ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಮಲೆನಾಡು ಹಾಗೂ ಕರಾವಳಿ ವ್ಯಾಪ್ತಿಯ ಪ್ರದೇಶಗಳಲ್ಲಿ ಮುಂದಿನ 3 ದಿನಗಳ ಕಾಲ ಮಳೆ ಮುಂದುವರಿಯಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಸೆ.13ವರೆಗೆ ಭಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಕರಾವಳಿ ಭಾಗದಲ್ಲಿ ಪ್ರತಿ ಗಂಟೆಗೆ 30-40 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ. ಕೊಡಗಿನಲ್ಲಿ ಮುಂದಿನ 24 ಗಂಟೆಗಳ ಕಾಲ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕರ್ನಾಟಕ ಮತ್ತು ಉತ್ತರ ಕರ್ನಾಟಕದ ಬಹುತೇಕ ಭಾಗದ ಜಿಲ್ಲೆಗಳಲ್ಲಿ ಮಳೆ ಇಳಿಮುಖವಾಗಿದೆ. ಆದರೂ, ಕೆಲ ಭಾಗಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಸಂಭವವಿದೆ.