ಬೆಂಗಳೂರು:ನಿವೇಶನ ಹಂಚಿಕೆಯಲ್ಲಿನ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) 6 ಮಂದಿ ಸಿಬ್ಬಂದಿ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ (ಇ.ಡಿ) ನೋಟಿಸ್ ಜಾರಿಗೊಳಿಸಿದೆ.
ಸಮಗ್ರ ದಾಖಲೆಗಳ ಸಹಿತ ಬೆಂಗಳೂರಿನಲ್ಲಿರುವ ಇ.ಡಿ ಕಚೇರಿಗೆ ಹಾಜರಾಗುವಂತೆ ನೋಟಿಸ್‌ನಲ್ಲಿ ಸೂಚಿಸಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರಿಗೆ ಮುಡಾದಿಂದ ನಿವೇಶನ ಹಂಚಿಕೆಯ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಇ.ಡಿ, ಇತ್ತೀಚೆಗೆ ಮೈಸೂರಿನ ಮುಡಾ ಕಚೇರಿ ಮತ್ತು ಮೈಸೂರು ತಾಲೂಕು ಕಚೇರಿಯಲ್ಲಿ ದಾಖಲೆ ಪರಿಶೀಲನೆ ನಡೆಸಿತ್ತು.
ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರ ಸಹೋದರ ಮಲ್ಲಿಕಾರ್ಜುನ ಸ್ವಾಮಿ ಅವರಿಗೆ ಜಮೀನು ಮಾರಾಟ ಮಾಡಿದ್ದ ದೇವರಾಜು ಅವರಿಗೆ ಸಂಬಂಧಿಸಿದ ಸ್ಥಳಗಳಲ್ಲಿಯೂ ಇ.ಡಿ ಅಧಿಕಾರಿಗಳು ಪರಿಶೀಲನೆ ಕೈಗೊಂಡಿದ್ದರು.
ಇದನ್ನೂ ಓದಿ:ಮುಡಾ ವಿವಾದಿತ ಜಮೀನಿನ ಫೋಟೋಗಳನ್ನು ತನಿಖೆಗೆ ಬಳಸಿ: ಲೋಕಾಯುಕ್ತರಿಗೆ ಸ್ನೇಹಮಯಿ ಕೃಷ್ಣ ಮನವಿ