ಕರ್ನಾಟಕ

karnataka

ETV Bharat / state

ಮೈಸೂರು: ದೆಹಲಿ ರೈತ ಹೋರಾಟ ಬೆಂಬಲಿಸಿ ರೈಲು ತಡೆಗೆ ಯತ್ನಿಸಿದವರು ಪೊಲೀಸ್ ವಶಕ್ಕೆ - FARMERS DETAINED

ಮೈಸೂರು ರೈಲ್ವೆ ನಿಲ್ದಾಣದಲ್ಲಿ ರೈಲು ತಡೆಗೆ ಮುಂದಾದ ರೈತರನ್ನು ಪೊಲೀಸರು ವಶಕ್ಕೆ ಪಡೆದರು.

ರೈಲು ತಡೆಗೆ ಯತ್ನಿಸಿದ ರೈತರ ಬಂಧನ
ರೈಲು ತಡೆಗೆ ಯತ್ನಿಸಿದ ರೈತರನ್ನು ವಶಕ್ಕೆ ಪಡೆದ ಪೊಲೀಸರು (ETV Bharat)

By ETV Bharat Karnataka Team

Published : Dec 18, 2024, 6:18 PM IST

ಮೈಸೂರು:ದೆಹಲಿ ರೈತ ಮುಖಂಡರ ಹೋರಾಟ ಬೆಂಬಲಿಸಿ ರೈಲು ತಡೆಗೆ ಮುಂದಾದ ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಇಂದು ನೂರಾರು ರೈತರು ಮೈಸೂರಿನ ರೈಲ್ವೆ ನಿಲ್ದಾಣಕ್ಕೆ ರೈಲು ತಡೆ ಚಳುವಳಿ ನಡೆಸಲು ಮುಂದಾದಾಗ ಪೊಲೀಸರು ತಡೆದರು. ಈ ವೇಳೆ ಮಾತಿನ ಚಕಮಕಿ ನಡೆಯಿತು. ನಂತರ ಪೊಲೀಸರು ರೈತರನ್ನು ವಶಕ್ಕೆ ಪಡೆದರು. ಪೊಲೀಸರ ಕ್ರಮ ಖಂಡಿಸಿ ಕುರುಬೂರು ಶಾಂತಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ:ಕುಸಿದ 'ಕೆಂಪು ಸುಂದರಿ'ಯ ಬೆಲೆ: ನೂರಾರು ಎಕರೆಯಲ್ಲಿ ಟೊಮೆಟೊ ಬೆಳೆದ ರೈತರು ಕಂಗಾಲು!

ABOUT THE AUTHOR

...view details