ಕರ್ನಾಟಕ

karnataka

ಸಿಎಂ - ಡಿಸಿಎಂ ಬಗ್ಗೆ ಬಹಿರಂಗ ಚರ್ಚೆ ಬೇಡ, ಬಾಯಿಗೆ ಬೀಗ ಹಾಕಿ, ಇಲ್ಲವಾದರೆ ಪಕ್ಷದಿಂದ ನೋಟೀಸ್ ಜಾರಿ: ಡಿ.ಕೆ. ಶಿವಕುಮಾರ್ - DK SHIVAKUMAR WARN TO LEADERS

By ETV Bharat Karnataka Team

Published : Jun 29, 2024, 1:04 PM IST

''ಸಿಎಂ- ಡಿಸಿಎಂ ಬಗ್ಗೆ ಬಹಿರಂಗ ಚರ್ಚೆ ಬೇಡಿ. ಇಲ್ಲವಾದರೆ ಪಕ್ಷದಿಂದ ನೋಟೀಸ್ ಜಾರಿ ಮಾಡಲಾಗುವುದು'' ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

Bengaluru  DK Shivakumar
ಡಿ.ಕೆ. ಶಿವಕುಮಾರ್ (ETV Bharat)

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾತನಾಡಿದರು. (ETV Bharat)

ಬೆಂಗಳೂರು:''ಸಿಎಂ- ಡಿಸಿಎಂ ವಿಚಾರವಾಗಿ ಬಹಿರಂಗ ಚರ್ಚೆ ಬೇಡ.‌ ನಿಮ್ಮ ಬಾಯಿಗೆ ಬೀಗ ಹಾಕಿ, ಇಲ್ಲದಿದ್ದರೆ ಪಕ್ಷದಿಂದ ನೋಟಿಸ್ ಜಾರಿ ಮಾಡಬೇಕಾಗುತ್ತದೆ'' ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.

ಸದಾಶಿವ ನಗರ ನಿವಾಸದ ಬಳಿ ಮಾತನಾಡಿದ ಅವರು, ''ಪಕ್ಷವನ್ನು ಎಷ್ಟು ಕಷ್ಟಪಟ್ಟು ಅಧಿಕಾರಕ್ಕೆ ತಂದಿದ್ದೇವೆ. ಸಿಎಂ- ಡಿಸಿಎಂ ವಿಚಾರವಾಗಿ ಬಹಿರಂಗ ಚರ್ಚೆ ಬೇಡ.‌ ನಿಮ್ಮ ಬಾಯಿಗೆ ಬೀಗ ಹಾಕಿ, ಇಲ್ಲದಿದ್ದರೆ ಪಕ್ಷದಿಂದ ನೋಟಿಸ್ ಜಾರಿ ಮಾಡಬೇಕಾಗುತ್ತದೆ. ನನಗೆ ಯಾರ ಶಿಫಾರಸು ಬೇಡ ಆಶೀರ್ವಾದ ಸಾಕು'' ಎಂದು ತಿಳಿಸಿದರು.

''ರಾಜಕಾರಣದ ಸುದ್ದಿಗೆ ನೀವು ಬರಲು ಹೋಗಬೇಡಿ. ಎಲ್ಲಾ ಸ್ವಾಮೀಜಿಗಳಿಗೂ ಕೈ ಮುಗಿಯುವೆ. ಚಂದ್ರಶೇಖರ್ ಸ್ವಾಮೀಜಿ ನನ್ನ ಮೇಲಿನ ಅಭಿಮಾನದಿಂದ ಮಾತನಾಡಿದ್ದಾರೆ'' ಎಂದರು. ಡಿಸಿಎಂ ಹಾಗೂ ಸಿಎಂ ಗೊಂದಲ ವಿಚಾರವಾಗಿ ಪ್ರತಿಕ್ರಿಯಿಸಿ, ''ಯಾವ ಡಿಸಿಎಂ ಚರ್ಚೆಯೂ ಇಲ್ಲ, ಸಿಎಂ ಪ್ರಶ್ನೆಯೂ ಇಲ್ಲ. ಯಾವ ರೆಕಮಂಡೇಷನ್ ಕೂಡ ಅವಶ್ಯಕತೆ ಇಲ್ಲ. ನಾನು ಖರ್ಗೆ ಹಾಗೂ ಸಿದ್ದರಾಮಯ್ಯ ಕೂತು ಪಕ್ಷದ ಹಿತದೃಷ್ಟಿಯಿಂದ ಒಂದು ತೀರ್ಮಾನಕ್ಕೆ ಬಂದಿದ್ದೇವೆ. ಯಾವ ಎಂಎಲ್ಎ ಕೂಡ ಮಾತನಾಡುವ ಅವಶ್ಯಕತೆ ಇಲ್ಲ. ಎಐಸಿಸಿಯವರು ನಾನೂ ವಿಧಿಯಿಲ್ಲದೇ ನೊಟೀಸ್ ನೀಡಬೇಕಾಗುತ್ತದೆ'' ಎಂದು ಎಚ್ಚರಿಕೆ ನೀಡಿದರು.

''ನಿನ್ನೆ ನಾವೆಲ್ಲ ಎಂಪಿ ಹಾಗೂ ಕೇಂದ್ರ ಸಚಿವರನ್ನು ಭೇಟಿ ಮಾಡಿದ್ದೇವೆ. ಎಲ್ಲರೂ ಬಂದಿದ್ದರೂ ಮುಕ್ತವಾಗಿ ಮಾತಾಡಿದ್ದೇವೆ. ನಾವೆಲ್ಲರೂ ಸಹಕಾರ ನೀಡ್ತೇವೆ ಎಂದು ಭರವಸೆ ನೀಡಿದ್ದಾರೆ. ನಿರ್ಮಲಾ ಸೀತಾರಾಮನ್ ಎರಡು ತಾಸು ನಮ್ಮೊಂದಿಗೆ ಸಮಯ ನೀಡಿದರು ಅದು ಮುಖ್ಯ'' ಎಂದರು.

''ಭದ್ರಾ ಮೇಲ್ದಂಡೆ ಯೋಜನೆ ವಿಚಾರದಲ್ಲಿ ಇನ್ನೂ ಸ್ಪಷ್ಟ ಮಾಹಿತಿ ಬಂದಿಲ್ಲ. ಎಲ್ಲರೂ ಮಹದಾಯಿ ಹಾಗೂ ಬೇರೆ ವಿಚಾರದಲ್ಲಿ ಸಹಕರಿಸುತ್ತೇವೆ ಎಂದಿದ್ದಾರೆ. ಮಾಜಿ ಸಿಎಂಗಳಿಗೂ ಅರಿವಿದೆ. ಎಲ್ಲ ಸಮಸ್ಯೆ ಬಗೆ ಹರಿಸುತ್ತಾರೆ'' ಎಂದು ತಿಳಿಸಿದರು.

ಇದನ್ನೂ ಓದಿ:ಸಿಎಂ ಬದಲಾವಣೆ ಚರ್ಚೆ ತರಕಾರಿ ಮಾರುಕಟ್ಟೆ ಸಂತೆಯಲ್ಲ: ಆರ್.ವಿ.ದೇಶಪಾಂಡೆ ಅಸಮಾಧಾನ - RV Deshpande Upset

ABOUT THE AUTHOR

...view details