ಬೆಂಗಳೂರು: "ನಮ್ಮ ಕುಟುಂಬದ ಯಾವುದೇ ಸದಸ್ಯರು ಚುನಾವಣಾ ರಾಜಕೀಯಕ್ಕೆ ಬರುವ ಪ್ರಶ್ನೆಯೇ ಇಲ್ಲ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.
ಚನ್ನಪಟ್ಟಣ ಉಪ ಸಮರದಲ್ಲಿ ಡಿಕೆಶಿ ಮಗಳು ಐಶ್ವರ್ಯ ಕಣಕ್ಕಿಳಿಯಲಿದ್ದಾರೆ ಎಂಬ ಸುದ್ದಿ ಕೇಳಿ ಬರುತ್ತಿದೆ. ಈ ಸಂಬಂಧದ ಊಹಾಪೋಹಗಳಿಗೆ ಡಿ.ಕೆ. ಶಿವಕುಮಾರ್ ತೆರೆ ಎಳೆದಿದ್ದಾರೆ. ಎಕ್ಸ್ಪೋಸ್ಟ್ ಮೂಲಕ ಈ ಸಾಧ್ಯತೆಯನ್ನು ನಿರಾಕರಿಸಿರುವ ಡಿಕೆಶಿ 'ನಮ್ಮ ಕುಟುಂಬದ ಯಾವುದೇ ಸದಸ್ಯರು ಚುನಾವಣಾ ರಾಜಕೀಯಕ್ಕೆ ಬರುವ ಪ್ರಶ್ನೆಯೇ ಇಲ್ಲ' ಎಂದು ತಿಳಿಸಿದ್ದಾರೆ.'ಈ ಬಗ್ಗೆ ನಾನು ಬಹಳ ಹಿಂದೆಯೇ ಸ್ಪಷ್ಟಪಡಿಸಿದ್ದೇನೆ. ಆದರೂ ಈ ಬಗ್ಗೆ ಆಗಾಗ ಸೃಷ್ಟಿಯಾಗುವ ವದಂತಿಗಳಿಗೆ ಯಾರೂ ಕಿವಿಗೊಡಬಾರದು' ಎಂದು ವಿನಂತಿಸಿದ್ದಾರೆ.