ಕರ್ನಾಟಕ

karnataka

By ETV Bharat Karnataka Team

Published : 6 hours ago

ETV Bharat / state

ದಸರಾ ಹಬ್ಬ: ರೈಲುಗಳಿಗೆ ಹೆಚ್ಚುವರಿ ಬೋಗಿ ಜೋಡಣೆ - Additional coaches for Trains

ಇನ್ನೇನು ದಸರಾ ಉತ್ಸವ ಆರಂಭಗೊಳ್ಳುತ್ತಿದೆ. ಈ ಹಿನ್ನೆಲೆ ರೈಲಿನಲ್ಲಿ ಪ್ರಯಾಣಿಸುವ ಸಂಖ್ಯೆ ಹೆಚ್ಚಾಗುತ್ತದೆ. ಇದನ್ನು ಗಮನದಲ್ಲಿಟ್ಟುಕೊಂಡ ರೈಲ್ವೆ ಇಲಾಖೆ ರೈಲುಗಳಿಗೆ ಹೆಚ್ಚುವರಿ ಬೋಗಿಗಳನ್ನು ಜೋಡಿಸಲಿದೆ.

DUSSEHRA FESTIVAL  HUBLI RAILWAY DEPARTMENT  RAILWAY DETAILS  TRAIN JOURNEY
ದಸರಾ ಹಬ್ಬ: ರೈಲುಗಳಿಗೆ ಹೆಚ್ಚುವರಿ ಬೋಗಿ ಜೋಡಣೆ (ETV Bharat)

ಹುಬ್ಬಳ್ಳಿ:ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಮತ್ತು ಹೆಚ್ಚುವರಿ ದಟ್ಟಣೆ ತೆರವುಗೊಳಿಸಲು ಈ ಕೆಳಗಿನ ರೈಲುಗಳಿಗೆ ಹೆಚ್ಚುವರಿ ಬೋಗಿಗಳನ್ನು ತಾತ್ಕಾಲಿಕವಾಗಿ ಜೋಡಿಸಲಾಗುತ್ತಿದೆ ಎಂದು ಪೂರ್ವ ಕರಾವಳಿ ರೈಲ್ವೆಯು ಸೂಚಿಸಿದೆ. ಅವುಗಳ ವಿವರ ಈ ಕೆಳಗಿನಂತಿವೆ..

  1. ಅಕ್ಟೋಬರ್ 2 ರಿಂದ 11, 2024 ರವರೆಗೆ ಭುವನೇಶ್ವರದಿಂದ ಹೊರಡುವ ರೈಲು ಸಂಖ್ಯೆ 18463 ಭುವನೇಶ್ವರ - ಕೆಎಸ್ಆರ್ ಬೆಂಗಳೂರು ಪ್ರಶಾಂತಿ ಡೈಲಿ ಎಕ್ಸ್ ಪ್ರೆಸ್ ರೈಲಿಗೆ ಹೆಚ್ಚುವರಿ ಒಂದು ಸ್ಲೀಪರ್ ಕ್ಲಾಸ್ ಬೋಗಿ ಜೋಡಿಸಲಾಗುತ್ತಿದೆ.
  2. ಅಕ್ಟೋಬರ್ 3 ರಿಂದ 12, 2024 ರವರೆಗೆ ಕೆಎಸ್ಆರ್ ಬೆಂಗಳೂರಿನಿಂದ ಹೊರಡುವ ರೈಲು ಸಂಖ್ಯೆ 18464 ಕೆಎಸ್ಆರ್ ಬೆಂಗಳೂರು - ಭುವನೇಶ್ವರ ಪ್ರಶಾಂತಿ ಡೈಲಿ ಎಕ್ಸ್ ಪ್ರೆಸ್ ರೈಲಿಗೆ ಹೆಚ್ಚುವರಿ ಒಂದು ಸ್ಲೀಪರ್ ಕ್ಲಾಸ್ ಬೋಗಿ ಜೋಡಿಸಲಾಗುತ್ತಿದೆ.
  3. ಅಕ್ಟೋಬರ್ 6 ರಿಂದ 17, 2024 ರವರೆಗೆ ಭುವನೇಶ್ವರದಿಂದ ಹೊರಡುವ ರೈಲು ಸಂಖ್ಯೆ 12845 ಭುವನೇಶ್ವರ - ಎಸ್ಎಂವಿಟಿ ಬೆಂಗಳೂರು ಸಾಪ್ತಾಹಿಕ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲಿಗೆ ಹೆಚ್ಚುವರಿ ಒಂದು ಸಾಮಾನ್ಯ ದ್ವಿತೀಯ ದರ್ಜೆ ಬೋಗಿ ಜೋಡಿಸಲಾಗುತ್ತಿದೆ.
  4. ಅಕ್ಟೋಬರ್ 7 ರಿಂದ 18, 2024 ರವರೆಗೆ ಎಸ್ಎಂವಿಟಿ ಬೆಂಗಳೂರಿನಿಂದ ಹೊರಡುವ ರೈಲು ಸಂಖ್ಯೆ 12846 ಎಸ್ಎಂವಿಟಿ ಬೆಂಗಳೂರು-ಭುವನೇಶ್ವರ ಸಾಪ್ತಾಹಿಕ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲಿಗೆ ಹೆಚ್ಚುವರಿ ಒಂದು ಸಾಮಾನ್ಯ ದ್ವಿತೀಯ ದರ್ಜೆ ಬೋಗಿ ಜೋಡಿಸಲಾಗುತ್ತಿದೆ.
  • ರಾಮಗಿರಿ, ಬೀರೂರು ಮತ್ತು ಆಲೂರು ನಿಲ್ದಾಣ: ರೈಲುಗಳ ತಾತ್ಕಾಲಿಕ ನಿಲುಗಡೆ ಮುಂದುವರಿಕೆ

ರಾಮಗಿರಿ, ಬೀರೂರು ಮತ್ತು ಆಲೂರು ನಿಲ್ದಾಣಗಳಲ್ಲಿ ಈ ಕೆಳಗಿನ ರೈಲುಗಳಿಗೆ ಇದ್ದ ಒಂದು ನಿಮಿಷದ ತಾತ್ಕಾಲಿಕ ನಿಲುಗಡೆಯನ್ನು ನೈಋತ್ಯ ರೈಲ್ವೆ ಮುಂದುವರಿಸಲು ನಿರ್ಧರಿಸಿದೆ.

ರೈಲು ಸಂಖ್ಯೆ 17325/17326 ಬೆಳಗಾವಿ - ಮೈಸೂರು-ಬೆಳಗಾವಿ ವಿಶ್ವಮಾನವ ಡೈಲಿ ಎಕ್ಸ್ ಪ್ರೆಸ್ ಮತ್ತು ರೈಲು ಸಂಖ್ಯೆ 17391/17392 ಕೆಎಸ್ಆರ್ ಬೆಂಗಳೂರು - ಎಸ್ಎಸ್ಎಸ್ ಹುಬ್ಬಳ್ಳಿ- ಕೆಎಸ್ಆರ್ ಬೆಂಗಳೂರು ಡೈಲಿ ಎಕ್ಸ್ ಪ್ರೆಸ್ ರೈಲುಗಳಿಗೆ ರಾಮಗಿರಿ ನಿಲ್ದಾಣದಲ್ಲಿ ಇರುವ ಒಂದು ನಿಮಿಷದ ತಾತ್ಕಾಲಿಕ ನಿಲುಗಡೆಯನ್ನು ಅಕ್ಟೋಬರ್ 1 ರಿಂದ ಡಿಸೆಂಬರ್ 31, 2024 ರವರೆಗೆ ಮೂರು ತಿಂಗಳ ಕಾಲ ಮುಂದುವರಿಸಲಾಗುತ್ತಿದೆ.

ರೈಲು ಸಂಖ್ಯೆ 16587/16588 ಯಶವಂತಪುರ-ಬಿಕಾನೇರ್-ಯಶವಂತಪುರ ದ್ವಿ-ಸಾಪ್ತಾಹಿಕ ಎಕ್ಸ್ ಪ್ರೆಸ್ ರೈಲುಗಳಿಗೆ ಬೀರೂರು ನಿಲ್ದಾಣದಲ್ಲಿ ಇರುವ ಒಂದು ನಿಮಿಷದ ತಾತ್ಕಾಲಿಕ ನಿಲುಗಡೆ ಅಕ್ಟೋಬರ್ 1 ರಿಂದ ಡಿಸೆಂಬರ್ 31, 2024 ರವರೆಗೆ ಮೂರು ತಿಂಗಳು ಮುಂದುವರಿಸಲಾಗುತ್ತಿದೆ.

ರೈಲು ಸಂಖ್ಯೆ 16515/16516 ಯಶವಂತಪುರ - ಕಾರವಾರ - ಯಶವಂತಪುರ ಟ್ರೈ-ವೀಕ್ಲಿ ಎಕ್ಸ್ ಪ್ರೆಸ್, ರೈಲು ಸಂಖ್ಯೆ 16575/16576 ಯಶವಂತಪುರ-ಮಂಗಳೂರು ಜಂಕ್ಷನ್-ಯಶವಂತಪುರ ಗೋಮಟೇಶ್ವರ ಟ್ರೈ-ವೀಕ್ಲಿ ಎಕ್ಸ್ ಪ್ರೆಸ್ ಮತ್ತು ರೈಲು ಸಂಖ್ಯೆ 16539/16540 ಯಶವಂತಪುರ-ಮಂಗಳೂರು ಜಂಕ್ಷನ್-ಯಶವಂತಪುರ ಸಾಪ್ತಾಹಿಕ ಎಕ್ಸ್ ಪ್ರೆಸ್ ರೈಲುಗಳಿಗೆ ಆಲೂರು ನಿಲ್ದಾಣದಲ್ಲಿದ್ದ ಒಂದು ನಿಮಿಷದ ತಾತ್ಕಾಲಿಕ ನಿಲುಗಡೆಯನ್ನು ನವೆಂಬರ್ 30 ರವರೆಗೆ ಮುಂದುವರಿಸಲಾಗಿದೆ ಎಂದು ನೈರುತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ
ಡಾ. ಮಂಜುನಾಥ ಕನಮಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಓದಿ:ಓಲಾ ಚಾಲಕನಿಂದ ಕಿರುಕುಳ: ಸಂತ್ರಸ್ತೆಗೆ ₹5 ಲಕ್ಷ ಪರಿಹಾರ ನೀಡುವಂತೆ ಹೈಕೋರ್ಟ್ ನಿರ್ದೇಶನ - Harassement Case

ABOUT THE AUTHOR

...view details