ಕರ್ನಾಟಕ

karnataka

ETV Bharat / state

ಅಂತರ್ಜಾತಿ ವಿವಾಹಗಳಿಂದ ಸಮ ಸಮಾಜ ನಿರ್ಮಾಣ: ಸಿಎಂ ಸಿದ್ದರಾಮಯ್ಯ - CM SIDDARAMAIAH

ವಿವಾಹದ ಖರ್ಚುವೆಚ್ಚಗಳನ್ನು ಭರಿಸಲಾಗದ ಬಡಕುಟುಂಬಗಳಿಗೆ ಸಾಮೂಹಿಕ ವಿವಾಹ ವರದಾನವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಸರ್ವ ಧರ್ಮಗಳ ಸಾಮೂಹಿಕ ವಿವಾಹ ಕಾರ್ಯಕ್ರಮ
ಸರ್ವ ಧರ್ಮಗಳ ಸಾಮೂಹಿಕ ವಿವಾಹ ಕಾರ್ಯಕ್ರಮ (ETV Bharat)

By ETV Bharat Karnataka Team

Published : Jan 12, 2025, 9:34 PM IST

ವಿಜಯನಗರ:ಅಂತರ್ಜಾತಿ ವಿವಾಹಗಳಿಗೆ ಹೆಚ್ಚಿನ ಪ್ರೋತ್ಸಾಹ ದೊರೆಯಬೇಕು. ಇದರಿಂದಾಗಿ ಸಮಾಜದಲ್ಲಿ ಜಾತಿ ವ್ಯವಸ್ಥೆ ಅಳಿದು ಸಮ ಸಮಾಜ ನಿರ್ಮಾಣ ಸಾದ್ಯವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.

ವಿಜಯನಗರದಲ್ಲಿ ಆಯೋಜಿಸಲಾಗಿದ್ದ ಸರ್ವ ಧರ್ಮಗಳ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿ, ವೈವಾಹಿಕ ಜೀವನಕ್ಕೆ ಕಾಲಿಟ್ಟ 23 ಜೋಡಿಗಳಿಗೆ ಶುಭ ಕೋರಿ ಮಾತನಾಡಿದ ಅವರು, ವಿವಾಹದ ಖರ್ಚುವೆಚ್ಚಗಳನ್ನು ಭರಿಸಲಾಗದ ಬಡಕುಟುಂಬಗಳಿಗೆ ಸಾಮೂಹಿ ವಿವಾಹ ವರದಾನವಾಗಿದೆ. ಸರಳ ಶೈಲಿಯಲ್ಲಿ ವಿವಾಹವಾಗುವ ಪದ್ದತಿಯನ್ನು ಅಳವಡಿಸಿಕೊಳ್ಳಬೇಕು. ಕೆಳವರ್ಗದಲ್ಲಿ ಹುಟ್ಟಿದ ಮಾತ್ರಕ್ಕೆ ಬಡವರಾಗಿಯೇ ಉಳಿಯಬೇಕೆಂಬ ಭಾವನೆ ತಪ್ಪು. ಜಾತ್ಯಾತೀತದ ತತ್ವವನ್ನು ನಮ್ಮ ಸಂವಿಧಾನ ಬೋಧಿಸಿದೆ. ಇದೇ ಆಶಯವನ್ನು ವ್ಯಕ್ತಪಡಿಸಿದ ಬಸವಣ್ಣವರು, ಜಾತಿ ಆಧಾರಿತ ಸಮಾಜ ವ್ಯವಸ್ಥೆ ಸಾಧುವಲ್ಲ ಎಂದು ಪ್ರತಿಪಾದಿಸಿದ್ದರು. 'ದಯವೇ ಧರ್ಮದ ಮೂಲವಯ್ಯ’ ಎಂದು ನುಡಿದು, ಉದಾತ್ತ ತತ್ವವನ್ನು ಬೋಧಿಸಿದ ಬಸವಣ್ಣನವರನ್ನು ಸರ್ಕಾರ ‘ಸಾಂಸ್ಕೃತಿಕ ನಾಯಕ’ ಎಂದು ಘೋಷಿಸಿದೆ ಎಂದರು.

ಸಾಮೂಹಿಕ ವಿವಾಹ ಕಾರ್ಯಕ್ರಮ (ETV Bharat)

ಮನುಷ್ಯ ವಿಶ್ವಮಾನವನಾಗಬೇಕು:ಮನುಷ್ಯ ಹುಟ್ಟುವಾಗ ವಿಶ್ವಮಾನವನಾಗಿದ್ದು, ಜಾತಿಧರ್ಮಗಳ ಬಂಧನದದಲ್ಲಿ ಸಿಲುಕಿ ಅಲ್ಪಮಾನವನಾಗುತ್ತಾನೆ. ಆದ್ದರಿಂದ ವಿಶ್ವಮಾನವರಾಗುವ ಮೂಲಕ ಸಮಾಜಕ್ಕೆ ಕೊಡುಗೆ ನೀಡಬೇಕಾಗಿದೆ. ಬಸವಣ್ಣನವರ ಕಾಲದಲ್ಲಿಯೇ ಅಂತರ್ಜಾತಿ ವಿವಾಹ ಪದ್ಧತಿ ಪ್ರಚಲಿತವಾಗಿತ್ತು. ಇತರ ಧರ್ಮಗಳನ್ನೂ ಗೌರವಿಸುವ ವ್ಯವಸ್ಥೆ ಸಮಾಜದಲ್ಲಿರಬೇಕು. ಚಲನೆ ರಹಿತವಾದ ಜಾತಿ ವ್ಯವಸ್ಥೆಯಲ್ಲಿ ನಾವಿದ್ದೇವೆ. ಆರ್ಥಿಕ ಹಾಗೂ ಸಾಮಾಜಿಕ ಸ್ವಾವಲಂಬನೆಯಿಂದ ಚಲನೆಯಿಲ್ಲದ ಸಮಾಜಕ್ಕೆ ಜೀವ ಬರುತ್ತದೆ ಎಂದು ಹೇಳಿದರು.

ಸಂವಿಧಾನ ಸಮಾನ ಅವಕಾಶಗಳನ್ನು ನೀಡಿದೆ:ಆರ್ಥಿಕವಾಗಿ ದುರ್ಬಲರಾಗಿರುವ ಜನರ ಕೊಂಡುಕೊಳ್ಳುವ ಶಕ್ತಿ ಹೆಚ್ಚಬೇಕು. ಅಂತೆಯೇ ಶ್ರೀಮಂತವರ್ಗದವರೂ ಕೂಡ ಬಡವರ ಸಹಾಯಕ್ಕೆ ಮುಂದಾಗಬೇಕು ಹಾಗೂ ಸಮಾಜದ ಋಣ ತೀರಿಸಲು ಪ್ರಯತ್ನಿಸಬೇಕು. ಡಾ. ಬಿ.ಆರ್​. ಅಂಬೇಡ್ಕರ್ ಅವರು ನೀಡಿರುವ ಸಂವಿಧಾನ, ಎಲ್ಲರಿಗೂ ಸಮಾನ ಹಕ್ಕು ಹಾಗೂ ಸಮಾನ ಅವಕಾಶಗಳನ್ನು ನೀಡಿದೆ. ಸಂವಿಧಾನದ ಆಶಯಗಳನ್ನು ಪ್ರತಿಯೊಬ್ಬರೂ ಅರಿತಿರಬೇಕು. ಸಂವಿಧಾನ ನೀಡಿರುವ ಹಕ್ಕು ಬಾಧ್ಯತೆಗಳ ಬಗ್ಗೆ ಅರಿತು ಜವಾಬ್ದಾರಿಯುತ ನಾಗರಿಕನಾಗುವುದು ಅವಶ್ಯವಾಗಿದೆ ಎಂದರು.

ಸಾಮೂಹಿಕ ವಿವಾಹ ಕಾರ್ಯಕ್ರಮ (ETV Bharat)

ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದ ಪ್ರಕರಣದ ಬಗ್ಗೆ ಮಾತನಾಡಿ, ಪ್ರಾಣಿ ಹಿಂಸೆ ಮಾಡುವುದು ಅಪರಾಧ, ತಪ್ಪಿತಸ್ಥರನ್ನು ಪತ್ತೆ ಹಚ್ಚಿ ಶಿಕ್ಷೆಗೆ ಒಳಪಡಿಸಲಾಗುವುದು ಎಂದು ತಿಳಿಸಿದರು

ಜಾತಿಗಣತಿ ವರದಿ ಜಾರಿಗೆ ವಿರೋಧ ವ್ಯಕ್ತವಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಜಾತಿ ಗಣತಿ ವರದಿಗಳ ಪರ - ವಿರೋಧ ಅಭಿಪ್ರಾಯಗಳು ವ್ಯಕ್ತವಾಗುವುದು ಸಹಜ. 160 ಕೋಟಿ ರೂ. ವೆಚ್ಚದಲ್ಲಿ ಸಿದ್ದಪಡಿಸಲಾದ ವರದಿಯನ್ನು ಸ್ವೀಕರಿಸಲಾಗಿದ್ದು, ವರದಿಯ ಜಾರಿಯ ಬಗ್ಗೆ ತೀರ್ಮಾನ ಕೈಗೊಳ್ಳಲು ಸಚಿವ ಸಂಪುಟ ಸಭೆ ನಡೆಸಲಾಗುತ್ತದೆ ಎಂದರು.

ಇದನ್ನೂ ಓದಿ:ಮರು ಭೂಮಾಪನ ಕಾರ್ಯಕ್ರಮ ರಾಜ್ಯಕ್ಕೆ ಮಾದರಿ : ಡಿಸಿಎಂ ಡಿ.ಕೆ. ಶಿವಕುಮಾರ್

ಇದನ್ನೂ ಓದಿ:ಹೊಸ ರೂಪ ಪಡೆದು ಲೋಕಾರ್ಪಣೆಗೊಂಡ ಹುಬ್ಬಳ್ಳಿ ಹಳೇ ಬಸ್ ನಿಲ್ದಾಣ : ನಾಳೆಯಿಂದ ಸೇವೆಗೆ ಸಿದ್ಧ

ABOUT THE AUTHOR

...view details