ಹಾವೇರಿ: ಕೋಲ್ಕತ್ತಾದಲ್ಲಿ ನಡೆದ ವೈದ್ಯೆ ವಿದ್ಯಾರ್ಥಿನಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಖಂಡಿಸಿ ಭಾರತೀಯ ವೈದ್ಯ ಸಂಘ 24 ಗಂಟೆ ಒಪಿಡಿ ಬಂದ್ ಮಾಡಿ, ಪ್ರತಿಭಟನೆ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಖಾಸಗಿ ಆಸ್ಪತ್ರೆಗಳು 24 ಗಂಟೆ ಒಪಿಡಿ ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿವೆ. ಹಾವೇರಿ ಜಿಲ್ಲೆಗೂ ಇದರ ಬಿಸಿ ತಟ್ಟಿದೆ.
ರಾಜ್ಯಾದ್ಯಂತ ವೈದ್ಯರ ಮುಷ್ಕರ: ಹಾವೇರಿಯಲ್ಲಿ ಪ್ರತಿಭಟನೆ - Doctors strike - DOCTORS STRIKE
ವೈದ್ಯೆ ವಿದ್ಯಾರ್ಥಿನಿ ಅತ್ಯಾಚಾರ ಮತ್ತು ಕೊಲೆ ಖಂಡಿಸಿ ರಾಷ್ಟ್ರಾದ್ಯಂತ ಪ್ರತಿಭಟನೆ ನಡೆಯುತ್ತಿದ್ದು, ಮುಷ್ಕರದ ಕಾವು ರಾಜ್ಯದಲ್ಲಿಯೂ ಪರಿಣಾಮ ಬೀರುತ್ತಿದೆ.
ಹಾವೇರಿಗೂ ತಟ್ಟಿದ ಪ್ರತಿಭಟನೆ ಕಾವು (ETV Bharat)
Published : Aug 17, 2024, 10:55 AM IST
ಹಾವೇರಿಯಲ್ಲಿ ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳು ಒಪಿಡಿ ಬಂದ್ ಮಾಡಿವೆ. ಹಾವೇರಿ ಜಿಲ್ಲಾಸ್ಪತ್ರೆಯ ಮುಂಭಾಗದಲ್ಲಿ ವೈದ್ಯರು ಮತ್ತು ಆಸ್ಪತ್ರೆಯ ಸಿಬ್ಬಂದಿ ಭಿತ್ತಿಪತ್ರ ಹಿಡಿದು ಆಕ್ರೋಶ ವ್ಯಕ್ತಪಡಿಸಿದರು. ಐಎಂಎ ಸೇರಿದಂತೆ ಹಲವು ಸಂಘಟನೆಗಳ ಸದಸ್ಯರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಕೇವಲ ತುರ್ತು ಸೇವೆ ಹಾಗೂ ಎಮರ್ಜೆನ್ಸಿ ಅಪರೇಷನ್ಗಳಿಗೆ ಅವಕಾಶ ಮಾತ್ರ ಮಾಡಲಾಗುತ್ತಿದೆ.