ಕರ್ನಾಟಕ

karnataka

ETV Bharat / state

ಡಿ.ಕೆ.ಶಿವಕುಮಾರ್ ಚನ್ನಪಟ್ಟಣದಿಂದ ಸ್ಪರ್ಧಿಸುವುದಿಲ್ಲ, ರಾಜಕೀಯ ತಂತ್ರಗಾರಿಕೆ ಅಷ್ಟೇ: ಜಿ.ಟಿ.ದೇವೇಗೌಡ - G T Devegowda - G T DEVEGOWDA

ಡಿ.ಕೆ.ಶಿವಕುಮಾರ್ ಚನ್ನಪಟ್ಟಣ ಉಪ ಚುನಾವಣೆಗೆ ಸ್ಪರ್ಧಿಸುವ ಕುರಿತ ಮಾಧ್ಯಮದವರ ಪ್ರಶ್ನೆಗೆ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಪ್ರತಿಕ್ರಿಯಿಸಿದರು.

GT Devegowda  DK Shivakumar  Mysuru
ಅಧಿಕಾರಿಗಳ ಜೊತೆಗೆ ಶಾಸಕ ಜಿ.ಟಿ.ದೇವೇಗೌಡ ಸಭೆ ನಡೆಸಿದರು. (ETV Bharat)

By ETV Bharat Karnataka Team

Published : Jun 21, 2024, 2:47 PM IST

ಜಿ.ಟಿ.ದೇವೇಗೌಡ (ETV Bharat)

ಮೈಸೂರು:''ಡಿ.ಕೆ.ಶಿವಕುಮಾರ್ ಚನ್ನಪಟ್ಟಣ ಕ್ಷೇತ್ರದ ಉಪ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಈ ಕುರಿತ ಅವರ ಮಾತುಗಳು ರಾಜಕೀಯ ತಂತ್ರಗಾರಿಕೆಯ ಭಾಗವಷ್ಟೇ" ಎಂದು ಜೆಡಿಎಸ್ ಶಾಸಕ ಹಾಗೂ ಪಕ್ಷದ ಕೋರ್ ಕಮಿಟಿಯ ಅಧ್ಯಕ್ಷ ಜಿ.ಟಿ.ದೇವೇಗೌಡ ಹೇಳಿದ್ದಾರೆ.

ಮೈಸೂರಿನ ಜಲದರ್ಶಿನಿ ಅತಿಥಿ ಗೃಹದ ಬಳಿ ಇಂದು ಮಾಧ್ಯಮಗಳ ಜೊತೆ ಅವರು ಮಾತನಾಡಿದರು.

''ಡಿ.ಕೆ.ಶಿವಕುಮಾರ್ ಸಹೋದರ ಡಿ.ಕೆ.ಸುರೇಶ್ ಅವರನ್ನು ಸ್ಪರ್ಧೆಗಿಳಿಸುವ ದೃಷ್ಟಿಯಿಂದ ನಾನೇ ಬಂದರೆ ಮತ ಹಾಕುತ್ತೀರಾ ಎಂದು ಜನರನ್ನು ಕೇಳುತ್ತಿದ್ದಾರೆ. ಚನ್ನಪಟ್ಟಣ ಉಪ ಚುನಾವಣೆ ಎಲ್ಲಾ ಕ್ಷೇತ್ರಗಳಿಗಿಂತ ಜೋರಾಗಿರುತ್ತದೆ. ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರಸ್ವಾಮಿ ಅಥವಾ ನಾನು ಚನ್ನಪಟ್ಟಣದಿಂದ ಸ್ಪರ್ಧಿಸುತ್ತೇವೆ ಎಂದು ಎಲ್ಲಿಯೂ ಹೇಳಿಲ್ಲ. ಸಿ.ಪಿ.ಯೋಗೇಶ್ವರ್ ಜನರ ಅಭಿಪ್ರಾಯ ನನ್ನ ಪರವಾಗಿದೆ ಎಂದಿದ್ದಾರೆ. ಅಂತಿಮವಾಗಿ ಮೈತ್ರಿ ನಾಯಕರು ಈ ಕುರಿತು ತೀರ್ಮಾನಿಸುತ್ತಾರೆ. ಎಲ್ಲಾ ಉಪ ಚುನಾವಣೆಗಳು ಸರ್ಕಾರದ ಪರವಾಗಿಯೇ ಇರುವುದಿಲ್ಲ. ಒಂದೊಂದು ಬಾರಿ ಒಂದೊಂದು ಟ್ರೆಂಡ್ ನಡೆಯುತ್ತದೆ'' ಎಂದರು.

ದರ್ಶನ್ ಪ್ರಕರಣ:''ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸರು ಉತ್ತಮ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಇದರಿಂದಾಗಿ ಪೊಲೀಸರ ಮೇಲಿನ ಗೌರವ ಹೆಚ್ಚಾಗಿದೆ. ಈ ಪ್ರಕರಣದಲ್ಲಿ ಯಾರು ಯಾರ ಪರವಾಗಿಯೂ ಮಾತನಾಡಬಾರದು ಎಂದು ಸಿಎಂ ಸೂಚನೆ ನೀಡಿದ್ದಾರೆ ಎಂಬುದನ್ನು ನೋಡಿದ್ದೇನೆ. ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ'' ಎಂದು ತಿಳಿಸಿದರು.

ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಹೊಟಗಳ್ಳಿ ನಗರಸಭೆ, ಪೌರಯುಕ್ತರು ಹಾಗೂ ಭೋಗಾದಿ, ರಮ್ಮನಹಳ್ಳಿ, ಶ್ರೀರಾಂಪುರ, ಕಡಕೋಳ, ಪಟ್ಟಣ ಪಂಚಾಯಿತಿಯ ಮುಖ್ಯ ಅಧಿಕಾರಿಗಳ ಜೊತೆ ಜಿಟಿಡಿ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಅಲ್ಲಿನ ಸಮಸ್ಯೆಗಳ ಬಗ್ಗೆ ಚರ್ಚಿಸಿದರು. ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆಯುವ ಕೆಡಿಪಿ ಸಭೆಗೆ ಎಲ್ಲಾ ಸಮಸ್ಯೆಗಳನ್ನು ಪಟ್ಟಿ ಮಾಡಿ ತರುವಂತೆ ಅಧಿಕಾರಿಗಳಿಗೆ ತಿಳಿಸಿದ್ದಾರೆ.

ಇದೇ ವೇಳೆ, ಮೈಸೂರು ಹೊರವಲಯದ ಹೊಟ್ಟಗಳ್ಳಿ ನಗರಸಭೆ ಹಾಗೂ ಬೋಗಾಧಿ, ರಮ್ಮನಹಳ್ಳಿ, ಶ್ರೀರಾಂಪುರ ಹಾಗೂ ಕಡಕೋಳ ವ್ಯಾಪ್ತಿಯ ಆಸ್ತಿ, ಖಾತೆ ಹಾಗೂ ಇತರ ವಿಚಾರಗಳಿಂದಾಗಿ ಜನರಿಗೆ ಸಮಸ್ಯೆಯಾಗಿದೆ. ಈ ಸಮಸ್ಯೆಗಳನ್ನು ಬಗೆಹರಿಸುವಂತೆ ಪಟ್ಟಣ ಪಂಚಾಯತಿ ಹಾಗೂ ನಗರಸಭೆಯ ಮುಖ್ಯಾಧಿಕಾರಿಗಳಿಗೆ ಜಿಟಿಡಿ ಸೂಚಿಸಿದರು.

ಇದನ್ನೂ ಓದಿ:'ನನ್ನ ರಾಜಕೀಯ ಅಂತ್ಯದ ಬಗ್ಗೆ ತೀರ್ಮಾನ ಮಾಡುವುದು ಜನರು': ಡಿ.ಕೆ. ಶಿವಕುಮಾರ್ - DCM DK Shivakumar

ABOUT THE AUTHOR

...view details