ಕರ್ನಾಟಕ

karnataka

ETV Bharat / state

ಪ್ರಜಾಪ್ರಭುತ್ವದಲ್ಲಿ ಎಲ್ಲರೂ ಸಾಮಾನ್ಯರೇ: ಯದುವೀರ್ ಒಡೆಯರ್ - Yaduveer Wodeyar reaction

ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿದ ಬಿಜೆಪಿ ಅಭ್ಯರ್ಥಿಗಳಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ಬಾಲರಾಜ್ ಶ್ರೀಗಳ ಆಶೀರ್ವಾದ ಪಡೆದರು.

Yaduveer Wodeyar
ಯದುವೀರ್ ಒಡೆಯರ್

By ETV Bharat Karnataka Team

Published : Mar 19, 2024, 1:40 PM IST

Updated : Mar 19, 2024, 3:06 PM IST

ಮೈಸೂರು: "ರಾಜ ಆಗಲಿ, ರಾಣಿ ಆಗಲಿ, ಕಾನೂನಿನ ಮುಂದೆ, ಸಂವಿಧಾನದಲ್ಲಿ ಯಾವುದೇ ವಿಶೇಷ ಹಕ್ಕುಗಳು ಇಲ್ಲ. ಪ್ರಜಾಪ್ರಭುತ್ವದ ಅಡಿಯಲ್ಲಿ ಎಲ್ಲರೂ ಸಾಮಾನ್ಯರೇ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏನು ಹೇಳಿದ್ದಾರೆ ಎನ್ನುವುದು ನನ್ನ ಗಮನಕ್ಕೆ ಬಂದಿಲ್ಲ. ಸಿಎಂ ಹೇಳಿಕೆಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ" ಎಂದು ಮೈಸೂರು-ಕೊಡಗು ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.

ಯದುವೀರ್ ಒಡೆಯರ್

ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಯದುವೀರ್ ಒಡೆಯರ್ ಹಾಗೂ ಚಾಮರಾಜಗರದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದರು. ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಯದುವೀರ್ ಒಡೆಯರ್, "ಇಂದು ಶ್ರೀಗಳನ್ನು ಭೇಟಿಯಾಗಿ ಅವರ ಆಶೀರ್ವಾದ, ಸಲಹೆ, ಹಾಗೂ ಸಹಕಾರವನ್ನು ಕೋರಿದ್ದೇನೆ. ನಾಮಪತ್ರ ಸಲ್ಲಿಸುವ ದಿನಾಂಕವನ್ನು ಇನ್ನೊಂದೆರಡು ದಿನಗಳಲ್ಲಿ ತಿಳಿಸುತ್ತೇನೆ. ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರಿಗೆ ಪ್ರಚಾರಕ್ಕೆ ಆಗಮಿಸುವ ಬಗ್ಗೆ ಇನ್ನೂ ಮಾಹಿತಿ ತಿಳಿದಿಲ್ಲ" ಎಂದು ಹೇಳಿದರು.

"ಮುಖ್ಯಮಂತ್ರಿ ಸಿದ್ದರಾಮಯ್ಯನವರ ಯಾವ ರಾಜ ಎಂಬ ಮಾತಿನ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, "ಪ್ರಜಾಪ್ರಭುತ್ವದಲ್ಲಿ ಎಲ್ಲರೂ ಸಾಮಾನ್ಯರು. ಇದಕ್ಕೆ ವಿಶೇಷ ಅರ್ಥ ಬೇಡ. ಮುಖ್ಯಮಂತ್ರಿ ಏನು ಹೇಳಿದ್ದಾರೆ ಎನ್ನುವುದು ನನಗೆ ಗೊತ್ತಿಲ್ಲ. ಆದ್ದರಿಂದ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ" ಎಂದು ನಾನು ರಾಜನಲ್ಲ, ಸಾಮಾನ್ಯ ವ್ಯಕ್ತಿ ಎಂಬ ಹೇಳಿಕೆಯನ್ನು ಪುನರುಚ್ಚರಿಸಿದರು.

ಚಾಮರಾಜನಗರ ಅಭ್ಯರ್ಥಿ ಬಾಲರಾಜ್ ಹೇಳಿದ್ದೇನು?:"ನನ್ನ 30 ವರ್ಷದ ರಾಜಕೀಯ ಜೀವನದಲ್ಲಿ 3 ವರ್ಷಗಳು ಮಾತ್ರ ಅಧಿಕಾರ ಅನುಭವಿಸಿದ್ದೆ. ಇನ್ನು ಉಳಿದ 27 ವರ್ಷಗಳ ಕಾಲ ಸಾಮಾಜಿಕ ಸೇವೆಗಳಲ್ಲಿ ಹಾಗೂ ಜನಸೇವೆಗಳಲ್ಲಿ ನಿರಂತರ ಸೇವೆ ಮಾಡುತ್ತ ಬಂದಿದ್ದೇನೆ. ಈಗ ನನ್ನ ಸೇವೆಯನ್ನು ಗುರುತಿಸಿ 2024ರ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಟಿಕೆಟ್ ನೀಡಿದ್ದಾರೆ. ನನಗೆ ಸಂತೋಷವಾಗಿದ್ದು, ಶ್ರೀಗಳ ಆಶೀರ್ವಾದ ಪಡೆದುಕೊಂಡು ಬಂದಿದ್ದೇನೆ. ನನಗೆ ಮೂರು ಪಕ್ಷಗಳಲ್ಲೂ ಮಿತ್ರರಿದ್ದಾರೆ. ದಿವಂಗತ ಧ್ರುವನಾರಾಯಣ್ ನನಗೆ ಹೆಚ್ಚಿನ ಸಹಕಾರ ನೀಡಿದ್ದವರು. ಈ ಬಾರಿ ಚಾಮರಾಜನಗರ ಕ್ಷೇತ್ರದಿಂದ ಗೆಲುವು ಸಾಧಿಸುತ್ತೇನೆ" ಎಂದು ಬಾಲರಾಜ್ ಹರ್ಷ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ:'ಬಿಜೆಪಿ-ಜೆಡಿಎಸ್​ ಮೈತ್ರಿ ಸುಸೂತ್ರವಾಗಿ ನಡೆಯಲಿದೆ, ಗೊಂದಲಗಳು ಸುಖಾಂತ್ಯ ಕಾಣಲಿವೆ'

Last Updated : Mar 19, 2024, 3:06 PM IST

ABOUT THE AUTHOR

...view details