ಚಿಕ್ಕಬಳ್ಳಾಪುರ:ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಇಂದು ತಮ್ಮ ಬೆಂಬಲಿಗರೊಂದಿಗೆ ರೋಡ್ ಶೋ ನಡೆಸಿ ನಾಮಪತ್ರ ಸಲ್ಲಿಸಿದರು. ಮತಯಾಚನೆ ನಡೆಸುವ ವೇಳೆ ಕಣ್ಣೀರು ಹಾಕಿದ ಪ್ರಸಂಗವೂ ನಡೆಯಿತು.
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಎಂಟಿಬಿ ನಾಗರಾಜ್, ಧೀರಜ್ ಮುನಿರಾಜು, ಮಾಜಿ ಶಾಸಕ ಜೆ.ಕೆ.ಕೃಷ್ಣಾರೆಡ್ಡಿ, ಪಿ.ಸಿ.ಮೋಹನ್ ಸೇರಿದಂತೆ ಮೈತ್ರಿ ಪಕ್ಷದ ಪ್ರಭಾವಿಗಳು ರೋಡ್ ಶೋದಲ್ಲಿ ಭಾಗಿಯಾಗಿದ್ದರು. ಈ ಸಂದರ್ಭದಲ್ಲಿ ಕಳೆದ ವಿಧಾನಸಭೆ ಚುನಾವಣೆಯನ್ನು ನೆನಪಿಸಿಕೊಂಡು ಕಣ್ಣೀರು ಹಾಕಿದರು.