ಕರ್ನಾಟಕ

karnataka

ETV Bharat / state

ದೇವರಾಜೇಗೌಡ ಬಿಜೆಪಿ ಕಾರ್ಯಕರ್ತ, ಬಿಜೆಪಿ - ಜೆಡಿಎಸ್ ನಾಯಕರ ಅಣತಿಯಂತೆ ನನ್ನ ವಿರುದ್ಧ ಸುಳ್ಳು ಅಪಾದನೆ: ಡಿಕೆಶಿ - d k shivakumar - D K SHIVAKUMAR

ದೇವರಾಜೇಗೌಡ ನನ್ನ ವಿರುದ್ಧ ಮಾಡಿರುವ ಆಪಾದನೆಗಳು ಸುಳ್ಳು ಹಾಗೂ ಆಧಾರ ರಹಿತ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.

ಡಿಸಿಎಂ ಡಿ ಕೆ ಶಿವಕುಮಾರ್
ಡಿಸಿಎಂ ಡಿ ಕೆ ಶಿವಕುಮಾರ್ (ETV Bharat)

By ETV Bharat Karnataka Team

Published : May 6, 2024, 10:16 PM IST

ಬೆಂಗಳೂರು: ನನಗೂ ಪೆನ್ ಡ್ರೈವ್ ಬಿಡುಗಡೆ ಪ್ರಕರಣಕ್ಕೂ ಯಾವುದೇ ಸಂಬಂಧ ಇಲ್ಲ. ಬಿಜೆಪಿ ಕಾರ್ಯಕರ್ತ ದೇವರಾಜೇಗೌಡ ನನ್ನ ವಿರುದ್ಧ ಮಾಡಿರುವ ಆಪಾದನೆಗಳು ಸುಳ್ಳು ಹಾಗೂ ಆಧಾರ ರಹಿತ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ. ಈ ಕುರಿತು ವಿಡಿಯೋ ಸಂದೇಶ ಬಿಡಗಡೆ ಮಾಡಿರುವ ಅವರು, ದೇವರಾಜೇಗೌಡ ಹಿಂದೆ ಬಿಜೆಪಿಯಿಂದ ಚುನಾವಣೆಗೆ ನಿಂತಿದ್ದವರು. ಆ ಪಕ್ಷದ ಸಕ್ರಿಯ ಕಾರ್ಯಕರ್ತ. ಈಗ ಪ್ರಜ್ವಲ್ ಪ್ರಕರಣದಲ್ಲಿ ಜೆಡಿಎಸ್ ಜತೆಗೆ ಅದರ ಮಿತ್ರ ಪಕ್ಷ ಬಿಜೆಪಿಗೂ ಬಹಳ ಮುಜುಗರ ಮತ್ತು ಮುಖಭಂಗ ಆಗಿದೆ. ಈಗ ಆಗಿರುವ ಡ್ಯಾಮೇಜ್ ನಿವಾರಿಸಿಕೊಳ್ಳಲು ಬಿಜೆಪಿ - ಜೆಡಿಎಸ್ ನಾಯಕರು ದೇವರಾಜೇಗೌಡನ ಮೂಲಕ ನನ್ನ ವಿರುದ್ಧ ಇಲ್ಲ ಸಲ್ಲದ ಆರೋಪ ಮಾಡಿಸಿದ್ದಾರೆ ಎಂದು ದೂರಿದ್ದಾರೆ.

ದೇವರಾಜೇಗೌಡ ಪೆನ್ ಡ್ರೈವ್ ಹಾಗೂ ಬಿಜೆಪಿ ಆಂತರಿಕ ವಿಚಾರದ ಬಗ್ಗೆ ಚರ್ಚೆ ಮಾಡಲು ನನ್ನನ್ನು ಸಂಪರ್ಕಿಸಲು ಪ್ರಯತ್ನಿಸಿದ್ದ. ನನಗೆ ಸಮಯ ಕೊರತೆ ಇದ್ದ ಕಾರಣ ಅವನನ್ನು ಸಂಪರ್ಕ ಮಾಡಲು ಸಾಧ್ಯವಾಗಿರಲಿಲ್ಲ. ಆತ ನನ್ನ ಬಳಿ ಏನು ಮಾತನಾಡಿದ್ದ ಎಂದು ಬೆಂಗಳೂರಿಗೆ ಬಂದು ಮಾಧ್ಯಮಗಳಿಗೆ ತಿಳಿಸುತ್ತೇನೆ. ಇದೇ ದೇವರಾಜೇಗೌಡ ಈ ಹಿಂದೆಯೇ ತಮ್ಮಲ್ಲಿ ಪೆನ್ ಡ್ರೈವ್ ಇರುವ ಬಗ್ಗೆ ಪತ್ರಿಕಾಗೋಷ್ಠಿ ಕರೆದು ಮಾತನಾಡಿದ್ದರು ಎಂದಿದ್ದಾರೆ.

ಬಿಜೆಪಿ ನಾಯಕರ ಅನುಮತಿ ಪಡೆದು ಅದನ್ನು ಬಿಡುಗಡೆ ಮಾಡುವುದಾಗಿಯೂ ಹೇಳಿದ್ದರು. ಹೀಗಿರುವಾಗ ನನಗೂ ಪೆನ್ ಡ್ರೈವ್ ಬಿಡುಗಡೆಗೂ ಏನು ಸಂಬಂಧ?. ಕೋತಿ ತಿಂದು ಮೇಕೆ ಬಾಯಿಗೆ ಒರೆಸಿತು ಎಂಬಂತೆ ದೇವರಾಜೇಗೌಡ ಮಾಡೋದೆಲ್ಲ ಮಾಡಿ ಈಗ ನನ್ನ ವಿರುದ್ಧ ಅಪಾದನೆ ಮಾಡುತ್ತಿದ್ದಾರೆ. ಇದರ ಹಿಂದೆ ಬಿಜೆಪಿ -ಜೆಡಿಎಸ್ ನಾಯಕರ ಷಡ್ಯಂತ್ರ ಇದೆ ಎಂದು ಶಿವಕುಮಾರ್ ಆರೋಪಿಸಿದ್ದಾರೆ.

ಇದನ್ನೂ ಓದಿ:’ನನ್ನ ಹೋರಾಟವನ್ನ ಕಾಂಗ್ರೆಸ್ ತನ್ನ ಲಾಭಕ್ಕೆ ಬಳಸಿಕೊಳ್ಳುತ್ತಿದೆ’: ವಕೀಲ ದೇವರಾಜೇಗೌಡ - Advocate Devarajegowda

ABOUT THE AUTHOR

...view details