ಕರ್ನಾಟಕ

karnataka

ETV Bharat / state

ಮುಡಾ ಪ್ರಕರಣ; ಮುಂದುವರೆದ ಇಡಿ ದಾಳಿ, ದಾಖಲೆಗಳ ಪರಿಶೀಲನೆ - ED RAID

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿಯಿಂದ ಮೈಸೂರಿನಲ್ಲಿ ಇಂದೂ ದಾಳಿ ಮುಂದುವರೆದಿದೆ.

ED
ಇಡಿ ದಾಳಿಯಿಂದ ಮುಂದುವರೆದ ದಾಳಿ (ETV Bharat)

By ETV Bharat Karnataka Team

Published : Oct 29, 2024, 12:20 PM IST

Updated : Oct 29, 2024, 1:04 PM IST

ಮೈಸೂರು :ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದಿಂದ ಬಿಲ್ಡರ್‌ ಮನೆ ಹಾಗೂ ಕೆಲ ಆಫೀಸ್​ಗಳ ಮೇಲೆ ಮೈಸೂರಿನಲ್ಲಿ ದಾಳಿ ಮುಂದುವರೆದಿದೆ.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಸೋಮವಾರ ಬೆಂಗಳೂರು, ಮೈಸೂರು ಸೇರಿದಂತೆ ಹಲವು ಕಡೆ ಏಕ ಕಾಲಕ್ಕೆ ದಾಳಿ ನಡೆಸಿದೆ. ಸೋಮವಾರ ಬೆಳಗ್ಗೆ 8 ಗಂಟೆಗೆ ಐದು ಜನ ಇಡಿ ಅಧಿಕಾರಿಗಳ ತಂಡ ಮೈಸೂರು ನಗರದ ಇನ್ಕಲ್​ನಲ್ಲಿರುವ ರಾಕೇಶ್‌ ಪಾಪಣ್ಣ ಹಾಗೂ ಅವರ ತಂದೆ ಪಾಪಣ್ಣ ಅವರನ್ನ ತನಿಖೆಗೆ ಒಳಪಡಿಸಿ, ಇಂದೂ ಕೂಡಾ ಕೆಲವು ದಾಖಲೆಗಳನ್ನ ಪರಿಶೀಲನೆ ನಡೆಸಿತು.

ಇಡಿ ಅಧಿಕಾರಿಗಳಿಂದ ಮುಂದುವರೆದ ದಾಳಿ (ETV Bharat)

ಆರೋಪವೇನು? : ಮುಡಾದ 50:50 ಅನುಪಾತದಲ್ಲಿ 98 ಸಾವಿರ ಚದರ ಅಡಿ ಜಾಗವನ್ನ ಒಂದೇ ಬಾರಿ ಮಂಜೂರು ಮಾಡಿಸಿಕೊಂಡಿದ್ದಾರೆ ಎಂದು ರಾಕೇಶ್​ ಪಾಪಣ್ಣ ವಿರುದ್ಧ ಶಾಸಕ ಶ್ರೀವತ್ಸ ಆರೋಪ ಮಾಡಿ, ದಾಖಲಾತಿ ಬಿಡುಗಡೆ ಮಾಡಿದ್ದರು. ಇದರ ಜತೆಗೆ ದೂರುದಾರ ಸ್ನೇಹಮಯಿ ಕೃಷ್ಣ ಈ ಸಂಬಂಧ ದಾಖಲಾತಿಗಳನ್ನ ಜಾರಿ ನಿರ್ದೇಶನಾಲಯಕ್ಕೆ ನೀಡಿ, ತನಿಖೆ ನಡೆಸುವಂತೆ ಮನವಿ ಮಾಡಿದ್ದರು.

ಮೈಸೂರಿನಲ್ಲಿ ಮತ್ತೊಬ್ಬ ಬಿಲ್ಡರ್‌ ಮನೆ ಮೇಲೆ ಇಡಿ ದಾಳಿ :ಮುಡಾ ಹಗರಣದ ತನಿಖೆಯಲ್ಲಿ ಹಣಕಾಸಿನ ವಹಿವಾಟಿನ ಬಗ್ಗೆ ಮಾಹಿತಿ ಪಡೆದು, ಇಲ್ಲಿ ನಡೆದಿರುವ ಅವ್ಯವಹಾರಗಳ ತನಿಖೆಗೆ ಇಳಿದಿರುವ ಇಡಿ, ನಿನ್ನೆ ರಾತ್ರಿ 11 ಗಂಟೆಗೆ ಮೈಸೂರಿನ ನ್ಯೂ ಕಾಂತ್‌ ರಾಜ್‌ ಅರಸ್‌ ರಸ್ತೆಯಲ್ಲಿರುವ ಜಯರಾಮು ಎಂಬುವವರಿಗೆ ಸೇರಿದ ಕಚೇರಿ ಹಾಗೂ ಅವರ ಶ್ರೀರಾಂಪುರದಲ್ಲಿರುವ ಮನೆಯ ಮೇಲೆ ದಾಳಿ ಮುಂದುವರೆಸಿದೆ.

ಸೋಮವಾರ ರಾತ್ರಿ 11 ಗಂಟೆಯಿಂದ ಮಂಗಳವಾರ ಬೆಳಗಿನ ಜಾವ 3 ಗಂಟೆವರೆಗೆ ದಾಖಲೆಗಳನ್ನ ಪರಿಶೀಲನೆ ನಡೆಸಿ ಮತ್ತೆ ಇಂದು ಬೆಳಗ್ಗೆ ಅವರ ಕಚೇರಿಯಲ್ಲಿ ಶೋಧ ಮುಂದುವರೆಸಿದ್ದಾರೆ.

ಹಲವು ಬಿಲ್ಡರ್‌ಗಳ ಕಚೇರಿ ಮೇಲೆ ದಾಳಿ ಸಾಧ್ಯತೆ : ಮೈಸೂರಿನ ಹಲವು ಬಿಲ್ಡರ್​ಗಳು, ಮಧ್ಯವರ್ತಿಗಳು, ರಾಜಕಾರಣಿಗಳ ಆಪ್ತರ ಬಗ್ಗೆ ಇಡಿಗೆ ಮುಡಾ ದಾಳಿಯ ಸಂದರ್ಭದಲ್ಲಿ ಪ್ರಮುಖ ದಾಖಲೆಗಳು ದೊರೆತಿವೆ ಎನ್ನಲಾಗಿದ್ದು, ಇದರ ಆಧಾರದ ಮೇಲೆ ಇಡಿ ಅಧಿಕಾರಿಗಳು ಮೈಸೂರಿನಲ್ಲಿ ತನಿಖೆ ಮುಂದುವರೆಸಿದ್ದು, ಇನ್ನೂ ಹಲವು ಬಿಲ್ಡರ್‌ ಕಚೇರಿಗಳು ಹಾಗೂ ಮನೆಗಳ ಮೇಲೆ ದಾಳಿ ನಡೆಸುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ :ನಿವೇಶನ ಹಂಚಿಕೆ ಅಕ್ರಮ ಪ್ರಕರಣ: ಮುಡಾ ಅಧಿಕಾರಿಗಳಿಗೆ ಇ.ಡಿ ನೋಟಿಸ್

Last Updated : Oct 29, 2024, 1:04 PM IST

ABOUT THE AUTHOR

...view details