ಬೆಂಗಳೂರು:ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನೆ ಸಂಸ್ಥೆಯ (ಬಿಎಂಸಿಆರ್ಐ) ಮಹಿಳಾ ಹಾಸ್ಟೆಲ್ನಲ್ಲಿ ತಂಗಿದ್ದ 47 ವಿದ್ಯಾರ್ಥಿನಿಯರು ಏಕಾಏಕಿ ಅಸ್ವಸ್ಥರಾಗಿದ್ದು, ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಂಗಳೂರು ಮೆಡಿಕಲ್ ಕಾಲೇಜಿನ 47 ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು - Students Fall Sick - STUDENTS FALL SICK
ವಿದ್ಯಾರ್ಥಿನಿಯರು ಅಸ್ವಸ್ಥರಾದ ಘಟನೆ ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನೆ ಸಂಸ್ಥೆ ಹಾಸ್ಟೆಲ್ನಲ್ಲಿ ನಡೆದಿದೆ.
Published : Apr 6, 2024, 10:03 AM IST
ವಿಕ್ಟೋರಿಯಾ ಆಸ್ಪತ್ರೆಯ ಟ್ರಾಮಾ ಸೆಂಟರ್ನಲ್ಲಿ 29 ವಿದ್ಯಾರ್ಥಿನಿಯರು, ಐವರು ಹೆಚ್ ಬ್ಲಾಕ್ನಲ್ಲಿ ಹಾಗೂ ನಾಲ್ವರು ತುರ್ತು ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ಪಡೆಯುತ್ತಿದ್ದಾರೆ. ವಾಂತಿ, ಭೇದಿಯಿಂದ ತ್ರೀವ ಅಸ್ಬಸ್ಥಗೊಂಡಿದ್ದು, ಆತಂಕಕ್ಕೆ ಕಾರಣವಾಗಿದೆ. ಸದ್ಯ ಚಿಕಿತ್ಸೆ ಪಡೆಯುತ್ತಿರುವ ಎಲ್ಲ ವಿದ್ಯಾರ್ಥಿಯರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿರುವುದಾಗಿ ಬಿಎಂಸಿಆರ್ಐ ಮುಖ್ಯಸ್ಥ ಹಾಗೂ ನಿರ್ದೇಶಕ ಡಾ.ಕೆ.ರಮೇಶ್ ಕೃಷ್ಣ ತಿಳಿಸಿದ್ದಾರೆ. ವಿದ್ಯಾರ್ಥಿನಿಯರು ದಿಢೀರ್ ಅಸ್ವಸ್ಥರಾಗಲು ಕಾರಣ ಏನೆಂಬುದರ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ:ಗಂಗಾವತಿ: ಬಿಸಿಯೂಟ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು - Students Fall Sick