ಚಿಕ್ಕಬಳ್ಳಾಪುರ:ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಚುನಾವಣಾ ನೀತಿ ಸಂಹಿತೆ ಜಾರಿಯಾದ ಬೆನ್ನಲ್ಲೇ ನಗರದಲ್ಲಿ ಅಧಿಕಾರಿಗಳು ಭರ್ಜರಿ ಬೇಟೆಯಾಡಿದ್ದಾರೆ. ಜಿಲ್ಲೆಯ ಬಾಗೇಪಲ್ಲಿ ಚೆಕ್ ಪೋಸ್ಟ್ನಲ್ಲಿ ಆಂಧ್ರಪ್ರದೇಶದ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರ ಚಿತ್ರವುಳ್ಳ 96 ಕೈಗಡಿಯಾರ (ವಾಚ್) ಗಳನ್ನು ಚುನಾವಣಾ ಅಧಿಕಾರಿಗಳು ಸೀಜ್ ಮಾಡಿರುವ ಘಟನೆ ನಡೆದಿದೆ.
ಗಡಿಯಲ್ಲಿ ಚುನಾವಣಾ ಅಧಿಕಾರಿಗಳಿಂದ ತಪಾಸಣೆ: ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ಚಿತ್ರವುಳ್ಳ 96 ಕೈಗಡಿಯಾರ ವಶಕ್ಕೆ - WATCHES SEIZED AT BAGEPALLY - WATCHES SEIZED AT BAGEPALLY
ಲೋಕಸಭಾ ಚುನಾವಣೆ ಹಿನ್ನೆಲೆ ಚುನಾವಣಾ ಅಧಿಕಾರಿಗಳು ಮಹತ್ವದ ಕಾರ್ಯಾಚರಣೆ ನಡೆಸಿದ್ದು, ದಾಖಲೆ ಇಲ್ಲದೆ ಅಕ್ರಮವಾಗಿ ಸಾಗಿಸುತ್ತಿದ್ದ ಕೈಗಡಿಯಾರಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಕೈಗಡಿಯಾರಗಳು ಆಂಧ್ರಪ್ರದೇಶದ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರ ಚಿತ್ರವುಳ್ಳದ್ದಾಗಿವೆ.
Published : Mar 21, 2024, 3:38 PM IST
ಸುಮಾರು 1 ಲಕ್ಷ ರೂಪಾಯಿ ಮೌಲ್ಯದ ಕೈಗಡಿಯಾರಗಳು ಇವಾಗಿರಬಹುದೆಂದು ಅಂದಾಜು ಮಾಡಲಾಗಿದೆ. ಆಂಧ್ರ ಗಡಿಯ ಚೆಕ್ ಪೋಸ್ಟ್ನಲ್ಲಿ ಚುನಾವಣಾ ನೀತಿ ಸಂಹಿತೆ ಹಿನ್ನೆಲೆ ತಪಾಸಣೆ ಮಾಡುತ್ತಿದ್ದಾಗ ಇವುಗಳು ಪತ್ತೆಯಾಗಿದ್ದು, ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ವಾಚ್ಗಳನ್ನು ಅನಂತಪುರದಿಂದ ಬೆಂಗಳೂರಿಗೆ ಕಾರಿನಲ್ಲಿ ಸಾಗಿಸುತ್ತಿದ್ದರು ಎಂಬ ಮಾಹಿತಿ ತಿಳಿದು ಬಂದಿದೆ. ಈ ಸಂಬಂಧ ಅನಂತಪುರದ ವೈಎಸ್ಆರ್ ಕಾಂಗ್ರೆಸ್ ಪಕ್ಷದ ಮುಖಂಡ ಬಂಡಿ ನಾಗೇಂದ್ರ ವಿರುದ್ಧ ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎಪಿ 31 ಹೆಚ್ಇ 1111 ಸಂಖ್ಯೆಯ ಫಾರ್ಚುನರ್ ಕಾರನ್ನು ಸಹ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ:ಚುನಾವಣಾ ನೀತಿ ಸಂಹಿತೆ ಜಾರಿ, ಫೀಲ್ಡಿಗಿಳಿದು ವಾಹನ ತಪಾಸಣೆ ಮಾಡಿದ ದಾವಣಗೆರೆ ಜಿಲ್ಲಾಧಿಕಾರಿ