ರಾಮನಗರ:ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ಚುನಾವಣಾ ರಣಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಇಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಸಿ.ಎನ್ ಮಂಜುನಾಥ್ ಅವರು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದ್ದಾರೆ. ದಂಪತಿ ಸಮೇತ ಆಗಮಿಸಿ ಉಮೇದುವಾರಿಕೆ ಸಲ್ಲಿಸಿದರು. ಮಾಜಿ ಡಿಸಿಎಂ ಡಾ. ಅಶ್ವತ್ಥನಾರಾಯಣ್ ಹಾಗೂ ಪಕ್ಷದ ಮುಖಂಡರು ಸಾಥ್ ನೀಡಿದರು. ಇದಕ್ಕೂ ಮೊದಲು ನಗರದ ಪ್ರಮುಖ ರಸ್ತೆಯಲ್ಲಿ ಮಂಜುನಾಥ್ ಅವರು ರೋಡ್ ಶೋ ನಡೆಸಿದರು.
ರಾಮನಗರ: ಮಡದಿ ಜೊತೆ ಬಂದು ನಾಮಪತ್ರ ಸಲ್ಲಿಸಿದ ಡಾ. ಸಿ.ಎನ್. ಮಂಜುನಾಥ್ - DR MANJUNATH NOMINATION - DR MANJUNATH NOMINATION
ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಇಂದು ಡಾ.ಸಿ.ಎನ್ ಮಂಜುನಾಥ್ ಅವರು ಮಡದಿ ಸಮೇತ ಬಂದು ನಾಮಪತ್ರ ಸಲ್ಲಿಸಿದರು.
Published : Apr 4, 2024, 12:37 PM IST
ನಾಮಪತ್ರ ಸಲ್ಲಿಸಿದ ಬಳಿಕ ಮಾತನಾಡಿದ ಡಾ. ಮಂಜುನಾಥ್, "ಈ ಬಾರಿ ಮೋದಿಯವರಿಗೆ ಹೆಚ್ಚು ಶಕ್ತಿ ನೀಡಬೇಕಾದರೆ ಬಿಜೆಪಿ ಹಾಗೂ ಜೆಡಿಎಸ್ಗೆ ಮತ ನೀಡಬೇಕು. ನರೇಂದ್ರ ಮೋದಿ ಅವರು ಕಳೆದ 10 ವರ್ಷಗಳಲ್ಲಿ ಭ್ರಷ್ಟಾಚಾರ ಮುಕ್ತ ಆಡಳಿತ ನೀಡಿದ್ದು, ಮುಂದೆಯೂ ನಮಗೆ ಭ್ರಷ್ಟಾಚಾರ ಮುಕ್ತ ಆಡಳಿತ ಬೇಕು. ಮೋದಿ ವಿರುದ್ಧ ಒಂದೇ ಒಂದು ಭ್ರಷ್ಟಾಚಾರ ಪ್ರಕರಣ ದಾಖಲಾಗಿಲ್ಲ. ಭ್ರಷ್ಟಾಚಾರ ರಹಿತ ಆಡಳಿತ ನೀಡಿದ್ದಾರೆ. ಹಾಗೆಯೇ ಪ್ರಾಮಾಣಿಕರಾಗಿದ್ದಾರೆ. ಈ ನಿಟ್ಟಿನಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸುವಂತೆ" ಕರೆ ನೀಡಿದರು.
ಇದನ್ನೂ ಓದಿ:ಮಂಡ್ಯದಲ್ಲಿ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ, ಯದುವೀರ್ ಒಡೆಯರ್ ಸಾಥ್ - HD Kumaraswamy