ಬೆಂಗಳೂರು: ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯಲ್ಲಿ (ಕೆಐಡಿಬಿ) ಬಹುಕೋಟಿ ಅವ್ಯವಹಾರ ವಂಚನೆ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಬೆಂಗಳೂರು ಹಾಗೂ ಧಾರವಾಡದಲ್ಲಿರುವ ಕಚೇರಿಗಳ ಮೇಲೆ ಇಂದು ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.
ಭೂ ಸ್ವಾಧೀನ ಹೆಸರಲ್ಲಿ ನೂರಾರು ಕೋಟಿ ಹಣವನ್ನು ಅಧಿಕಾರಿಗಳು ಲೂಟಿ ಮಾಡಿರುವ ಆರೋಪ ಕೇಳಿಬಂದಿತ್ತು. ಒಂದೇ ಭೂಮಿಗೆ ಎರಡೆರಡು ಬಾರಿ ಪರಿಹಾರದ ಹೆಸರಲ್ಲಿ ವಂಚನೆ, ರೈತರ ಹೆಸರಲ್ಲಿ ನಕಲಿ ಬ್ಯಾಂಕ್ ಖಾತೆಗಳನ್ನು ತೆರೆದು ಹಣ ಲೂಟಿ ಮಾಡಿರುವುದು, ಜೊತೆಗೆ ಐಡಿಬಿಐ ಬ್ಯಾಂಕ್ ಒಂದೇ ಶಾಖೆಯಲ್ಲಿ 24 ಖಾತೆಗಳನ್ನು ತೆರೆಯಲಾಗಿತ್ತು.