ತುಮಕೂರು:ಸೋಡಿಯಂ ಬಳಸಿ ಕೃಷಿ ಹೊಂಡದಲ್ಲಿ ಸ್ಫೋಟಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ಬಾಸ್ ಮಾಜಿ ಸ್ಪರ್ಧಿ ಡ್ರೋನ್ ಪ್ರತಾಪ್ ಅವರನ್ನು 3 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಪೊಲೀಸರ ಮನವಿಯ ಮೇರೆಗೆ ಮಧುಗಿರಿ ನ್ಯಾಯಾಧೀಶರು ಕಸ್ಟಡಿಗೆ ನೀಡಿದ್ದಾರೆ.
ಸೋಡಿಯಂ ಬಳಸಿ ಕೃಷಿ ಹೊಂಡದಲ್ಲಿ ಸ್ಫೋಟಿಸಿದಷ್ಟೇ ಅಲ್ಲದೇ ಸ್ಫೋಟಗೊಂಡ ವಿಡಿಯೋವನ್ನು ಡ್ರೋನ್ ಪ್ರತಾಪ್ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದರು. ಯೂಟ್ಯೂಬ್‌ನಲ್ಲೂ ವಿಡಿಯೋ ಹಂಚಿಕೊಂಡಿದ್ದು, ವೈರಲ್ ಆಗಿತ್ತು. ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದ ಪೊಲೀಸರು, ಪ್ರತಾಪ್ ಮತ್ತು ಇತರ ಇಬ್ಬರನ್ನು ಗುರುವಾರ ಬಂಧಿಸಿದ್ದರು. ಬಳಿಕ ಇಂದು ಸ್ಥಳಕ್ಕೆ ಕರೆತಂದು ಮಹಜರು ನಡೆಸಿದ್ದರು.