ಕರ್ನಾಟಕ

karnataka

ETV Bharat / state

ಆನೇಕಲ್​: ಬೆಂಕಿ ತಗುಲಿ ಹೊತ್ತಿ ಉರಿದ ಕಾರ್ಖಾನೆ, ಅಪಾರ ನಷ್ಟ - FIRE IN FACTORY - FIRE IN FACTORY

ಕಾರ್ಖಾನೆಯೊಂದಕ್ಕೆ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದಲ್ಲಿ ಸಂಭವಿಸಿದೆ.

factory caught fire
ಕಾರ್ಖಾನೆಗೆ ಬೆಂಕಿ (ETV Bharat)

By ETV Bharat Karnataka Team

Published : May 30, 2024, 1:49 PM IST

ಕಾರ್ಖಾನೆಯಲ್ಲಿ ಬೆಂಕಿ (ETV Bharat)

ಆನೇಕಲ್ (ಬೆಂಗಳೂರು):ಪ್ಲಾಸ್ಟಿಕ್ ಗಮ್ ಟೇಪ್ ತಯಾರಿಕಾ ಕಾರ್ಖಾನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಹೊತ್ತಿ ಉರಿದಿದ್ದು, ಕಚ್ಚಾ ವಸ್ತುಗಳು ಸುಟ್ಟು ಕರಕಲಾಗಿವೆ. ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಂತೆ ಇರುವ ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದಲ್ಲಿ ಗುರುವಾರ ಈ ಘಟನೆ ನಡೆದಿದೆ.

ಟೆಕ್ನೆವಾ ಟೇಪ್ಸ್ ಪ್ರೈ. ಲಿ. ಎಂಬ ಕಾರ್ಖಾನೆಯಲ್ಲಿ ಬೆ. 11 ಗಂಟೆ ಸುಮಾರಿಗೆ ಅವಘಡ ಸಂಭವಿಸಿದೆ. ಬೆಂಕಿಗೆ ಇಡೀ ಕಾರ್ಖಾನೆ ಆಹುತಿಯಾಗಿದ್ದು, ಮುಗಿಲೆತ್ತರಕ್ಕೆ ದಟ್ಟ ಹೊಗೆ ಆವರಿಸಿತ್ತು. ಹತ್ತಿರದ ಎಲೆಕ್ಟ್ರಾನಿಕ್ ಸಿಟಿ ಹಾಗೂ ಆನೇಕಲ್ ಭಾಗದ ಅಗ್ನಿಶಾಮಕ ದಳದ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವಲ್ಲಿ ಹರಸಾಹಸಪಡುತ್ತಿದ್ದಾರೆ.

ಭಾರಿ ಬೆಂಕಿ ಹಿನ್ನೆಲೆಯಲ್ಲಿ ಸಮೀಪದ ಕಾರ್ಖಾನೆಗಳ ಸಿಬ್ಬಂದಿಯೂ ಆತಂಕಗೊಂಡರು. ಸ್ಥಳಕ್ಕೆ ಹೆಬ್ಬಗೋಡಿ ಪೊಲೀಸರು ದೌಡಾಯಿಸಿದ್ದು, ಹೆಚ್ಚಿನ ಅನಾಹುತ ತಡೆಯುವಲ್ಲಿ ಕಾರ್ಯಪ್ರವೃತ್ತರಾಗಿದ್ದಾರೆ. ಗಮ್​​ ಟೇಪ್ ತಯಾರಿಕಾ ಕಾರ್ಖಾನೆಯಲ್ಲಿ ಬೆಂಕಿ ಸುಲಭವಾಗಿ ಹೊತ್ತಿಕೊಳ್ಳುವ ರಾಸಾಯನಿಕ ಇರುವುದು ಬೆಂಕಿಯ ತೀವ್ರತೆಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ.

ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರ್ಮಿಕರು ಹೊರಗೆ ಬಂದಿದ್ದರಿಂದ ಯಾವುದೇ ಜೀವ ಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಬೆಂಕಿಯಿಂದ ನಷ್ಟವಾದ ಕಚ್ಚಾ ವಸ್ತು ಹಾಗೂ ಇತರ ವಸ್ತುಗಳ ಮೌಲ್ಯದ ಬಗ್ಗೆ ಇನ್ನಷ್ಟೇ ಮಾಹಿತಿ ಹೊರಬೀಳಬೇಕಿದೆ.

ಇದನ್ನೂ ಓದಿ:ಬೆಂಗಳೂರು: ಸಿಲಿಂಡರ್​ ಸ್ಫೋಟದಿಂದ ದಂಪತಿ, ಮೂವರು ಮಕ್ಕಳಿಗೆ ಗಂಭೀರ ಗಾಯ - Cylinder Blast

ABOUT THE AUTHOR

...view details