ಕರ್ನಾಟಕ

karnataka

ETV Bharat / state

ಮುಂದಿನ ನಡೆ ಕುರಿತು ಒಕ್ಕಲಿಗರ ಸಂಘದ ಜೊತೆ ಮಾತುಕತೆ: ನಾಳೆ ನಿರ್ಧಾರ ಪ್ರಕಟಿಸಲಿರುವ ಸದಾನಂದ ಗೌಡ - Sadananda Gowda meeting

ಒಕ್ಕಲಿಗರ ಸಂಘದ ಜೊತೆ ಮಾತುಕತೆ ನಡೆಸಿದ ಸಂಸದ, ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದಗೌಡರು, ಮುಂದಿನ ರಾಜಕೀಯ ನಡೆ ಕುರಿತು ನಾಳೆ ತಮ್ಮ ನಿರ್ಧಾರ ಪ್ರಕಟಿಸುವುದಾಗಿ ತಿಳಿಸಿದ್ದಾರೆ.

ಒಕ್ಕಲಿಗರ ಸಂಘದ ಜೊತೆ ಮಾತುಕತೆ
ಒಕ್ಕಲಿಗರ ಸಂಘದ ಜೊತೆ ಮಾತುಕತೆ

By ETV Bharat Karnataka Team

Published : Mar 19, 2024, 5:36 PM IST

Updated : Mar 19, 2024, 7:30 PM IST

ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದಗೌಡ

ಬೆಂಗಳೂರು: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಮುಂದಿನ ರಾಜಕೀಯ ನಿರ್ಧಾರ ಕೈಗೊಳ್ಳುವ ಕುರಿತು ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರ ಜೊತೆ ಸಂಸದ ಡಿವಿ ಸದಾನಂದ ಗೌಡ ಇಂದು ಚರ್ಚೆ ನಡೆಸಿದ್ದು, ನಾಳೆ ತಮ್ಮ ನಿರ್ಧಾರ ಪ್ರಕಟ ಮಾಡುವುದಾಗಿ ತಿಳಿಸಿದ್ದಾರೆ. ಚಾಮರಾಜಪೇಟೆಯ ಕಿಮ್ಸ್​​ನಲ್ಲಿ ನಡೆದ ಸಭೆಯಲ್ಲಿ ಮುಂದಿನ ನಿಲುವಿನ ಬಗ್ಗೆ ಚರ್ಚೆ ನಡೆಸಿದರು. ಒಕ್ಕಲಿಗ ಮುಖಂಡರ ಅಭಿಪ್ರಾಯ ಪಡೆದುಕೊಂಡ ಡಿವಿಎಸ್​, ತಮಗಾಗಿರುವ ನೋವು, ಅಸಮಾಧಾನವನ್ನು ತೋಡಿಕೊಂಡರು.

ಒಕ್ಕಲಿಗರ ಸಂಘದ ಪದಾಧಿಕಾರಿಗಳ ಜತೆ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸದಾನಂದ ಗೌಡ, ಒಕ್ಕಲಿಗರ ಸಂಘದ ಅಧ್ಯಕ್ಷರು, ನಿರ್ದೇಶಕರ ಜತೆ ಸಭೆ ನಡೆಸಿದ್ದೇನೆ. ಒಂದಷ್ಟು ವಿಚಾರಗಳನ್ನು ಸಭೆಯಲ್ಲಿ ಪ್ರಸ್ತಾಪ ಮಾಡಲಾಗಿದೆ. ಈಗ ಯಾವುದನ್ನೂ ನಾನು ಹೇಳಲ್ಲ, ನಾಳೆ ಸುದ್ದಿಗೋಷ್ಠಿ ಕರೆಯುತ್ತೇನೆ, ನಾಳೆಯೇ ಎಲ್ಲ ಮಾತನಾಡುತ್ತೇನೆ ಎಂದರು.

ಒಕ್ಕಲಿಗರ ಸಂಘದ ಜೊತೆ ಮಾತುಕತೆ

ಒಕ್ಕಲಿಗರ ಸಂಘದ ಅಧ್ಯಕ್ಷ ಹನುಮಂತಯ್ಯ ಮಾತನಾಡಿ, ನಮ್ಮ ಒಕ್ಕಲಿಗ ಸಮುದಾಯಕ್ಕೆ ಮೂರೂ ಪಕ್ಷಗಳಲ್ಲಿ ಟಿಕೆಟ್ ಕೊಡುವಲ್ಲಿ ಅನ್ಯಾಯ ಆಗಿದೆ. ಬಿಜೆಪಿಯಲ್ಲಿ ಲಿಂಗಾಯತ ಸಮುದಾಯಕ್ಕೆ ಎಂಟು ಟಿಕೆಟ್ ಕೊಡಲಾಗಿದೆ. ಒಕ್ಕಲಿಗ ಸಮುದಾಯಕ್ಕೆ ಎರಡೇ ಟಿಕೆಟ್ ಕೊಡಲಾಗಿದೆ. ಒಕ್ಕಲಿಗ ಸಮುದಾಯಕ್ಕೂ ಎಂಟು ಕಡೆ ಟಿಕೆಟ್ ಕೊಡಬೇಕು. ಬಿಜೆಪಿಯಲ್ಲಿ ಸಿ ಟಿ ರವಿ, ಪ್ರತಾಪ್ ಸಿಂಹಗೆ ಟಿಕೆಟ್ ಕೊಟ್ಟಿಲ್ಲ. ಸದಾನಂದ ಗೌಡರು ಏನೇ ನಿರ್ಧಾರ ತೆಗೆದುಕೊಂಡರೂ ನಮ್ಮ ಬೆಂಬಲ ಇರುತ್ತದೆ. ನಾಳೆ ಅವರೇ ಸುದ್ದಿಗೋಷ್ಠಿ ಮಾಡಿ ಎಲ್ಲ ಹೇಳುತ್ತಾರೆ. ನಮ್ಮ ಸಮುದಾಯಕ್ಕೆ ಅನ್ಯಾಯವಾದರೆ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ರವಾನಿಸಿದರು.

ಇದನ್ನೂ ಓದಿ:ಸೋಷಿಯಲ್ ಮೀಡಿಯಾದಲ್ಲಿ ಧನ್ಯವಾದ ಸಲ್ಲಿಸಿದ ಸದಾನಂದ ಗೌಡ

ಇನ್ನು ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಟಿಕೆಟ್​ ಅನ್ನು ಈ ಬಾರಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಘೋಷಣೆಯಾಗುತ್ತಿದ್ದಂತೆ ಸಂಸದ ಡಿವಿ ಸದಾನಂದ ಗೌಡ ಅವರು ಸಾಮಾಜಿಕ ಜಾಲತಾಣದ ಮೂಲಕ ಎಲ್ಲರಿಗೂ ಧನ್ಯವಾದ ಹೇಳುವ ಮೂಲಕ ಪರೋಕ್ಷವಾಗಿ ನೋವು ಸಹ ಹೊರಹಾಕಿದ್ದರು.

ಒಕ್ಕಲಿಗರ ಸಂಘದ ಜೊತೆ ಮಾತುಕತೆ

''ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ನನ್ನೆಲ್ಲಾ ಪ್ರೀತಿಯ ಬಂಧುಗಳೇ, ನನಗೆ ಕಳೆದ 10 ವರ್ಷಗಳ ಕಾಲ ಈ ಕ್ಷೇತ್ರದ ಲೋಕಸಭಾ ಸದಸ್ಯನಾಗಿ, ನಿಮ್ಮ ಕೆಲಸ ಮಾಡುವ ಅವಕಾಶವನ್ನು ಮಾಡಿಕೊಟ್ಟು ಆಶೀರ್ವಾದ ಮಾಡಿದ್ದೀರಿ. ನಾನು ನನ್ನ ಶಕ್ತಿ ಮೀರಿ ನಿಮ್ಮ ಸೇವೆಯನ್ನು ಮಾಡಲು ಪ್ರಯತ್ನಿಸಿದ್ದೇನೆ. ನಿಮ್ಮ ಆಶೀರ್ವಾದದಿಂದ ಕೇಂದ್ರದಲ್ಲಿ ನಮ್ಮೆಲ್ಲರ ಪ್ರೀತಿಯ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಜೊತೆಯಲ್ಲಿ 7 ವರ್ಷಗಳ ಕಾಲ ಕ್ಯಾಬಿನೆಟ್ ಮಂತ್ರಿಯಾಗಿ ಕೆಲಸ ಮಾಡುವ ಅವಕಾಶವನ್ನು ಕೂಡ ಕಲ್ಪಿಸಿದ್ದೀರಿ. ನಾನು ನಿಮ್ಮೆಲ್ಲರಿಗೂ ಚಿರಋಣಿ. ನಿಮ್ಮ ಜೊತೆಗೆ ಇನ್ನು ಮುಂದೆಯೂ ಇರುತ್ತೇನೆ. ಎಲ್ಲರಿಗೂ ನನ್ನ ಅಂತರಾಳದ ಹೃದಯ ತುಂಬಿದ ಧನ್ಯವಾದಗಳು'' ಎಂದು ಬರೆದುಕೊಂಡಿದ್ದಾರೆ.

Last Updated : Mar 19, 2024, 7:30 PM IST

ABOUT THE AUTHOR

...view details