ಕರ್ನಾಟಕ

karnataka

By ETV Bharat Karnataka Team

Published : 4 hours ago

ETV Bharat / state

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಎಲೆಕ್ಟ್ರಿಕ್ ಟ್ಯಾಕ್ಸಿ ಸೇವೆಗೆ ಚಾಲನೆ - Electric Taxi Service

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಲೆಕ್ಟ್ರಿಕ್ ಟ್ಯಾಕ್ಸಿ ಸೇವೆಗೆ ಚಾಲನೆ ನೀಡಲಾಗಿದೆ.

electric taxi
ಎಲೆಕ್ಟ್ರಿಕ್ ಟ್ಯಾಕ್ಸಿ ಸೇವೆಗೆ ಚಾಲನೆ (ETV Bharat)

ದೇವನಹಳ್ಳಿ(ಬೆಂ.ಗ್ರಾ): ಸ್ವಚ್ಛ ಪರಿಸರ ಹಾಗೂ ವಾಯು ಮಾಲಿನ್ಯ ನಿಯಂತ್ರಣಕ್ಕಾಗಿ ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಲೆಕ್ಟ್ರಿಕ್ ಟ್ಸಾಕ್ಸಿ ಸೇವೆಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ನೀಡಿದರು.

ಟ್ಸಾಕ್ಸಿ ಸೇವೆಯು ವಿಮಾನ ನಿಲ್ದಾಣದಿಂದ ಬೆಂಗಳೂರು ನಗರಕ್ಕೆ ಲಭ್ಯವಿದ್ದು, ಸಾಮಾನ್ಯ ದರವನ್ನು 699 ರೂ.ಗೆ ನಿಗದಿ ಮಾಡಿರುವುದಾಗಿ ರಿಫೆಕ್ಸ್ ಇವೀಲ್ಜ್ ಕಂಪನಿ ತಿಳಿಸಿದೆ. ಎಲೆಕ್ಟ್ರಿಕ್ ಟ್ಯಾಕ್ಸಿಗಳಿಗೆ ಚಾಲನೆ ನೀಡಿದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಡಿಸಿಎಂ, ಬೆಂಗಳೂರಿನ ಸ್ವಚ್ಛ ಪರಿಸರ ಮತ್ತು ಮಾಲಿನ್ಯ ನಿಯಂತ್ರಣಕ್ಕಾಗಿ ಎಲೆಕ್ಟ್ರಿಕ್ ಟ್ಯಾಕ್ಸಿಗಳನ್ನು ಪರಿಚಯಿಸುತ್ತಿರುವುದು ಸಂತಸದ ವಿಷಯ. ಏರ್​​ಪೋರ್ಟ್ ಪ್ರಯಾಣಿಕರ ಅನುಕೂಲಕ್ಕಾಗಿ ರಿಫೆಕ್ಸ್ ಇವೀಲ್ಜ್ ಗ್ರೂಪ್ ಎಲೆಕ್ಟ್ರಿಕ್ ಟ್ಯಾಕ್ಸಿಗಳ ಸೇವೆ ನೀಡುತ್ತಿದೆ. ವಿಮಾನ ನಿಲ್ದಾಣದಿಂದ ಬೆಂಗಳೂರು ಸಿಟಿಗೆ ಲಭ್ಯವಿರುವ ಟ್ಯಾಕ್ಸಿಗಳ ಸಾಮಾನ್ಯ ದರ 699 ರೂ. ನಿಗದಿ ಮಾಡಿರುವುದು ವಿಶೇಷವಾಗಿದೆ ಎಂದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (ETV Bharat)

ಇದನ್ನೂ ಓದಿ:ದಸರಾ ವೈಭವ: ಅರಮನೆಯ ರಾಜವಂಶಸ್ಥರ ನವರಾತ್ರಿ ಧಾರ್ಮಿಕ ಕಾರ್ಯಕ್ರಮಗಳ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.. - MYSURU DASARA 2024

ಸದ್ಯ 400 ಎಲೆಕ್ಟ್ರಿಕ್ ಟ್ಯಾಕ್ಸಿಗಳು ಸೇವೆ ನೀಡುತ್ತಿದ್ದು, ಮುಂದಿನ ದಿನಗಳಲ್ಲಿ ಮತ್ತೆ 600 ಟ್ಯಾಕ್ಸಿಗಳನ್ನು ಸೇರ್ಪಡೆ ಮಾಡುವುದಾಗಿ ಕಂಪನಿಯವರು ಹೇಳಿದ್ದಾರೆ. ಟ್ಯಾಕ್ಸಿ ಸೇವೆಯಲ್ಲೂ ಸ್ವರ್ಧೆ ಇದ್ದು, ಗ್ರಾಹಕರಿಗೆ ಉತ್ತಮ ಸೇವೆ ನೀಡುವಲ್ಲಿ ಸಹಕಾರಿಯಾಗಿದೆ. ಈಗಾಗಲೇ ಪಿಂಕ್ ಟ್ಯಾಕ್ಸಿ ಸೇವೆ ಸಹ ಕಾರ್ಯ ನಿರ್ವಹಿಸುತ್ತಿದೆ. ಮಹಿಳೆಯರ ಸುರಕ್ಷತೆಗಾಗಿ ಮಹಿಳೆಯರೇ ಟ್ಯಾಕ್ಸಿ ಡ್ರೈವರ್​​ಗಳಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈಗ ಗ್ರೀನ್ ಟ್ಯಾಕ್ಸಿ ಸೇವೆ ಆರಂಭಿಸಲಾಗಿದೆ. ಟ್ಯಾಕ್ಸಿ ಡ್ರೈವರ್​​ಗಳಿಗೆ 25 ಸಾವಿರ ವೇತನ ನೀಡುವುದಾಗಿ ಕಂಪನಿ ಹೇಳಿರುವುದು ಸಹ ಸಂತಸದ ವಿಚಾರ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.

ಇದನ್ನೂ ಓದಿ:ನೃಪತುಂಗ ರಸ್ತೆಯಲ್ಲಿ ಅತ್ಯಾಧುನಿಕ ಸ್ಮಾರ್ಟ್ ಬಸ್ ನಿಲ್ದಾಣ ಉದ್ಘಾಟನೆ: ಬಿಬಿಎಂಪಿಗೆ ಹಸ್ತಾಂತರ - SMART BUS STAND

ABOUT THE AUTHOR

...view details