ಕರ್ನಾಟಕ

karnataka

ETV Bharat / state

7ನೇ ವೇತನ ಆಯೋಗದ ವರದಿ ಬಗ್ಗೆ ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ: ಸಚಿವ ಹೆಚ್​.ಕೆ.ಪಾಟೀಲ್ - 7th Pay Commission

ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ 7ನೇ ವೇತವನ ಆಯೋಗದ ವರದಿ ಬಗ್ಗೆ ಚರ್ಚೆಯಾಗಿದೆ. ಆದರೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ.

ಸಚಿವ ಹೆಚ್​.ಕೆ.ಪಾಟೀಲ್
ಸಚಿವ ಹೆಚ್​.ಕೆ.ಪಾಟೀಲ್ (ETV Bharat)

By ETV Bharat Karnataka Team

Published : Jun 20, 2024, 10:06 PM IST

ಬೆಂಗಳೂರು:7ನೇ ವೇತನ ಆಯೋಗದ ವರದಿ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಗಿದ್ದು, ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದ್ದಾರೆ.

ವೇತನ ಆಯೋಗದ ವರದಿ ಮಾರ್ಚ್​ನಲ್ಲಿ ಸರ್ಕಾರಕ್ಕೆ ಸಲ್ಲಿಕೆಯಾಗಿದೆ. ಅದರಂತೆ, ಮೂಲ ವೇತನದ ಮೇಲೆ ಶೇ.27.5ರಷ್ಟು ಹೆಚ್ಚಿಸಲು ಶಿಫಾರಸು ಮಾಡಲಾಗಿದೆ. ಸರ್ಕಾರ ಮಧ್ಯಂತರ ವರದಿಯಂತೆ ಶೇ.17ರಷ್ಟು ಹೆಚ್ಚಿಸಿ ಆದೇಶಿಸಿತ್ತು. ಕನಿಷ್ಠ ಮೂಲ ವೇತನ 17,000 ದಿಂದ 27,000 ರೂ.ಗೆ ಪರಿಷ್ಕರಣೆ ಆಗುವಂತೆ ಶಿಫಾರಸು ಮಾಡಲಾಗಿತ್ತು. ವೇತನ ಆಯೋಗದ ಶಿಫಾರಸನ್ನು ಆದಷ್ಟು ಬೇಗ ಅನುಷ್ಠಾನ ಮಾಡುವಂತೆ ರಾಜ್ಯ ಸರ್ಕಾರಿ ನೌಕರರು ಸರ್ಕಾರದ ಮೇಲೆ ಒತ್ತಡ ಹೇರುತ್ತಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣ:ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಬಂಧಿತ ನಟ ದರ್ಶನ್ ಸಂಬಂಧ ಸಚಿವರು ಯಾರೂ ಹೇಳಿಕೆ ನೀಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಸಚಿವ ಸಂಪುಟ ಸಭೆಯಲ್ಲಿ ಈ ವಿಚಾರ ಚರ್ಚೆಗೆ ಬಂದಿದ್ದು, ಕಾನೂನು ಪ್ರಕಾರ ಸರ್ಕಾರ ಸೂಕ್ಷ್ಮವಾಗಿ ಪ್ರಕರಣವನ್ನು ನಿಭಾಯಿಸುತ್ತಿದೆ. ಈ ವಿಚಾರದಲ್ಲಿ ಅನಗತ್ಯವಾಗಿ ಯಾರೂ ಹೇಳಿಕೆ ನೀಡಬಾರದು ಎಂದು ತಾಕೀತು ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಕೆಜಿಎಫ್‌ನಲ್ಲಿ ಮರು ಗಣಿಗಾರಿಕೆ ಚಟುವಟಿಕೆಗೆ ಸಂಪುಟ ಸಭೆ ಒಪ್ಪಿಗೆ - Re Mining Activities In KGF

ABOUT THE AUTHOR

...view details