ಕಿಶೋರ್ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. ಚುನಾವಣಾ ಆಯೋಗದ ಸೂಚನೆಯ ಮೇರೆಗೆ ನಿಂಬಾಳ್ಕರ್ ಅವರನ್ನು ಇಲಾಖೆಯಿಂದ ಎತ್ತಂಗಡಿ ಮಾಡಲಾಗಿದ್ದು, ಸ್ಥಳ ನಿಯೋಜಿಸಲಾಗಿಲ್ಲ. ನಿಂಬಾಳ್ಕರ್ ಪತ್ನಿ ಅಂಜಲಿ ನಿಂಬಾಳ್ಕರ್ ಉತ್ತರ ಕನ್ನಡ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ವರ್ಗಾವಣೆ ಮಾಡುವಂತೆ ಬಿಜೆಪಿ ನಿಯೋಗ ಇತ್ತೀಚೆಗೆ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿತ್ತು.

ನೂತನ ಆಯುಕ್ತ ಸೂರಳ್ಕರ್ ವಿಕಾಸ್ ಕಿಶೋರ್ ಅವರಿಗೆ ನಿಂಬಾಳ್ಕರ್ ಶನಿವಾರ ಸಂಜೆ ಅಧಿಕಾರ ಹಸ್ತಾಂತರಿಸಿದರು. ಬಿಬಿಎಂಪಿ ವಿಶೇಷ ಆಯುಕ್ತರಾಗಿರುವ ಸೂರಳ್ಕರ್ ಇದೀಗ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹುದ್ದೆಯನ್ನೂ ನಿರ್ವಹಿಸಬೇಕಿದೆ.

ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ತರುವುದರ ಮೂಲಕ ರಾಜ್ಯದಲ್ಲಿ ಹೆಸರುವಾಸಿಯಾಗಿದ್ದ ಸೂರಳ್ಕರ್ ಅವರು ಕೊಪ್ಪಳದಲ್ಲಿ ಜಿಲ್ಲಾಧಿಕಾರಿಯಾಗಿ, ಯಾದಗಿರಿ, ಬೆಳಗಾವಿ, ವಿಜಯಪುರ ಜಿಲ್ಲೆಗಳಲ್ಲಿ ಜಿ.ಪಂ ಸಿಇಒ ಆಗಿ ಕರ್ತವ್ಯ ನಿರ್ವಹಿಸಿದ್ದರು.

ಇದನ್ನೂ ಓದಿ:ಡಿಕೆ ಶಿವಕುಮಾರ್, ಹೇಮಂತ್ ನಿಂಬಾಳ್ಕರ್ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು - Election Commission

ನಿಂಬಾಳ್ಕರ್ ವರ್ಗಾವಣೆಗೆ ಮನವಿ ಸಲ್ಲಿಸಿದ್ದ ಬಿಜೆಪಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾಗಿದ್ದ ಹೇಮಂತ್ ನಿಂಬಾಳ್ಕರ್ ಅವರನ್ನು ವರ್ಗಾವಣೆ ಮಾಡುವಂತೆ ಚುನಾವಣಾ ಆಯೋಗಕ್ಕೆ ರಾಜ್ಯ ಬಿಜೆಪಿ ಮಾರ್ಚ್ 27ರಂದು ದೂರು ನೀಡಿತ್ತು. ಇಲಾಖೆಯ ಕಮೀಷನರ್ ಹುದ್ದೆಯಿಂದ ತಕ್ಷಣ ವರ್ಗಾವಣೆ ಮಾಡುವಂತೆ ಒತ್ತಾಯಿಸಲಾಗಿತ್ತು. ರಾಜ್ಯದೊಳಗಡೆ ಇದ್ದರೆ ಮತ್ತೆ ಪ್ರಭಾವ ಬಳಸುವ ಸಾಧ್ಯತೆ ಇದ್ದು, ಕರ್ನಾಟಕದಿಂದ ಹೊರಗಡೆ ಕೆಲಸ ಮಾಡಲು ಅವಕಾಶ ನೀಡುವಂತೆ ವಿನಂತಿಸಿದ್ದಾಗಿ ಛಲವಾದಿ ನಾರಾಯಣಸ್ವಾಮಿ ತಿಳಿಸಿದ್ದರು.

ಇದನ್ನೂ ಓದಿ:ಲೋಕಸಭೆ ಚುನಾವಣೆ: ರಾಜ್ಯದಲ್ಲಿ ಮೊದಲ ಬಾರಿಗೆ ಹೆಚ್ಚು ಮಹಿಳೆಯರಿಗೆ ಮಣೆ; ಕಾಂಗ್ರೆಸ್​ನಿಂದ 6, ಬಿಜೆಪಿಯಿಂದ ಇಬ್ಬರಿಗೆ ಟಿಕೆಟ್ - women candidates

ABOUT THE AUTHOR

...view details