ಕರ್ನಾಟಕ

karnataka

ETV Bharat / state

ಬ್ಯಾಂಕಿನ ಹಣವನ್ನೇ ವಶಕ್ಕೆ ಪಡೆದ ಚುನಾವಣಾ ಅಧಿಕಾರಿಗಳು: ಏಕೆ ಗೊತ್ತಾ? - Money seized

ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಎಲ್ಲ ವಾಹನಗಳನ್ನು ತಪಾಸಣೆ ಮಾಡುತ್ತಿರುವ ಚುನಾವಣಾ ಅಧಿಕಾರಿಗಳು ಪ್ರತ್ಯೇಕ ಪಕ್ರರಣಗಳಲ್ಲಿ ಚಿಕ್ಕಮಗಳೂರು ಹಾಗೂ ಗದಗದಲ್ಲಿ ಒಟ್ಟು 47 ಲಕ್ಷ ರೂ. ಹಣವನ್ನು ವಶಪಡಿಸಿಕೊಂಡಿದ್ದಾರೆ.

By ETV Bharat Karnataka Team

Published : Apr 6, 2024, 10:10 AM IST

Updated : Apr 6, 2024, 12:52 PM IST

SST team seized 45 lakh money
45 ಲಕ್ಷ ಹಣ ವಶಪಡಿಸಿಕೊಂಡ ಎಸ್​ಎಸ್​ಟಿ ತಂಡ

45 ಲಕ್ಷ ಹಣ ವಶಪಡಿಸಿಕೊಂಡ ಎಸ್​ಎಸ್​ಟಿ ತಂಡ

ಚಿಕ್ಕಮಗಳೂರು: ಲೋಕಸಭಾ ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿ, ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಮಾರ್ಗ ಸೂಚಿಗಳನ್ನು ಪಾಲಿಸದೇ ಖಾಸಗಿ ವಾಹನದಲ್ಲಿ ಬ್ಯಾಂಕ್‌ಗೆ ಸೇರಿದ ಹಣವನ್ನು ಸಾಗಿಸುತ್ತಿದ್ದ ಆರೋಪದ ಮೇರೆಗೆ ಎಸ್​ಎಸ್​ಟಿ ಅಧಿಕಾರಿಗಳು ತಪಾಸಣೆ ನಡೆಸಿ, 45 ಲಕ್ಷ ರೂ. ನಗದನ್ನು ವಶಕ್ಕೆ ಪಡೆದಿರುವ ಘಟನೆ ಆಲ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಆಲ್ದೂರು ಹೋಬಳಿ ವ್ಯಾಪ್ತಿಯ ಮಾಚಗೊಂಡನಹಳ್ಳಿ ಎಂಬಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಎಸ್​ಎಸ್​ಟಿ ತಂಡ (ಸ್ಥಿರ ಕಣ್ಗಾವಲು ತಂಡ- Static Surveillance Team) ಮೂಡಿಗೆರೆಯಿಂದ ಚಿಕ್ಕಮಗಳೂರು ನಗರದತ್ತ ಬರುತ್ತಿದ್ದ ಖಾಸಗಿ ವಾಹನವೊಂದನ್ನು ತಪಾಸಣೆ ಮಾಡಿದೆ. ಈ ವೇಳೆ ವಾಹದಲ್ಲಿ 45 ಲಕ್ಷ ಹಣ ಇರುವುದು ಪತ್ತೆಯಾಗಿದೆ. ಹಣದ ಬಗ್ಗೆ ವಿಚಾರಣೆ ಮಾಡಿದ ವೇಳೆ, ಈ ಹಣ ವಿವಿಧ ಬ್ಯಾಂಕ್‌ಗಳಿಗೆ ಸೇರಿದ್ದು ಎಂದು ವಾಹನದಲ್ಲಿದ್ದವರು ತಿಳಿಸಿದ್ದಾರೆ.

ವಶಪಡಿಸಿಕೊಂಡ ಹಣ

ಬ್ಯಾಂಕ್ ಸೇರಿದ್ದ 45 ಲಕ್ಷ ಹಣ ವಶ: ಆದರೆ, ಬ್ಯಾಂಕ್‌ಗೆ ಸೇರಿದ ಹಣವನ್ನು ಸಾಗಣೆ ಮಾಡುವ ಸಂದರ್ಭದಲ್ಲಿ ವಾಹನದಲ್ಲಿ ಆರ್‌ಬಿಐ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕಿದೆ. ಆದರೆ, ಸಾಗಣೆ ಮಾಡುತ್ತಿದ್ದ ವಾಹನದಲ್ಲಿ ಆರ್​ಬಿಐ ಮಾರ್ಗಸೂಚಿಗಳನ್ನು ಪಾಲನೆ ಮಾಡದಿರುವುದು ಕಂಡು ಬಂದಿದೆ. ವಾಹನದಲ್ಲಿ ಗನ್ ಮ್ಯಾನ್, ಸಿಸಿಟಿವಿ ಇಲ್ಲದೇ, ಅದರಲ್ಲೂ ಖಾಸಗಿ ವಾಹನದಲ್ಲಿ ಹಣ ಸಾಗಣೆ ಮಾಡಲಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಅಧಿಕಾರಿಗಳ ತಂಡ ಹಣವನ್ನು ವಶಕ್ಕೆ ಪಡೆದು ದೂರು ದಾಖಲಿಸಿಕೊಂಡಿದೆ. ಅಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ.

ಇದನ್ನೂ ಓದಿ:ಪ್ರತ್ಯೇಕ ಘಟನೆ: ಸಮರ್ಪಕ ದಾಖಲೆಗಳಿಲ್ಲದೇ ಸಾಗಿಸುತ್ತಿದ್ದ ಕೋಟ್ಯಂತರ ರೂಪಾಯಿ ವಶ

ಗದಗ ರಸ್ತೆ ಚೆಕ್ ಪೋಸ್ಟ್​ನಲ್ಲಿ ದಾಖಲೆ ರಹಿತ 2 ಲಕ್ಷ ರೂ. ವಶ:ಹುಬ್ಬಳ್ಳಿಜಿಲ್ಲೆಯ ಎಲ್ಲಾ ಚೆಕ್ ಪೋಸ್ಟ್​ಗಳಲ್ಲಿ ವಾಹನ ತಪಾಸಣೆ ತೀವ್ರಗೊಳಿಸಲಾಗಿದೆ. ಸಹಾಯಕ ಚುನಾವಣಾ ಅಧಿಕಾರಿ ಡಾ.ಈಶ್ವರ ಉಳ್ಳಾಗಡ್ಡಿ ಅವರ ನೇತೃತ್ವದಲ್ಲಿ ಗದಗ ರಸ್ತೆ ಚೆಕ್ ಪೋಸ್ಟ್​ನಲ್ಲಿ ವಾಹನಗಳ ತಪಾಸಣೆ ವೇಳೆ ದಾಖಲೆ ರಹಿತ ರೂ. 2 ಲಕ್ಷ ನಗದು ಪತ್ತೆಯಾಗಿದ್ದು, ಹಣವನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಗದಗ ರಸ್ತೆ ಚೆಕ್ ಪೋಸ್ಟ್​ನಲ್ಲಿ ದಾಖಲೆ ರಹಿತ 2 ಲಕ್ಷ ರೂ. ವಶ

ಕೆಎ-05 ಎಇ-3422 ನಂಬರ್​ ಕಾರಿನಲ್ಲಿ ತಿಪಟೂರಿನಿಂದ ಹುಬ್ಬಳ್ಳಿಗೆ ದಾಖಲೆ ಇಲ್ಲದೇ ಹಣ ಸಾಗಿಸಲಾಗುತ್ತಿತ್ತು. ನಿಯಮಾನುಸಾರ ಮುಂದಿನ ಕ್ರಮ ಜರುಗಿಸಲಾಗಿದೆ. ಈ ಕಾರ್ಯಾಚರಣೆಯಲ್ಲಿ ಸಹಾಯಕ ಚುನಾವಣಾಧಿಕಾರಿ ಡಾ.ಈಶ್ವರ ಉಳ್ಳಾಗಡ್ಡಿ, ಎಂಸಿಸಿ ನೋಡೆಲ್ ಅಧಿಕಾರಿ ರವೀಂದ್ರ ಕುಮಾರ್, ಕಿರಣ್ ಮಜ್ಜಿಗೇರಿ, ಕುಶಾಲ್ ಹುಕ್ಕೇರಿ, ಅಯ್ಯಪ್ಪ ಮನ್ನಿಕೇರಿ, ಲೋಕೇಶ್ ಶಿರಹಟ್ಟಿ, ಮಂಜುನಾಥ, ದೇವಪ್ಪ ಭಾಗವಹಿಸಿದ್ದರು.

ಇದನ್ನೂ ಓದಿ:ಚಾಮರಾಜನಗರ ಡಿಸಿಗೆ ಬಂದ ಫೋನ್ ಕರೆ; 98 ಕೋಟಿ ಮೌಲ್ಯದ ಬಿಯರ್ ವಶ, ಫ್ಯಾಕ್ಟರಿ ಸೀಜ್ - FACTORY SEIZE

Last Updated : Apr 6, 2024, 12:52 PM IST

ABOUT THE AUTHOR

...view details