ಕರ್ನಾಟಕ

karnataka

ETV Bharat / state

ನಳಿನ್ ಕುಮಾರ್ ಕಟೀಲ್ ವಿರುದ್ದ ಸುಳ್ಳು ಸಂದೇಶ: ದೂರು ದಾಖಲು - False message against Nalin Kumar - FALSE MESSAGE AGAINST NALIN KUMAR

ನಳಿನ್​ ಕುಮಾರ್​ ಕಟೀಲ್​ ವಿರುದ್ದ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸಂದೇಶ ರವಾನಿಸುತ್ತಿರುವುದಾಗಿ ದೂರು ದಾಖಲಾಗಿದೆ.

ನಳಿನ್ ಕುಮಾರ್ ಕಟೀಲ್
ನಳಿನ್ ಕುಮಾರ್ ಕಟೀಲ್ (ETV Bharat)

By ETV Bharat Karnataka Team

Published : Jun 15, 2024, 10:28 AM IST

ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಅವರ ವಿರುದ್ದ ಸುಳ್ಳು ಸಂದೇಶ ರವಾನಿಸುತ್ತಿರುವ ಬಗ್ಗೆ ಪುತ್ತೂರು ನಗರ ಪೊಲೀಸ್‌ ಠಾಣೆಯಲ್ಲಿ ದೂರು ನೀಡಲಾಗಿದೆ.

ಉದ್ಯಮಿ, ಮಾಜಿ ಸಂಸದರ ಆಪ್ತರಾದ ಸೀತಾರಾಮ ರೈ ಕೆದಂಬಾಡಿಗುತ್ತು ಈ ಬಗ್ಗೆ ದೂರು ನೀಡಿದ್ದಾರೆ. ಅಝೀಜ್ ಹಾಗೂ ಇತರರು ನಳಿನ್ ಕುಮಾರ್ ಕಟೀಲ್ ಅವರ ವಿರುದ್ಧವಾಗಿ ಸಾಮಾಜಿಕ ಜಾಲತಾಣವಾದ ವಾಟ್ಸ್​ಆ್ಯಪ್​​​ನಲ್ಲಿ ತಪ್ಪು ಸಂದೇಶ ರವಾನಿಸುತ್ತಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ. ಮೇ 14ರ ಬೆಳಗ್ಗಿನಿಂದ ವಾಟ್ಸ್​ಆ್ಯಪ್​ನಲ್ಲಿ ನಿರಂತರವಾಗಿ ಮಾಜಿ ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ವಿರುದ್ದ ಮಾನಹಾನಿಯಾಗುವಂತೆ ಸಂದೇಶವನ್ನು ಹರಿಯಬಿಡಲಾಗಿದೆ.

ಅಜೀಜ್ ಎಂಬಾತ "ಪ್ರವೀಣ್ ನೆಟ್ಟಾರ್ ಹತ್ಯೆಗೆ ಬಿಗ್ ಟ್ವಿಸ್ಟ್; ಹಣ ನೀಡಿ ಕೊಲೆ ಮಾಡಿಸಿದ ನಳಿನ್ ಕುಮಾರ್ ಕಟೀಲ್" ಎಂಬಿತ್ಯಾದಿ ಸಂದೇಶಗಳನ್ನು ರವಾನಿಸುತ್ತಿದ್ದಾನೆ. ಪ್ರಸಾದ್ ಕೆ.ಎಂಬಾತನಿಂದಲೂ ಈ ವಿಚಾರದ ಬಗ್ಗೆ ಪ್ರಚಾರವಾಗುತ್ತಿದೆ. ನಳಿನ್ ಕುಮಾರ್ ಕಟೀಲ್ ಅವರ ತೇಜೋವಧೆ ಮಾಡಲು ಹಲವಾರು ಜನರು ಪ್ರಯತ್ನಿಸುತ್ತಿರುವುದು ಕಂಡು ಬರುತ್ತದೆ. ಮಾಜಿ ಸಂಸದರ ವಿರುದ್ಧ ಮಾನಹಾನಿಕರವಾದ ಸಂದೇಶಗಳನ್ನು ರವಾನಿಸುತ್ತಿರುವುದರಿಂದ ಅವರ ಅಭಿಮಾನಿ ಬಳಗಕ್ಕೆ ತುಂಬಾ ನೋವುಂಟಾಗಿರುತ್ತದೆ. ಈ ಬಗ್ಗೆ ತಕ್ಷಣ ಪರಿಶೀಲನೆ ಮಾಡಿ ಮಾನಹಾನಿಕರ ಸಂದೇಶಗಳನ್ನು ರವಾನಿಸುವವರ ವಿರುದ್ಧ ಕ್ರಮಕೈಗೊಂಡು ನ್ಯಾಯ ಒದಗಿಸುವಂತೆ ದೂರಿನಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ:ಪೋಕ್ಸೋ ಕೇಸ್: ಬಿ.ಎಸ್‌.ಯಡಿಯೂರಪ್ಪ ಬಂಧಿಸದಂತೆ ಹೈಕೋರ್ಟ್ ನಿರ್ದೇಶನ - Yediyurappa POCSO Case

ABOUT THE AUTHOR

...view details