ಕರ್ನಾಟಕ

karnataka

ETV Bharat / state

ಡಿಸಿಎಂ ಡಿ.ಕೆ.ಶಿವಕುಮಾರ್ ಫೋಟೋ ಮಾರ್ಫಿಂಗ್ ಆರೋಪ: ಕೆಪಿಸಿಸಿ ಕಾನೂನು ಘಟಕದಿಂದ ದೂರು ಸಲ್ಲಿಕೆ - photo morphing - PHOTO MORPHING

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಫೋಟೋ ಮಾರ್ಫಿಂಗ್ ಮಾಡಲಾಗಿದೆ ಎಂದು ಆರೋಪಿಸಿ ಕೆಪಿಸಿಸಿ ಕಾನೂನು ಘಟಕದಿಂದ ಹೈಗ್ರೌಂಡ್ಸ್ ಠಾಣೆಗೆ ದೂರು ದಾಖಲಿಸಲಾಗಿದೆ.

KPCC Legal Unit  DK Shivakumar  Highgrounds Police  Bengaluru
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಫೋಟೋ ಮಾರ್ಫಿಂಗ್ ಆರೋಪ: ಕೆಪಿಸಿಸಿ ಮಾನೂನು ಘಟಕದಿಂದ ದೂರು

By ETV Bharat Karnataka Team

Published : May 1, 2024, 6:53 AM IST

ಬೆಂಗಳೂರು: ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಫೋಟೋವನ್ನು ಅಶ್ಲೀಲವಾಗಿ ಮಾರ್ಫಿಂಗ್ ಮಾಡಲಾಗಿದೆ ಎಂದು ಆರೋಪಿಸಿ ಕೆಪಿಸಿಸಿ ಕಾನೂನು ಘಟಕ ಹೈಗ್ರೌಂಡ್ಸ್ ಠಾಣೆಗೆ ದೂರು ಸಲ್ಲಿಸಿದೆ.

ಈ ಹಿಂದೆ ವೈರಲ್ ಆಗಿದ್ದ ಬಿಜೆಪಿ ಮುಖಂಡರೊಬ್ಬರ ಅಶ್ಲೀಲ ಫೋಟೋವನ್ನು ಮಾರ್ಫಿಂಗ್ ಮಾಡಿ ಡಿ.ಕೆ. ಶಿವಕುಮಾರ್ ಫೋಟೋ ಜೋಡಿಸಿ ವೈರಲ್ ಮಾಡಲಾಗಿದೆ. ಆ ಫೋಟೋವನ್ನು ಫೇಸ್‌ಬುಕ್, ಯೂಟ್ಯೂಬ್ ಮತ್ತು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಲಾಗುತ್ತಿದೆ ಎಂದು ಆರೋಪಿಸಲಾಗಿದ್ದು, ಆರೋಪಿಗಳ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ಹರೀಶ್ ನಾಗರಾಜು ದೂರು ನೀಡಿದ್ದಾರೆ.

ಕೆಪಿಸಿಸಿ ಮಾನೂನು ಘಟಕದಿಂದ ದೂರು ಸಲ್ಲಿಕೆ

ದೂರಿನ ಮೇರೆಗೆ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಸಂತೋಷ್ ನೆಲಮಂಗಲ, ರಾಜೇಶ್ ಗೌಡ ಎಂಬ ಹೆಸರಿನ ಫೇಸ್‌ಬುಕ್‌ ಖಾತೆಗಳು ಹಾಗೂ ಕೇಸರಿ ಸಾಮ್ರಾಟ್ ಎಂಬ ಹೆಸರಿನ ಇನ್‌ಸ್ಟಾಗ್ರಾಂ ಖಾತೆ ಬಳಕೆದಾರರ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಇದನ್ನೂ ಓದಿ:ಪೆನ್​ಡ್ರೈವ್​ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ: ಡಿಕೆಶಿ - D K Shivakumar

ABOUT THE AUTHOR

...view details