ತುಮಕೂರು:ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿರುವ ಆರೋಪದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಪ್ರಜಾಪ್ರತಿನಿಧಿ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
"ಡಿ.ಕೆ.ಸುರೇಶ್ ಕೊತ್ವಾಲ್ ರಾಮಚಂದ್ರನ ಗರಡಿಯಿಂದ ಬಂದವರು. ಅವರು ದೇಶ, ರಾಜ್ಯ ಉಳಿಸುತ್ತಾರಾ? ಹಣದ ದಾಹಕ್ಕೆ ಏನು ಬೇಕಾದರೂ ಮಾಡುತ್ತಾರೆ'' ಎಂದು ಏಪ್ರಿಲ್ 13ರಂದು ಗುಬ್ಬಿಯಲ್ಲಿ ಮೈತ್ರಿ ಅಭ್ಯರ್ಥಿ ವಿ.ಸೋಮಣ್ಣ ಪರ ಮತಯಾಚನೆ ವೇಳೆ ಹೆಚ್‌ಡಿಕೆ ವಾಗ್ದಾಳಿ ನಡೆಸಿದ್ದರು.