ಕರ್ನಾಟಕ

karnataka

ETV Bharat / state

ಬಿಜೆಪಿ ಭದ್ರಕೋಟೆ ಭೇದಿಸಿದ ಕಾಂಗ್ರೆಸ್: ನೂತನ ಸಂಸದೆ ಪ್ರಭಾ, ಸಚಿವ ಎಸ್.ಎಸ್.ಮಲ್ಲಿಕಾರ್ಜುನ್‌ ಹೇಳಿದ್ದೇನು? - Dr Prabha Mallikarjun - DR PRABHA MALLIKARJUN

ಲೋಕಸಭೆ ಚುನಾವಣೆಯಲ್ಲಿ ಗೆದ್ದ ನಂತರ ಡಾ.ಪ್ರಭಾ ಮಲ್ಲಿಕಾರ್ಜುನ್ ಹಾಗೂ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಪ್ರತಿಕ್ರಿಯಿಸಿದ್ದಾರೆ.

dr-prabha-mallikarjun
ಡಾ. ಪ್ರಭಾ ಮಲ್ಲಿಕಾರ್ಜುನ್ ಹಾಗೂ ಸಚಿವ ಎಸ್. ಎಸ್ ಮಲ್ಲಿಕಾರ್ಜುನ್ (ETV Bharat)

By ETV Bharat Karnataka Team

Published : Jun 5, 2024, 8:22 PM IST

ಡಾ. ಪ್ರಭಾ ಮಲ್ಲಿಕಾರ್ಜುನ್ (ETV Bharat)

ದಾವಣಗೆರೆ:ಬೆಣ್ಣೆನಗರಿ ದಾವಣಗೆರೆಯಲ್ಲಿ ಡಾ.ಪ್ರಭಾ ಮಲ್ಲಿಕಾರ್ಜುನ್‌ ಗೆದ್ದಾಗಿದೆ. ಬಿಜೆಪಿ ಭದ್ರಕೋಟೆಯನ್ನು 26 ವರ್ಷಗಳ ಬಳಿಕ ಭೇದಿಸಿದ್ದಾರೆ. ಹೀಗಾಗಿ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್‌ ದಾವಣಗೆರೆ ಲೋಕಸಭಾ ಕ್ಷೇತ್ರದ ಮತದಾರರಿಗೆ ನಮನ ಸಲ್ಲಿಸಿದ್ದಾರೆ.

ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಮತದಾರ ಪ್ರಭುಗಳು ನನ್ನ ಪತ್ನಿಯನ್ನು ಗೆಲ್ಲಿಸಿದ್ದೀರಿ. ಅಭಿವೃದ್ಧಿಯಲ್ಲಿ ನಿಮ್ಮೊಂದಿಗೆ ಸದಾ ಇರುತ್ತೇನೆ. ಶಾಸಕರು, ಕಾರ್ಯಕರ್ತರು, ಮುಖಂಡರು ಎಲ್ಲರೂ ಒಗ್ಗಟ್ಟು ಪ್ರದರ್ಶನ ಮಾಡಿದ್ದಾರೆ. ಇವರ ಒಗ್ಗಟ್ಟು ಪ್ರದರ್ಶನ ಕಾಂಗ್ರೆಸ್ ಜಯಶೀಲರಾಗುವಂತೆ ಮಾಡಿದೆ.

ನಮ್ಮ ಪಕ್ಷಕ್ಕೆ ಗೆಲುವು ಕೊಟ್ಟ ದಾವಣಗೆರೆ ಲೋಕಸಭಾ ಕ್ಷೇತ್ರದ ಮತದಾರರಿಗೆ ತುಂಬು ಹೃದಯದ ಅಭಿನಂದನೆ ಸಲ್ಲಿಸುತ್ತೇನೆ. ಈ ಕ್ಷೇತ್ರದ ಅಭಿವೃದ್ಧಿ ಹಾಗೂ ಆಗುಹೋಗುಗಳ ಬಗ್ಗೆ ಹೆಚ್ಚು ಗಮನಹರಿಸುತ್ತೇನೆ. ಕಾರ್ಯಕರ್ತರು, ಮುಖಂಡರು ಒಳ್ಳೆಯ ಒಗ್ಗಟ್ಟಿನಿಂದ ಕೆಲಸ ಮಾಡಿದ್ದಾರೆ. ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಕ್ಷೇತ್ರದ ಸಮಸ್ಯೆಗಳ ಬಗ್ಗೆ ಲೋಕಸಭೆಯಲ್ಲಿ ಧ್ವನಿ ಎತ್ತುತ್ತೇನೆ: ನೂತನವಾಗಿ ಸಂಸತ್​ಗೆ ಆಯ್ಕೆಯಾದ ಡಾ.ಪ್ರಭಾ ಮಲ್ಲಿಕಾರ್ಜುನ್‌ ಅವರು ಪ್ರತಿಕ್ರಿಯಿಸಿ, ದಾವಣಗೆರೆ ಲೋಕಸಭಾ ಕ್ಷೇತ್ರದ ಮತದಾರರಿಗೆ ನನ್ನ ನಮಸ್ಕಾರಗಳು. 18ನೇ ಲೋಕಸಭಾ ಚುನಾವಣೆಯಲ್ಲಿ ಒಂದು ಅವಕಾಶ ಕೊಟ್ಟಿದ್ದೀರಿ. ಕಾಂಗ್ರೆಸ್ ಅಭ್ಯರ್ಥಿ ಆಗಿದ್ದ ನನಗೆ ಗೆಲುವು ಸಾಧಿಸಲು ಆಸರೆಯಾದ ಕಾರ್ಯಕರ್ತರು, ಶಾಸಕರು, ಮುಖಂಡರು, ಅಭಿಮಾನಿಗಳು ಗೆಲುವಿಗಾಗಿ ಒಂದು ತಿಂಗಳಿನಿಂದ ಶ್ರಮಿಸಿದ್ದೀರಿ ಎಂದರು.

ಯುವಕರ, ವೃದ್ಧರ, ಶ್ರಮಿಕರ ಸಮಸ್ಯೆಗಳಿಗೆ ನಾನು ಸ್ಪಂದಿಸುತ್ತೇನೆ. ಉತ್ತಮವಾಗಿ ಕೆಲಸ ಮಾಡುತ್ತೇನೆ. ದಾವಣಗೆರೆ ಲೋಕಸಭಾ ಕ್ಷೇತ್ರವನ್ನು ಅಭಿವೃದ್ಧಿ ಮಾಡಲು ಶ್ರಮಿಸುತ್ತೇನೆ. ಕ್ಷೇತ್ರದ ಸಮಸ್ಯೆಗಳ ಬಗ್ಗೆ ಲೋಕಸಭೆಯಲ್ಲಿ ಧ್ವನಿ ಎತ್ತುತ್ತೇನೆ. ನಿಮ್ಮ ಈ ಪ್ರಾಮಾಣಿಕ ಶ್ರಮಕ್ಕೆ ನಾನು ಎಂದಿಗೂ ಚಿರಋಣಿಯಾಗಿರುತ್ತೇನೆ ಎಂದು ಹೇಳಿದರು.

ಇದನ್ನೂ ಓದಿ :ದಾವಣಗೆರೆ ಕ್ಷೇತ್ರಕ್ಕೆ 'ಸೊಸೆ ತಂದ ಸೌಭಾಗ್ಯ'; ಡಾ. ಪ್ರಭಾ ನಿವಾಸಕ್ಕೆ ಹರಿದುಬಂದ ಜನಸಾಗರ - Dr Prabha Mallikarjun Massive Flex

ABOUT THE AUTHOR

...view details