ರಾಯಚೂರು:ವೈದ್ಯರೊಬ್ಬರುಆತ್ಮಹತ್ಯೆಗೆ ಶರಣಾಗಿರುವ ಘಟನೆ ಲಿಂಗಸುಗೂರು ತಾಲೂಕಿನ ಮುದಗಲ್ ಪಟ್ಟಣದ ಹೊರವಲಯದಲ್ಲಿರುವ ಕ್ವಾರಿ ಬಳಿ ನಡೆದಿದೆ. ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಗಾಣಧಾಳ ಮೂಲದ ರಮೇಶ್ ಜಾದವ್ ತುಳಸಿರಾಮ್(32) ಆತ್ಮಹತ್ಯೆ ಮಾಡಿಕೊಂಡ ವೈದ್ಯ ಎಂದು ಗುರುತಿಸಲಾಗಿದೆ.
ನಿನ್ನೆ(ಗುರುವಾರ) ರಾತ್ರಿ ಮುದಗಲ್ ಪಟ್ಟಣದ ಹೊರವಲಯದಲ್ಲಿರುವ ಕ್ವಾರಿಯ ಬಳಿ ಕಾರು ನಿಲ್ಲಿಸಿ, ಅಲ್ಲಿಂದ ಒಂದು ಕಿ.ಮೀ ಒಳಗಡೆ ನಡೆದುಕೊಂಡು ಹೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
ವಿಷಯ ತಿಳಿದ ಮುದಗಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಮುದಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಮೇಶ್ ಜಾದವ್ ಸಾವಿನ ಬಗ್ಗೆ ಪತ್ನಿ ಅನುಮಾನ ವ್ಯಕ್ತಪಡಿಸಿದ್ದು, ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.