ಕರ್ನಾಟಕ

karnataka

ETV Bharat / state

ಲೋಕಸಭೆ ಚುನಾವಣೆಗೆ ದಿನಗಣನೆ: ರಾಜ್ಯದಲ್ಲಿ ಒಟ್ಟು 58,834 ಮತಗಟ್ಟೆ, ಚುನಾವಣಾ ಆಯೋಗ ಸಿದ್ಧತೆ - Lok sabha election - LOK SABHA ELECTION

ಪ್ರತಿ ಚುನಾವಣೆಯಲ್ಲಿ ಸಹ ಭಾರತ ಚುನಾವಣಾ ಆಯೋಗ ವಿಶೇಷ ಘೋಷವಾಕ್ಯ ಹಾಗೂ ಲೋಗೋವನ್ನು ಘೋಷಣೆ ಮಾಡುತ್ತದೆ. ಅದೇ ರೀತಿ ಈ ಚುನಾವಣೆಗಾಗಿ 'ಚುನಾವಣಾ ಪರ್ವ – ದೇಶದ ಗರ್ವ' ಎನ್ನುವ ಘೋಷ ವಾಕ್ಯವನ್ನು ಅಳವಡಿಸಕೊಳ್ಳಲಾಗಿದೆ.

Lok sabha election voting
Lok sabha election voting

By ETV Bharat Karnataka Team

Published : Apr 23, 2024, 11:46 AM IST

Updated : Apr 23, 2024, 12:43 PM IST

ಬೆಂಗಳೂರು: ಪ್ರಸ್ತುತ ಲೋಕಸಭಾ ಚುನಾವಣೆಗೆ ಮತದಾನ ರಾಜ್ಯದಲ್ಲಿ ಒಟ್ಟು ಎರಡು ಹಂತದಲ್ಲಿ ನಡೆಯಲಿದೆ. ಏಪ್ರಿಲ್ 26 ರಂದು ಮೊದಲ ಹಂತದಲ್ಲಿ 14 ಲೋಕಸಭಾ ಕ್ಷೇತ್ರಗಳು ಹಾಗೂ ಮೇ 7 ರಂದು ಎರಡನೇ ಹಂತದಲ್ಲಿ 14 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.

ಮೊದಲ ಹಂತದ ಮತದಾನಕ್ಕೆ ದಿನಗಣನೆ ಆರಂಭವಾಗಿದ್ದು, ರಾಜ್ಯದಲ್ಲಿ ಒಟ್ಟು 5.47 ಕೋಟಿ ಮತದಾರರು ಹಾಗೂ ಅವರಿಗಾಗಿ ಒಟ್ಟು 58,834 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಅದರಲ್ಲಿ 1832 ವಿಶೇಷ ಮತಗಟ್ಟೆಗಳನ್ನು ವಿವಿಧ ವಿಷಯವಾರು ವಿಶೇಷ ಮತಗಟ್ಟೆಗಳನ್ನಾಗಿ ಸ್ಥಾಪಿಸಲು ಚುನಾವಣಾ ಆಯೋಗ ನಿರ್ಧರಿಸಿದೆ.

ಪ್ರತಿ ಚುನಾವಣೆಯಲ್ಲಿ ಸಹ ಭಾರತ ಚುನಾವಣಾ ಆಯೋಗ ವಿಶೇಷ ಘೋಷ ವಾಕ್ಯ ಹಾಗೂ ಲೋಗೋವನ್ನು ಘೋಷಣೆ ಮಾಡುತ್ತದೆ. ಅದೇ ರೀತಿ ಈ ಚುನಾವಣೆಗಾಗಿ 'ಚುನಾವಣಾ ಪರ್ವ – ದೇಶದ ಗರ್ವ' ಎನ್ನುವ ಘೋಷ ವಾಕ್ಯವನ್ನು ಅಳವಡಿಸಿಕೊಳ್ಳಲಾಗಿದೆ. ಪ್ರಜಾಪ್ರಭುತ್ವದಲ್ಲಿ ಚುನಾವಣೆಗಳು ಎಲ್ಲರನ್ನೂ ಒಳಗೊಳ್ಳುವ, ಸುಗಮ, ನೈತಿಕ, ಭಾಗವಹಿಸುವಿಕೆಯ ಜೊತೆಗೆ ಮಾಹಿತಿಯುಕ್ತ ಚುನಾವಣೆಯನ್ನು ರಾಜ್ಯದಾದಂತ್ಯ ಪ್ರಜಾಪ್ರಭುತ್ವದ ಹಬ್ಬದ ರೀತಿ ಆಚರಿಸಲಾಗುವುದು ಎಂದು ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರು ತಿಳಿಸಿದ್ದಾರೆ.

ವಿಶೇಷ ಮತಗಟ್ಟೆ

SVEEP (Systematic Voters Education Electoral Participation) ವ್ಯವಸ್ಥಿತ ಮತದಾರರ ಶಿಕ್ಷಣ ಮತ್ತು ಮತದಾರರ ಭಾಗವಹಿಸುವಿಕೆ ಅಡಿಯಲ್ಲಿ ಎಲ್ಲಾ ಮತದಾರರಲ್ಲಿ ಮತದಾನದ ಕುರಿತು ಅರಿವು ಮತ್ತು ಜಾಗೃತಿ ಮೂಡಿಸಲು SVEEP Interventions ನಲ್ಲಿ ಮುಖ್ಯವಾಗಿ ಮಹಿಳಾ ಮತದಾರರು, ಯುವ ಮತದಾರರು, ವಿಶೇಷ ಚೇತನರು, ಆದಿವಾಸಿ ಮತದಾರರನ್ನು ಮತದಾನ ಪ್ರಕ್ರಿಯೆಯಲ್ಲಿ ತೊಡಗಿಸಿಕೊಳ್ಳುವ ಮುಖಾಂತರ ಮತದಾನದ ಶೇಕಡಾವಾರು ಪ್ರಮಾಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ SVEEP Awareness ಕಾರ್ಯಕ್ರಮಗಳು ನಡೆಯುತ್ತಿವೆ ಎಂದು ಹೇಳಿದ್ದಾರೆ.

ಮಹಿಳಾ ಮತದಾರರನ್ನು ಮತದಾನದಲ್ಲಿ ಭಾಗವಹಿಸುವಂತೆ ಉತ್ತೇಜಿಸುವ ಸಲುವಾಗಿ ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕನಿಷ್ಟ 05 ಸಖಿ ಮತಗಟ್ಟೆಗಳನ್ನು ರಾಜ್ಯಾದ್ಯಂತ ಒಟ್ಟು 1120 ಮತಗಟ್ಟೆಗಳನ್ನು ಮಹಿಳೆಯರಿಂದಲೇ ನಿರ್ವಹಿಸಲಾಗುತ್ತದೆ. ಈ ಮತಗಟ್ಟೆಗಲ್ಲಿ ಪೊಲೀಸ್​ ಸಿಬ್ಬಂದಿ, ಗ್ರೂಪ್ ಡಿ ನೌಕರರು ಹಾಗೂ ಎಲ್ಲಾ ಮತಗಟ್ಟೆಯ ಅಧಿಕಾರಿಗಳು ಮಹಿಳೆಯರೇ ಆಗಿರುತ್ತಾರೆ.

ಇದನ್ನೂ ಓದಿ:ಪಕ್ಷೇತರ ಅಭ್ಯರ್ಥಿ ಜಿ.ಬಿ. ವಿನಯ್​ ಕುಮಾರ್​ಗೆ ಗ್ಯಾಸ್ ಸಿಲಿಂಡರ್ ಗುರುತು: ಬೆಣ್ಣೆನಗರಿಯಲ್ಲಿ 30 ಅಭ್ಯರ್ಥಿಗಳು ಫೈನಲ್​ - GB Vinay Kumar

ವಿಶೇಷಚೇತನ ಮತದಾರರಲ್ಲಿ ಚುನಾವಣೆ ಮತ್ತು ಮತದಾನದ ಬಗ್ಗೆ ಆಸಕ್ತಿ ಮೂಡಿಸಲು ಹಾಗೂ ಭಾಗವಹಿಸುವಂತೆ ಪ್ರೇರೇಪಿಸಲು ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕನಿಷ್ಠ 01 ವಿಶೇಷ ಚೇತನ ಮತಗಟ್ಟೆಯನ್ನು ರಾಜ್ಯಾದ್ಯಂತ ಒಟ್ಟು 224 ಮತಗಟ್ಟೆಗಳನ್ನು ವಿಶೇಷ ಚೇತನ ಅಧಿಕಾರಿ ಮತ್ತು ಸಿಬ್ಬಂದಿಗಳಿಂದ ನಿರ್ವಹಿಸಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ಯುವ ಮತದಾರರಲ್ಲಿ ಚುನಾವಣೆ ಮತ್ತು ಮತದಾನದ ಬಗ್ಗೆ ಆಸಕ್ತಿ ಮೂಡಿಸಲು ಹಾಗೂ ಭಾಗವಹಿಸುವಂತೆ ಪ್ರೇರೇಪಿಸಲು ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕನಿಷ್ಠ 01 ಯುವ ಮತಗಟ್ಟೆಯನ್ನು ರಾಜ್ಯಾದ್ಯಂತ ಒಟ್ಟು 224 ಮತಗಟ್ಟೆಗಳನ್ನು ಯುವ ಅಧಿಕಾರಿ ಮತ್ತು ಸಿಬ್ಬಂದಿಗಳಿಂದ ನಿರ್ವಹಿಸಲಾಗುತ್ತದೆ. ಎಲ್ಲಾ ಮತದಾರರಲ್ಲಿ ಚುನಾವಣೆ ಮತ್ತು ಮತದಾನದ ಬಗ್ಗೆ ಆಸಕ್ತಿ ಮೂಡಿಸಲು ಹಾಗೂ ಭಾಗವಹಿಸುವಂತೆ ಪ್ರೇರೇಪಿಸಲು ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕನಿಷ್ಠ 01 ಧ್ಯೇಯ ಆಧಾರಿತ ಮತಗಟ್ಟೆಯನ್ನು ರಾಜ್ಯಾದ್ಯಂತ ಒಟ್ಟು 224 ಮತಗಟ್ಟೆಗಳನ್ನು ಆಯಾ ಜಿಲ್ಲೆಗಳ ವಿಶೇಷತೆ, ಪ್ರಾದೇಶಿಕ ಸಾಂಸ್ಕೃತಿಕ ಸೊಗಡಿನ ಹಿನ್ನೆಲೆಯಲ್ಲಿ, ಪಾರಂಪರಿಕ ಕುಶಲ ಕಲೆಗಳು, ವಿನೂತನ ಪ್ರಯೋಗಗಳು, ಜಾಗತಿಕ ಸಂದೇಶ ಸಾರುವಂತಹ ಮಾದರಿಯಲ್ಲಿ ರಚಿಸಲು ನಿರ್ದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ:ಬಿಜೆಪಿಯಿಂದ ಉಚ್ಚಾಟನೆ ನಿರೀಕ್ಷಿಸಿದ್ದೆ, ಮೋದಿ ಪ್ರಧಾನಿ ಮಾಡಲು ಗೆದ್ದು ಮತ್ತೆ ಪಕ್ಷ ಸೇರುವೆ: ಕೆ.ಎಸ್.ಈಶ್ವರಪ್ಪ - K S Eshwarappa

ಆದಿವಾಸಿಗಳ ಮತಗಟ್ಟೆಗಳನ್ನು ಕಾಡಿನ ಅಂಚಿನಲ್ಲಿರುವ ಅಥವಾ ಕಾಡಿನಲ್ಲಿ ಜೀವಿಸುವ ಆದಿವಾಸಿ ಜನರಿಂದ ಪರಿಶಿಷ್ಟ ವರ್ಗಗಳ ಇಲಾಖೆ ವತಿಯಿಂದ ಮೈಸೂರು, ಚಾಮರಾಜನಗರ, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಒಟ್ಟು 40 ಮತಗಟ್ಟೆಗಳನ್ನು ಸಾಂಪ್ರದಾಯಿಕ ಬುಡಕಟ್ಟು ಜನರ ಸಾಂಸ್ಕೃತಿಕ ಹಿನ್ನೆಲೆ ಬಿಂಬಿಸುವ ರೀತಿಯಲ್ಲಿ ಅಲಂಕರಿಸುವ ಮೂಲಕ ಆದಿವಾಸಿ ಮತದಾರರನ್ನು ಚುನಾವಣೆ ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಆಕರ್ಷಿತರನ್ನಾಗಿ ಮಾಡಲು ಈ ರೀತಿಯ ವ್ಯವಸ್ಥೆಗಳನ್ನು ಮಾಡಲಾಗಿದೆ. ಈ ಮೂಲಕ ಮುಖ್ಯ ಚುನಾವಣಾಧಿಕಾರಿಯವರ ಕಚೇರಿಯು ಎಲ್ಲಾ ವರ್ಗದ ಮತದಾರರನ್ನು ಒಳಗೊಂಡಂತೆ ಮತದಾನ ಪ್ರಕ್ರಿಯೆಯಲ್ಲಿ ಸುಗಮವಾಗಿ ಭಾಗವಹಿಸುವಂತೆ ಮಾಡಲು “ಯಾವುದೇ ಮತದಾರ ಮತದಾನದಿಂದ ಹೊರಗುಳಿಯಬಾರದು, ಪ್ರತಿ ಮತವೂ ಅಮೂಲ್ಯವಾದದ್ದು” ಎಂಬ ಧ್ಯೇಯವನ್ನು ಹೊಂದಿದೆ ಎಂದು ಮನೋಜ್ ಕುಮಾರ್ ಮೀನಾ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ:ಬರ ಪರಿಹಾರ ಹಣ ಬಿಡುಗಡೆಗೊಳಿಸದಿದ್ದರೆ ರಾಜ್ಯಕ್ಕೆ ಮತ ಕೇಳಲು ಬರಬೇಡಿ: ಬಿಜೆಪಿ ವಿರುದ್ಧ ಸುರ್ಜೇವಾಲಾ ಆಕ್ರೋಶ - Randeep Singh Surjewala

Last Updated : Apr 23, 2024, 12:43 PM IST

ABOUT THE AUTHOR

...view details