ಕರ್ನಾಟಕ

karnataka

ETV Bharat / state

ಮೈಸೂರು: ಕುಡಿದ ಅಮಲಿನಲ್ಲಿ ಪತ್ನಿ ಕೊಲೆ ಮಾಡಿದ ಪತಿ - ಮದ್ಯ ಮಾರಾಟ

ಕುಡಿದ ಅಮಲಿನಲ್ಲಿ ಗಂಡ ಹೆಂಡತಿ ನಡುವಿನ ಮಾತಿನ ಚಕಮಕಿ ಪತ್ನಿಯ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

drunk-husband-killed-wife-in-mysore
ಮೈಸೂರು: ಕುಡಿದ ಅಮಲಿನಲ್ಲಿ ಪತ್ನಿಯನ್ನು ಕೊಲೆಗೈದ ಪತಿ

By ETV Bharat Karnataka Team

Published : Jan 20, 2024, 4:02 PM IST

Updated : Jan 20, 2024, 8:02 PM IST

ಮೈಸೂರು: ಕುಡಿದ ಅಮಲಿನಲ್ಲಿ ಪತ್ನಿಯನ್ನು ಕೊಲೆಗೈದ ಪತಿ

ಮೈಸೂರು: ಕುಡಿದ ಅಮಲಿನಲ್ಲಿ ಪತಿ, ಪತ್ನಿಗೆ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ನಂಜನಗೂಡು ತಾಲೂಕಿನ ಕೊತ್ತನಹಳ್ಳಿ ಕಾಲೋನಿಯಲ್ಲಿ ನಡೆದಿದೆ. ಮಾಚಿ (20) ಮೃತ ದುರ್ದೈವಿ. ರವಿ (28) ಬಂಧಿತ ಆರೋಪಿಯಾಗಿದ್ದಾನೆ. ಕುಡಿದ ಅಮಲಿನಲ್ಲಿ ಗಂಡ ಹೆಂಡತಿ ನಡುವಿನ ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿ, ಪತಿ ರವಿ, ಪತ್ನಿಯ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ. ಕುತ್ತಿಗೆ ಮತ್ತು ತಲೆಗೆ ಬಲವಾಗಿ ಹೊಡೆದ ಪರಿಣಾಮ ಪತ್ನಿ ಮಾಚಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ.

ವಿಷಯ ತಿಳಿದು ಸ್ಥಳಕ್ಕೆ ಡಿವೈಎಸ್​ಪಿ ಗೋವಿಂದರಾಜು, ವೃತ್ತ ನಿರೀಕ್ಷಕ ಚಂದ್ರಶೇಖರ್, ಹುಲ್ಲಹಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ರಮೇಶ್ ಕರಕಿಕಟ್ಟಿ ಮತ್ತು ದೊಡ್ಡಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಂಬಂಧಿಕರಿಂದ ದೂರು ಪಡೆದುಕೊಂಡು ಶವವನ್ನು ಮರಣೋತ್ತರ ಪರೀಕ್ಷೆಗಾಗಿ ನಂಜನಗೂಡಿನ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ. ಪ್ರಕರಣ ದಾಖಲಾಗುತ್ತಿದ್ದಂತೆಯೇ ಹುಲ್ಲಹಳ್ಳಿ ಪೊಲೀಸರು ಘಟನೆ ಬಳಿಕ ಸ್ಥಳದಿಂದ ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕೊತ್ತನಹಳ್ಳಿಯಲ್ಲಿ ಅಕ್ರಮ ಮದ್ಯ ಮಾರಾಟ ಮಾಡಲಾಗುತ್ತಿದ್ದು, ಇದರಿಂದ ಕುಡಿದು ಬಂದ ಗಂಡಸರಿಂದ ಮನೆಗಳಲ್ಲಿ ಗಲಾಟೆಗಳು ನಡೆಯುತ್ತಿವೆ. ಈ ಕೊಲೆಗೆ ಅಕ್ರಮವಾಗಿ ಮದ್ಯ ಮಾರಾಟವಾಗುತ್ತಿರುವುದೇ ಮುಖ್ಯ ಕಾರಣವಾಗಿದೆ. ಕೂಡಲೇ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಿ ಎಂದು ಗ್ರಾಮಸ್ಥರು ಒತ್ತಾಯಿಸಿದರು.

ಇದನ್ನೂ ಓದಿ:ಪತ್ನಿಯ ಕೊಂದು ದೇಹವನ್ನು ತುಂಡರಿಸಿ ಕಾಲುವೆಗೆ ಎಸೆದ ಪತಿ!

Last Updated : Jan 20, 2024, 8:02 PM IST

ABOUT THE AUTHOR

...view details