ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಮತ್ತೆ ಐದು ದಿನಗಳ ಕಾಲ ಜಾರಿ ನಿರ್ದೇಶನಾಲಯ (ಇ.ಡಿ) ದ ವಶಕ್ಕೆ ನೀಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ. ಇಡಿ ಕಸ್ಟಡಿ ಅಂತ್ಯವಾಗಿದ್ದ ಹಿನ್ನೆಲೆಯಲ್ಲಿ ನಾಗೇಂದ್ರ ಅವರನ್ನ ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು.
ಜುಲೈ 12 ರಂದು ಮುಂಜಾನೆ ಡಾಲರ್ಸ್ ಕಾಲೋನಿಯಲ್ಲಿರುವ ನಾಗೇಂದ್ರ ಅವರ ನಿವಾಸದಲ್ಲಿ ವಶಕ್ಕೆ ಪಡೆದಿದ್ದ ಇ.ಡಿ ಅಧಿಕಾರಿಗಳು ವಿಚಾರಣೆ ನಡೆಸಿದ್ದರು. ಬಳಿಕ ಜುಲೈ 13 ರಂದು ಸಂಪಿಗೆಹಳ್ಳಿಯಲ್ಲಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ಜುಲೈ 18 ರವರೆಗೆ ವಶಕ್ಕೆ ಪಡೆದುಕೊಂಡಿದ್ದರು.