ಕರ್ನಾಟಕ

karnataka

ETV Bharat / state

ಬಿಟ್‌ಕಾಯಿನ್ ಅಕ್ರಮ ಪ್ರಕರಣ: ಡಿವೈಎಸ್​ಪಿ ಶ್ರೀಧರ್ ಪೂಜಾರ್ ಬಂಧನ

ಬಿಟ್‌ಕಾಯಿನ್ ಹಗರಣ ಸಂಬಂಧ ಡಿವೈಎಸ್​ಪಿ ಶ್ರೀಧರ್ ಪೂಜಾರ್ ಅವರನ್ನು ಎಸ್​ಐಟಿ ಅಧಿಕಾರಿಗಳು ಬಂಧಿಸಿದ್ದಾರೆ.

ಬಿಟ್ ಕಾಯಿನ್ ಅಕ್ರಮ ಪ್ರಕರಣ: ಡಿವೈಎಸ್​ಪಿ ಶ್ರೀಧರ್ ಪೂಜಾರ್ ಬಂಧನ
ಬಿಟ್ ಕಾಯಿನ್ ಅಕ್ರಮ ಪ್ರಕರಣ (ಸಾಂದರ್ಭಿಕ ಚಿತ್ರ ETV Bharat)

By ETV Bharat Karnataka Team

Published : Oct 7, 2024, 9:22 PM IST

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದ ತನಿಖಾ ಕಾಲದಲ್ಲಿ ಸಾಕ್ಷ್ಯಗಳನ್ನು ತಿರುಚಿದ ಆರೋಪ ಎದುರಿಸುತ್ತಿರುವ ಡಿವೈಎಸ್​ಪಿ ಶ್ರೀಧರ್ ಪೂಜಾರ್ ಅವರನ್ನು ಎಸ್​ಐಟಿ ಅಧಿಕಾರಿಗಳು ಇಂದು ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರಕರಣದ ಮರುತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದ ಶ್ರೀಧರ್ ಪೂಜಾರ್ ಅವರನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.

ಬಿಟ್‌ಕಾಯಿನ್ ಹಗರಣದಲ್ಲಿ ಈ ಹಿಂದೆ ಬಂಧಿಸಲ್ಪಟ್ಟ ಪ್ರಮುಖ ಆರೋಪಿ ಶ್ರೀಕೃಷ್ಣ ಅಲಿಯಾಸ್ ಶ್ರೀಕಿಯನ್ನು ಡಿವೈಎಸ್​ಪಿ ಶ್ರೀಧರ್ ಪೂಜಾರ್ ವಿಚಾರಣೆ ನಡೆಸಿದ್ದರು. ಅದೇ ಸಂದರ್ಭದಲ್ಲಿ ಸಾಕ್ಷ್ಯಗಳನ್ನು ತಿರುಚಿದ ಆರೋಪ ಶ್ರೀಧರ್ ಪೂಜಾರ್ ವಿರುದ್ಧ ಕೇಳಿ ಬಂದಿತ್ತು. ಪ್ರಕರಣದ ಮರು ತನಿಖೆಗಾಗಿ ರಾಜ್ಯ ಸರ್ಕಾರ ಎಸ್​ಐಟಿ ರಚಿಸಿದ್ದ ಬಳಿಕ ಕಾಟನ್​​ಪೇಟೆ ಠಾಣೆಯಲ್ಲಿ ಶ್ರೀಧರ್​ ಪೂಜಾರ್ ವಿರುದ್ಧವೇ ಹೊಸ ಎಫ್​ಐಆರ್​​ ದಾಖಲಾಗಿತ್ತು. ಆ ಹೊಸ ಪ್ರಕರಣದ ತನಿಖೆಯನ್ನೂ ಸಹ ಸದ್ಯ ಎಸ್‌ಐಟಿ ಅಧಿಕಾರಿಗಳು ನಡೆಸುತ್ತಿದ್ದಾರೆ.

ಸಿಐಡಿ ವಿಚಾರಣೆಗೆ ಹಾಜರಾಗದ​​​​ ಶ್ರೀಧರ್ ಪೂಜಾರ್ ಅವರನ್ನು ನ್ಯಾಯಾಲಯ ಘೋಷಿತ ಆರೋಪಿ ಎಂದು ವಾರಂಟ್​ ಜಾರಿ ಮಾಡಿತ್ತು. ವಾರೆಂಟ್ ಪ್ರಶ್ನಿಸಿ ಶ್ರೀಧರ್ ಪೂಜಾರ್ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ್ದ ಹೈಕೋರ್ಟ್ ಬಳಿಕ ಘೋಷಿತ ಆರೋಪಿ ಎಂಬ ಆದೇಶವನ್ನು ರದ್ದುಪಡಿಸಿತ್ತು.

ಇದನ್ನೂ ಓದಿ: 20 ವರ್ಷಗಳಿಂದ ಗುತ್ತಿಗೆ ಸೇವೆ: ಕಾಯಂಗೊಳಿಸಲು ಹೈಕೋರ್ಟ್ ಆದೇಶ

ABOUT THE AUTHOR

...view details