ಉಡುಪಿ:ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿ ನಿಲ್ಲಿಸಿದ್ದ ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಉಡುಪಿ ಕಡಿಯಾಳಿ ಒಕುಡೆ ಟವರ್ಸ್ ಬಳಿ ಗುರವಾರ ರಾತ್ರಿ ವೇಳೆ ನಡೆದಿದೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ರಸ್ತೆ ಬದಿಯಲ್ಲಿ ದ್ವಿಚಕ್ರ ವಾಹನದಲ್ಲಿ ನಿಂತಿದ್ದ ವೃದ್ಧರೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಮಂಗಳೂರು ನೋಂದಣಿಯ ಸ್ವಿಫ್ಟ್ ಕಾರು ಪಲ್ಟಿಯಾಗಿದ್ದು, ಮಣಿಪಾಲದಿಂದ ಉಡುಪಿ ಕಡೆಗೆ ಹೋಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಅತೀ ವೇಗದಲ್ಲಿ ಕಾರು ಚಲಾಯಿಸಿಕೊಂಡು ಬಂದ ಚಾಲಕ ಒಮ್ಮೆಲೆ ಬ್ರೇಕ್ ಹಾಕಿದ ಪರಿಣಾಮ ಕಾರು ಪಲ್ಟಿಯಾಗಿ ರಸ್ತೆ ಬದಿಯ ವಾಹನಗಳಿಗೆ ಡಿಕ್ಕಿ ಹೊಡೆದಿದೆ.
ಕಾರು ಚಲಾಯಿಸುತ್ತಿದ್ದ ಯುವಕ ಹಾಗೂ ಮತ್ತೊಂದು ಕಡೆಯಲ್ಲಿ ಕುಳಿತಿದ್ದ ಯುವತಿಗೆ ಗಂಭೀರವಾದ ಗಾಯಾವಾಗಿ ಕಾರಲ್ಲೇ ಸಿಲುಕಿ ಕೊಂಡಿದ್ದು, ಸ್ಥಳೀಯರ ಸಹಾಯದಿಂದ ಹೊರತೆಗೆಯಲಾಗಿದೆ. ಅತ್ತ ಕೂಡಲೇ ಮಣಿಪಾಲದ ಆಸ್ಪತ್ರೆಗೆ ಸೇರಿಸಲಾಯಿತು. ರಸ್ತೆ ಬದಿಯಲ್ಲಿ ದ್ವಿಚಕ್ರವಾಹನದಲ್ಲಿ ನಿಂತಿದ್ದ ವೃದ್ಧರಿಗೆ ಗಂಭೀರ ಗಾಯವಾಗಿದೆ. ಉಡುಪಿ ನಗರ ಸಂಚಾರ ಪೊಲೀಸ್ ಠಾಣೆಯವರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.