ಕರ್ನಾಟಕ

karnataka

ETV Bharat / state

ಧಾರವಾಡ: ಚುನಾವಣೆ ಸೆಕ್ಟರ್ ಅಧಿಕಾರಿಯಾಗಿ ಕರ್ತವ್ಯದಲ್ಲಿದ್ದ ಹೆಸ್ಕಾಂ ಎಇಇ ಹೃದಯಘಾತದಿಂದ ಸಾವು - Lok Sabha Election 2024 - LOK SABHA ELECTION 2024

ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆಯ ಸೆಕ್ಟರ್ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಹುಬ್ಬಳ್ಳಿ ಹೆಸ್ಕಾಂ ಎಇಇ ಹೃದಯಘಾತದಿಂದ ಸಾವಿಗೀಡಾಗಿದ್ದಾರೆ.

Hescom AEE Krishnamurthy B.R.
ಹೆಸ್ಕಾಂ ಎಇಇ ಕೃಷ್ಣಮೂರ್ತಿ ಬಿ.ಆರ್.

By ETV Bharat Karnataka Team

Published : Apr 20, 2024, 8:00 PM IST

ಧಾರವಾಡ:ಲೋಕಸಭಾ ಮತಕ್ಷೇತ್ರದ 74 - ಹುಬ್ಬಳ್ಳಿ ಧಾರವಾಡ ಪಶ್ಚಿಮ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯಲ್ಲಿ ಸೆಕ್ಟರ್ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ, ಹುಬ್ಬಳ್ಳಿಯ ಹೆಸ್ಕಾಂ (ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ) ಕೇಂದ್ರ ಕಚೇರಿಯ ಸಹಾಯಕ ಕಾರ್ಯಪಾಲಕ ಅಭಿಯಂತರ (ಎಇಇ) ಕೃಷ್ಣಮೂರ್ತಿ ಬಿ.ಆರ್ (52) ಅವರು ಇಂದು ಕರ್ತವ್ಯದಲ್ಲಿದ್ದಾಗ ತೀವ್ರ ಹೃದಯಾಘಾತದಿಂದಾಗಿ ನಿಧನರಾಗಿದ್ದಾರೆ.

ಮೂಲತಃ ದಾವಣಗೆರೆಯವರಾದ ಕೃಷ್ಣಮೂರ್ತಿ ಅವರು ಹಲವು ವರ್ಷಗಳಿಂದ ಉತ್ತರ ಕರ್ನಾಟಕದ ಹೆಸ್ಕಾಂ ಎಇಇ ಆಗಿ ವಿವಿಧ ಜಿಲ್ಲೆಗಳಲ್ಲಿ ಸೇವೆ ಸಲ್ಲಿಸಿದ್ದರು. ಮೃತರು ಕಿತ್ತೂರು ಸರಕಾರಿ ಆಸ್ಪತ್ರೆಯ ದಂತವೈದ್ಯೆ ಡಾ.ನಾಗರತ್ನಾ ಮತ್ತು ಮಗ ಸ್ವರೂಪ ಅವರನ್ನು ಅಗಲಿದ್ದಾರೆ.

ಎಇಇ ಕೃಷ್ಣಮೂರ್ತಿ ಅವರ ನಿಧನಕ್ಕೆ ಚುನಾವಣಾಧಿಕಾರಿ ದಿವ್ಯ ಪ್ರಭು ಹಾಗೂ ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಮತಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಪ್ರಿಯಾಂಗ ಎಂ., ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮೊಹಮ್ಮದ್ ರೋಷನ್ , ಪ್ರಧಾನ ವ್ಯವಸ್ಥಾಪಕ ಸಿದ್ದು ಹುಲ್ಲೋಳಿ ಅವರು ಸಂತಾಪ ಸೂಚಿಸಿದ್ದಾರೆ.

ಇದನ್ನೂಓದಿ:ಶಿವಮೊಗ್ಗ: ಸಿಡಿಲು ಬಡಿದು ವ್ಯಕ್ತಿ ಸಾವು, ಮತ್ತೋರ್ವ ಗಂಭೀರ - Heavy Rain In Karnataka

ABOUT THE AUTHOR

...view details