ಕರ್ನಾಟಕ

karnataka

ETV Bharat / state

ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಕೇಂದ್ರ ಸಚಿವರ ವಿರುದ್ಧ FIR ದಾಖಲು - FIR Against Union Minister - FIR AGAINST UNION MINISTER

ಕಾಂಗ್ರೆಸ್ ಮುಖಂಡ​ ರವೀಂದ್ರ ಎಂಬವರು ನೀಡಿದ ದೂರಿನ ಮೇರೆಗೆ ಕೇಂದ್ರ ಸಚಿವ ರವನೀತ್ ಸಿಂಗ್ ಬಿಟ್ಟು ವಿರುದ್ಧ ಹಾಗೂ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮನೋಹರ್ ನೀಡಿದ ದೂರಿನ ಮೇರೆಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಬೆಂಗಳೂರು ಪೊಲೀಸರು ಎಫ್‌ಐಆರ್​ ದಾಖಲಿಸಿಕೊಂಡಿದ್ದಾರೆ.

Union Minister Ravneet Singh
ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವ ರವನೀತ್ ಸಿಂಗ್ ಬಿಟ್ಟು ಅವಹೇಳನಕಾರಿ ಹೇಳಿಕೆ (ETV Bharat)

By ETV Bharat Karnataka Team

Published : Sep 19, 2024, 12:56 PM IST

ಬೆಂಗಳೂರು: ಅವಹೇಳನಕಾರಿ ಹೇಳಿಕೆ ಆರೋಪದಡಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ನಗರದ ಹೈಗ್ರೌಂಡ್ಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾದ ಬೆನ್ನಲ್ಲೇ ಇದೀಗ ಕೇಂದ್ರ ಸಚಿವ ರವನೀತ್ ಸಿಂಗ್ ವಿರುದ್ಧವೂ ಪ್ರತ್ಯೇಕ ಎಫ್ಐಆರ್ ದಾಖಲಾಗಿದೆ‌.

"ಸೆ.15ರಂದು ಬಿಹಾರದಲ್ಲಿ ವಂದೇ ಭಾರತ್ ರೈಲು ಉದ್ಘಾಟನೆಯ ವೇಳೆ ಕೇಂದ್ರ ಸಚಿವ ರವನೀತ್ ಸಿಂಗ್ ಅವರು ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದರು. ಈ ದೇಶಕ್ಕೆ ರಾಹುಲ್ ಗಾಂಧಿ ದೊಡ್ಡ ಶತ್ರು. ಅವರು ಭಯೋತ್ಪಾದಕ ಎಂದು ಹೇಳಿದ್ದರು. ಅಲ್ಲದೇ ಅನ್ಯ ಧರ್ಮಗಳ ಬಗ್ಗೆ ಹಗುರವಾಗಿ ಮಾತನಾಡಿ ಕೋಮು ಸೌಹಾರ್ದತೆಗೆ ಧಕ್ಕೆ ತಂದಿದ್ದಾರೆ" ಎಂದು ಕಾಂಗ್ರೆಸ್ ಮುಖಂಡ ರವೀಂದ್ರ ಎಂಬವರು ಪೊಲೀಸರಿಗೆ ನೀಡಿದ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಬುಧವಾರವಷ್ಟೇ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಡಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮನೋಹರ್ ದೂರು ನೀಡಿದ್ದರು.

"ಇತ್ತೀಚೆಗೆ ಮಾಧ್ಯಮಗಳ ಮುಂದೆ ಹೇಳಿಕೆ ನೀಡುವಾಗ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹಾಗೂ ವೈಯಕ್ತಿಕವಾಗಿ ನಿಂದಿಸಿದ್ದಾರೆ. ಅಲ್ಲದೇ ಧರ್ಮಗಳ ನಡುವಿನ ಕೋಮು ಸೌಹಾರ್ದತೆಗೆ ಹಾನಿ ಉಂಟು ಮಾಡುವುದಲ್ಲದೆ, ರಾಹುಲ್ ಗಾಂಧಿ ಕುಟುಂಬದ ಬಗ್ಗೆ ಮಾನಹಾನಿಕರ ಹೇಳಿಕೆ ನೀಡಿದ್ದಾರೆ" ಎಂದು ವಿಡಿಯೋ ಕ್ಲಿಪಿಂಗ್ ಸಮೇತ ಅವರು ದೂರು ನೀಡಿದ್ದರು.

ಇದನ್ನೂ ಓದಿ:ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್ಐಆರ್ ದಾಖಲು

ABOUT THE AUTHOR

...view details