ಕರ್ನಾಟಕ

karnataka

ETV Bharat / state

ಕುರುಬೂರು ಶಾಂತಕುಮಾರ್​ಗೆ ಗಂಭೀರ ಗಾಯ: ಏರ್ ಆಂಬ್ಯುಲೆನ್ಸ್​ನಲ್ಲಿ ಕರೆತರಲು ವ್ಯವಸ್ಥೆ - KURUBURU SHANTHKUMAR INJURED

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರನ್ನು ಏರ್ ಆಂಬ್ಯುಲೆನ್ಸ್ ಮೂಲಕ ಬೆಂಗಳೂರಿನ ಆಸ್ಪತ್ರೆಗೆ ಕರೆತರಲು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಕುರುಬೂರು ಶಾಂತಕುಮಾರ್,KURUBURU SHANTHKUMAR Accident
ರೈತ ಮುಖಂಡ ಕುರುಬೂರು ಶಾಂತಕುಮಾರ್ (ETV Bharat)

By ETV Bharat Karnataka Team

Published : Feb 16, 2025, 6:50 AM IST

ಬೆಂಗಳೂರು: ಪಂಜಾಬಿನ ಪಟಿಯಾಲ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ರಾಜ್ಯದ ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರನ್ನು ಏರ್ ಆಂಬ್ಯುಲೆನ್ಸ್ ಮೂಲಕ ಬೆಂಗಳೂರಿಗೆ ಕರೆತರಲು ರಾಜ್ಯ ಸರ್ಕಾರ ವ್ಯವಸ್ಥೆ ಮಾಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆಯ ಮೇರೆಗೆ ಅಧಿಕಾರಿಗಳು ಏರ್ ಆಂಬ್ಯುಲೆನ್ಸ್ ಮೂಲಕ ಶಾಂತಕುಮಾರ್‌ರನ್ನು ಚಂಡೀಗಡದಿಂದ ಬೆಂಗಳೂರಿಗೆ ಕರೆತಂದು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಿದ್ದಾರೆ.

ಅಪಘಾತದಲ್ಲಿ ಶಾಂತಕುಮಾರ್ ಅವರ ಬೆನ್ನು ಮೂಳೆಗೆ ಗಂಭೀರ ಗಾಯವಾಗಿದೆ. ಸದ್ಯ ಪಟಿಯಾಲದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ದೆಹಲಿಯ ಕನೋಲಿ ಬಾರ್ಡರ್‌ನಲ್ಲಿ ನಡೆಯುತ್ತಿದ್ದ ರೈತರ ಪ್ರತಿಭಟನೆ ಸಂಬಂಧಿಸಿದ ಸಭೆಗೆ ಕುರುಬೂರು ಶಾಂತಕುಮಾರ್‌ ಕಾರಲ್ಲಿ ತೆರಳುತ್ತಿದ್ದಾಗ ಪಟಿಯಾಲ ಸಮೀಪ ಅಪಘಾತ ಸಂಭವಿಸಿದೆ. ಕಾರು ಡಿವೈಡರ್​ಗೆ ಡಿಕ್ಕಿ ಹೊಡೆದು ಅವರು ತೀವ್ರವಾಗಿ ಗಾಯಗೊಂಡಿದ್ದಾರೆ. ಕಾರಲ್ಲಿದ್ದ ತಮಿಳುನಾಡಿನ ರೈತ ಮುಖಂಡರೊಬ್ಬರಿಗೂ ಗಾಯವಾಗಿದೆ.

ಇದನ್ನೂ ಓದಿ: ಪ್ರಯಾಗ್​ರಾಜ್​ ಹೈವೇಯಲ್ಲಿ ಭೀಕರ ಅಪಘಾತ: ಮಹಾಕುಂಭಕ್ಕೆ ತೆರಳುತ್ತಿದ್ದ 10 ಮಂದಿ ಸಾವು

ABOUT THE AUTHOR

...view details