ಹಾಸನ : ಮಾಜಿ ಪ್ರಿಯಕರನಿಗೆ ಚಾಕು ಇರಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸದ್ಯ ಮನುಕುಮಾರ್ ಪ್ರಿಯತಮೆ ಬಂಧಿಸಿ ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತಾ ತಿಳಿಸಿದರು.
ಈ ಕುರಿತು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮನುಕುಮಾರ್ ಮತ್ತು ಭವಾನಿ ಇಬ್ಬರೂ ಎ. ಗುಡುಗನಹಳ್ಳಿ ಗ್ರಾಮದ ಒಂದೇ ಊರಿನ ಅಕ್ಕಪಕ್ಕದ ಮನೆಯವರು. ಕಳೆದ 8 ವರ್ಷಗಳಿಂದಲೂ ಇಬ್ಬರಲ್ಲೂ ಪ್ರೀತಿ ಬೆಳೆದಿತ್ತು. ಇವರಿಬ್ಬರು 8 ವರ್ಷದಿಂದ ಪರಸ್ಪರ ಪ್ರೀತಿ ಮಾಡುತ್ತಿದ್ದು, ಕೆಲ ದಿನಗಳ ಹಿಂದೆ ಪ್ರೀತಿ ನಿರಾಕರಿಸಿರುವುದು ಈ ಘಟನೆಗೆ ಕಾರಣವಾಗಿದೆ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಮನುಕುಮಾರ್ ಶಸ್ತ್ರ ಚಿಕಿತ್ಸೆ ಪಡೆದಿದ್ದಾರೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದರು.