ಕರ್ನಾಟಕ

karnataka

ETV Bharat / state

ಬೆಳಗಾವಿಯಲ್ಲಿ ಮಕ್ಕಳ ಮಾರಾಟ ಕೇಸ್; ಆರೋಪಿ ನಕಲಿ ವೈದ್ಯನಿಂದ ಭ್ರೂಣ ಹತ್ಯೆ - FETICIDE CASE - FETICIDE CASE

ಕಿತ್ತೂರು ತಾಲೂಕಿನ ತಿಗಡೊಳ್ಳಿ ಗ್ರಾಮದ ನಕಲಿ ವೈದ್ಯ ಅಬ್ದುಲ್ ಗಫಾರ್ ಲಾಡಖಾನ್ ಫಾರ್ಮ್​ಹೌಸ್​ನಲ್ಲಿ ಮೂರು ಭ್ರೂಣಗಳ ಕಳೇಬರ ಪತ್ತೆಯಾಗಿವೆ.

fake-doctor-abdul-gaffar-ladakh
ನಕಲಿ ವೈದ್ಯ ಅಬ್ದುಲ್ ಗಫಾರ್ ಲಾಡಖಾನ್ (ETV Bharat)

By ETV Bharat Karnataka Team

Published : Jun 16, 2024, 3:50 PM IST

ಆರೋಪಿ ನಕಲಿ ವೈದ್ಯನಿಂದ ಭ್ರೂಣ ಹತ್ಯೆ (ETV Bharat)

ಬೆಳಗಾವಿ :ಮಕ್ಕಳ ಮಾರಾಟ ಪ್ರಕರಣದ ಆರೋಪಿ, ನಕಲಿ ವೈದ್ಯ ಅಬ್ದುಲ್​ ಗಫಾರ್​ ಲಾಡಖಾನ್​ ಭ್ರೂಣ ಹತ್ಯೆ ಮಾಡುತ್ತಿದ್ದ ಸಂಗತಿ ಪೊಲೀಸರ ತನಿಖೆಯಲ್ಲಿ ಬಹಿರಂಗವಾಗಿದೆ.

ಜಿಲ್ಲಾಧಿಕಾರಿ ನಿತೇಶ್​ ಪಾಟೀಲ್​ ಸೂಚನೆ ಮೇರೆಗೆ ಪೊಲೀಸರು, ಆರೋಗ್ಯ ಇಲಾಖೆ, ಎಫ್​ಎಸ್​ಎಲ್ ಅಧಿಕಾರಿಗಳ ತಂಡ ಇಂದು ಕಿತ್ತೂರು ತಾಲೂಕಿನ ತಿಗಡೊಳ್ಳಿ ಗ್ರಾಮದ ಬಳಿಯ ನಕಲಿ ವೈದ್ಯ ಅಬ್ದುಲ್​ ಗಫಾರ್​ ಲಾಡಖಾನ್ ಫಾರ್ಮ್​ಹೌಸ್​​​ಗೆ ಭೇಟಿ ನೀಡಿ ಪರಿಶೀಲಿಸಿದರು. ಈ ವೇಳೆ ಮೂರು ಭ್ರೂಣಗಳ ಕಳೇಬರ ಪತ್ತೆಯಾಗಿವೆ.

ಈ ಭ್ರೂಣಗಳನ್ನು ತಂದು ತೋಟದಲ್ಲಿ ಹೂಳುತ್ತಿದ್ದ ಅಬ್ದುಲ್​ ಗಫಾರ್​ ಲಾಡಖಾನ್​​ನ​ ಸಹಾಯಕ ರೋಹಿತ್ ಕುಪ್ಪಸಗೌಡರ್​​ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರೋಹಿತ್ ಹಲವು ವರ್ಷಗಳಿಂದ ನಕಲಿ ವೈದ್ಯನ ಸಹಾಯಕನಾಗಿ ಕೆಲಸ ಮಾಡುತ್ತಿದ್ದ. ಕಿತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಜಿಲ್ಲಾ ಆರೋಗ್ಯಾಧಿಕಾರಿ ಡಾ. ಮಹೇಶ್​ ಕೋಣಿ, ಉಪವಿಭಾಗಾಧಿಕಾರಿ ಪ್ರಭಾವತಿ ಫಕೀರಪುರ, ಬೈಲಹೊಂಗಲ ಡಿವೈಎಸ್‌ಪಿ ರವಿ ನಾಯಕ್, ಮೂವರು ಸಿಪಿಐಗಳ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ.

ಏನಿದು ಪ್ರಕರಣ..?:ನಕಲಿ ವೈದ್ಯ ಅಬ್ದುಲ್​ ಗಫಾರ್​ ಲಾಡಖಾನ್ ಸೇರಿದಂತೆ ಐವರು ಆರೋಪಿಗಳು ಮದುವೆಗೂ ಮುನ್ನ ಗರ್ಭಿಣಿಯಾಗಿ ಗರ್ಭಪಾತ ಮಾಡಿಸಬೇಕು ಎನ್ನುವವರನ್ನೇ ಟಾರ್ಗೆಟ್ ಮಾಡುತ್ತಿದ್ದರು. ಏಳು, ಎಂಟು ತಿಂಗಳ ಗರ್ಭಿಣಿಯರ ಆಪರೇಷನ್ ಮಾಡಿ, ಮಗು ರಕ್ಷಣೆ ಮಾಡಿ, ತಾವೇ ಸಾಕುವುದಾಗಿ ಹೇಳಿ ಮಗುವನ್ನು ಮಕ್ಕಳಿಲ್ಲದವರಿಗೆ ಹಣಕ್ಕಾಗಿ ಮಾರಾಟ ಮಾಡಿ ಹಣ ಗಳಿಸುತ್ತಿದ್ದರು.

ಮಕ್ಕಳಿಲ್ಲದವರಿಗೆ 60 ಸಾವಿರದಿಂದ ಒಂದೂವರೆ ಲಕ್ಷ ರೂ. ಹಣಕ್ಕೆ ಮಾರಾಟ ಮಾಡಲಾಗುತ್ತಿತ್ತು. ಈ ಮಕ್ಕಳ ಮಾರಾಟ ಜಾಲವನ್ನು ಪತ್ತೆ ಮಾಡಿದ್ದ ಪೊಲೀಸರು, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸರ್ಕಾರಿ ಮತ್ತು ಕೇಂದ್ರ ಸಂಯೋಜಕರ ತಂಡ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಈಗ ಮಕ್ಕಳ ಮಾರಾಟ ಮಾಡುತ್ತಿದ್ದ ಆರೋಪಿ ನಕಲಿ ವೈದ್ಯ ಅಬ್ದುಲ್​ ಗಫಾರ್​ ಲಾಡಖಾನ್ ಭ್ರೂಣ ಹತ್ಯೆ ಕೂಡ ಮಾಡಿದ್ದಾನೆ ಎಂಬುದು ಸದ್ಯ ಪೊಲೀಸರ ತನಿಖೆಯಲ್ಲಿ ಸ್ಪಷ್ಟವಾಗಿದೆ. ಈಗಾಗಲೇ ಎಲ್ಲಾ ಆರೋಪಿಗಳು ಪೊಲೀಸ್ ವಶದಲ್ಲಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.

ಇದನ್ನೂ ಓದಿ :ಮಂಡ್ಯದಲ್ಲಿ ನಿಲ್ಲದ ಭ್ರೂಣ ಪತ್ತೆ, ಹತ್ಯೆ: ಹೆಲ್ತ್‌ ಕ್ವಾಟರ್ಸ್‌ನಲ್ಲೇ ದುಷ್ಕೃತ್ಯ ಬೆಳಕಿಗೆ! - Female Feticide Racket

ABOUT THE AUTHOR

...view details