ರಾಯಚೂರು:ಮಾವನೇ ತನ್ನ ಸೊಸೆಯನ್ನು ಬರ್ಬರವಾಗಿ ಕೊಲೆಗೈದ ಅಮಾನವೀಯ ಘಟನೆ ರಾಯಚೂರಿನ ಜುಲಮಗೇರಾ ಗ್ರಾಮದಲ್ಲಿ ಶನಿವಾರ ನಡೆದಿದೆ. ಮೃತ ಮಹಿಳೆಗೆ 27 ವರ್ಷ ವಯಸ್ಸಾಗಿತ್ತು. ಆರೋಪಿ ಮಾವ ಗ್ರಾಮದಿಂದ ಪರಾರಿಯಾಗಿದ್ದಾನೆ.
ಆರೋಪಿ ಮಾವ ಮನೆಯಲ್ಲಿ ಯಾರೂ ಇಲ್ಲದ ವೇಳೆ ಸೊಸೆಯ ಮೇಲೆ ಅತ್ಯಾಚಾರಕ್ಕೆ ಮುಂದಾಗಿದ್ದಾನೆ. ಸಂತ್ರಸ್ತೆ ತಪ್ಪಿಸಿಕೊಳ್ಳುವಾಗ ಕಬ್ಬಿಣದ ಸಲಾಕೆಯಿಂದ ತಲೆಗೆ ಬಲವಾಗಿ ಹೊಡೆದಿದ್ದಾನೆ. ಇದರಿಂದ ಗಂಭೀರವಾಗಿ ಗಾಯಗೊಂಡ ಮಹಿಳೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.