ಬೆಂಗಳೂರು: ಮೈಸೂರು ಅಭಿವೃದ್ಧಿ ಪ್ರಾಧಿಕಾರದಿಂದ (ಮುಡಾ) ಪಡೆದುಕೊಂಡಿದ್ದ 14 ನಿವೇಶನಗಳನ್ನು ಹಿಂತಿರುಗಿಸುವ ವಿಚಾರದಲ್ಲಿ ಸಾಕ್ಷ್ಯನಾಶ ಮಾಡಿರುವ ಆರೋಪ ಕೇಳಿಬಂದಿದ್ದು, ತನಿಖೆ ನಡೆಸುವಂತೆ ಒತ್ತಾಯಿಸಿ ಜಾರಿ ನಿರ್ದೇಶನಾಲಯದಲ್ಲಿ (ಇ.ಡಿ.) ದೂರು ದಾಖಲಾಗಿದೆ.
ಪ್ರದೀಪ್ ಕುಮಾರ್ ಎಂಬವರು ನೀಡಿದ ದೂರಿನ ಮೇರೆಗೆ ಅಧಿಕಾರಿಗಳು ದೂರು ಸ್ವೀಕರಿಸಿದ್ದಾರೆ. ಸಿಎಂ ಸಿದ್ದರಾಮಯ್ಯನವರ ಪತ್ನಿ ಪಾರ್ವತಿ ಅವರು ತಮಗೆ ಮುಡಾದಿಂದ ಮಂಜೂರಾಗಿದ್ದ 14 ನಿವೇಶನಗಳನ್ನು ವಾಪಸ್ ನೀಡುವುದಾಗಿ ಪತ್ರ ಬರೆದಿದ್ದರು. ಈ ಬೆಳವಣಿಗೆಯ ಬೆನ್ನಲ್ಲೇ ಮೂಡಾ ಅಧಿಕಾರಿಗಳು ಆರೋಪಿತರ ಮನೆಗೆ ಹೋಗಿ ಸಹಿ ಹಾಕಿಸಿಕೊಂಡು ಬಂದಿದ್ದಾರೆ. ಆರೋಪಿತರೊಂದಿಗೆ ಸೇರಿ ಅಧಿಕಾರಿಗಳು ಸಾಕ್ಷ್ಯನಾಶ ಮಾಡಿದ್ದು ಅವರ ವಿರುದ್ಧ ತನಿಖೆ ನಡೆಸಬೇಕೆಂದು ದೂರಿನಲ್ಲಿ ಕೋರಿದ್ದಾರೆ.