ಮೈಸೂರು:ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 1,137 ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳ ಭರ್ತಿಗೆ ಫೆ.25ರಂದು ಲಿಖಿತ ಪರೀಕ್ಷೆ ನಡೆಯಲಿದೆ. ನಕಲು ಮತ್ತು ಹೊರಗಿನ ಮಾಹಿತಿ ಪಡೆದು ಪರೀಕ್ಷೆ ಬರೆಯಲು ಅವಕಾಶ ಸಿಗಬಾರದು ಎಂಬ ಕಾರಣಕ್ಕಾಗಿ ಪರೀಕ್ಷಾರ್ಥಿಗಳಿಗೆ ಕಠಿಣ ವಸ್ತ್ರಸಂಹಿತೆ ಜಾರಿಗೊಳಿಸಲಾಗಿದೆ. ಬೆಳಗ್ಗೆ 11ರಿಂದ 12:30 ಗಂಟೆಯವರೆಗೆ ರಾಜ್ಯಾದ್ಯಂತ ಪರೀಕ್ಷೆ ನಡೆಯಲಿದ್ದು, ಅರ್ಹ ಅಭ್ಯರ್ಥಿಗಳಿಗೆ ಎಸ್ಎಂಎಸ್ ಮೂಲಕ ಮಾಹಿತಿ ನೀಡಿ ಕರೆಪತ್ರದ ಲಿಂಕ್ ಕಳುಹಿಸಲಾಗುತ್ತದೆ.
ವಸ್ತ್ರಸಂಹಿತೆ: ಪುರುಷ ಮತ್ತು ತೃತೀಯ ಲಿಂಗಿ ಪುರುಷ ಅಭ್ಯರ್ಥಿಗಳು ಕಡ್ಡಾಯವಾಗಿ ಅರ್ಧ ತೋಳಿನ ಶರ್ಟ್‌ಗಳನ್ನು ಧರಿಸಬೇಕು. ಸಾಧ್ಯವಾದಷ್ಟು ಕಾಲರ್‌ರಹಿತ ಶರ್ಟ್‌ಗಳನ್ನು ಧರಿಸಬೇಕು. ಜಿಪ್ ಪ್ಯಾಕೆಟ್‌ಗಳು, ದೊಡ್ಡ ಬಟನ್‌ಗಳು ಇರುವ ಶರ್ಟ್‌ಗಳನ್ನು ಧರಿಸತಕ್ಕದ್ದಲ್ಲ. ಜೀನ್ಸ್ ಪ್ಯಾಂಟ್ ಮತ್ತು ಹೆಚ್ಚಿನ ಜೇಬುಗಳಿರುವ ಪ್ಯಾಂಟ್‌ಗಳನ್ನು ಧರಿಸುವಂತಿಲ್ಲ. ಪರೀಕ್ಷಾ ಕೇಂದ್ರದೊಳಗೆ ಶೂಗಳನ್ನು ನಿಷೇಧಿಸಲಾಗಿದೆ. ಅಭ್ಯರ್ಥಿಗಳು ತೆಳುವಾದ ಅಡಿಭಾಗವಿರುವ ಚಪ್ಪಲಿ ಧರಿಸುವುದು. ಕುತ್ತಿಗೆ ಸುತ್ತ ಯಾವುದೇ ಲೋಹದ ಆಭರಣಗಳು ಅಥವಾ ಉಂಗುರ ಮತ್ತು ಕಡಗಳನ್ನು ಧರಿಸುವುದನ್ನು ನಿಷೇಧಿಸಲಾಗಿದೆ.