ಕರ್ನಾಟಕ

karnataka

ETV Bharat / state

ಕಲಬುರಗಿ ಕಾರಾಗೃಹದಲ್ಲಿ ಕೈದಿಗಳ ಮಾರಾಮಾರಿ; ಕೆಲವರಿಗೆ ಗಾಯ - ಕೈದಿಗಳ ನಡುವೆ ಮಾರಾಮಾರಿ

ಕಲಬುರಗಿ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ಎರಡು ಗುಂಪುಗಳ ನಡುವೆ ಹೊಡೆದಾಟ ನಡೆದಿದೆ. ಘಟನೆಯಲ್ಲಿ ಕೆಲವರು ಗಾಯಗೊಂಡಿದ್ದಾರೆ.

ಕಲಬುರಗಿ ಜೈಲಿನಲ್ಲಿ ಕೈದಿಗಳ ನಡುವೆ ಮಾರಾಮಾರಿ
ಸಂಗ್ರಹ ಚಿತ್ರ

By ETV Bharat Karnataka Team

Published : Feb 25, 2024, 11:45 AM IST

ಕಲಬುರಗಿ:ಇಲ್ಲಿನ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ನಿನ್ನೆ (ಶನಿವಾರ) ಕೈದಿಗಳ ಎರಡು ಗುಂಪುಗಳ ನಡುವೆ ಹೊಡೆದಾಟ ನಡೆದಿದೆ. ಘಟನೆಯಲ್ಲಿ ಕೆಲವರು ಗಾಯಗೊಂಡಿದ್ದಾರೆ.

ಶಿವಮೊಗ್ಗದ ಬಜರಂಗ ದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ಆರೋಪಿ ಹಾಗೂ ಕಲಬುರಗಿಯ ಕೊಲೆ ಪ್ರಕರಣವೊಂದರ ಆರೋಪಿಗಳ ಗುಂಪಿನ ನಡುವೆ ಮಾರಾಮಾರಿ ನಡೆದಿದೆ. ಗಲಾಟೆಯಲ್ಲಿ ಎರಡು ಗುಂಪಿನ ಕೆಲವರಿಗೆ ಚಿಕ್ಕ ಗಾಯಗಳಾಗಿದೆ. ಜೈಲಿನ ಸಿಬ್ಬಂದಿ ಮಧ್ಯಪ್ರವೇಶಿಸಿ ವಾತಾವರಣ ತಿಳಿಗೊಳಿಸಿದ್ದಾರೆ.

ಅಪರಾಧ ವಿಭಾಗದ ಡಿಸಿಪಿ ನೇತೃತ್ವದಲ್ಲಿ ಜೈಲಿನ ಮೇಲೆ ದಾಳಿ ನಡೆಸಲಾಗಿದೆ. ಹಲವೆಡೆ ತಪಾಸಣೆ ಮಾಡಲಾಗಿದೆ. ಆದರೆ, ಯಾವುದೇ ವಸ್ತುಗಳು ಪತ್ತೆಯಾಗಿಲ್ಲ ಎಂದು ಕೇಂದ್ರ ಕಾರಾಗೃಹದ ಅಧೀಕ್ಷಕ ಪಿ.ರಂಗನಾಥ ಮಾಹಿತಿ ನೀಡಿದ್ದಾರೆ.

ಕಳೆದ ಫೆಬ್ರುವರಿ 20ರಂದು ರಾತ್ರಿ ಕ್ಯಾಂಟೀನ್ ಸಮೀಪ ಟೀ ಕುಡಿಯುತ್ತಾ ನಿಂತಿದ್ದ ವೇಳೆ ಕಾರಿನಲ್ಲಿ ಬಂದ ದುಷ್ಕರ್ಮಿಗಳ ಗುಂಪು ಮಾರಕಾಸ್ತ್ರಗಳಿಂದ ಹರ್ಷನ ಮೇಲೆ ದಾಳಿ ನಡೆಸಿ ಪರಾರಿಯಾಗಿತ್ತು. ಸ್ಥಳದಲ್ಲೇ ಕುಸಿದು ಬಿದ್ದಿದ್ದ ಹರ್ಷನನ್ನು ಕೂಡಲೇ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದರು. ಹತ್ಯೆಗೆ ಸಂಬಂಧಿಸಿದಂತೆ ಬಂಧಿಸಲಾದ 11 ಮಂದಿ ಆರೋಪಿಗಳು ಇದೇ ಜೈಲಿನಲ್ಲಿದ್ದಾರೆ.

ಸರ್ಕಾರಿ ಕೆಲಸಕ್ಕೆ ಸೇರಿ ಒಂದೇ ತಿಂಗಳಲ್ಲಿ ಹಾಸ್ಟೆಲ್ ವಾರ್ಡನ್‌ಗೆ ಜೈಲು:ಸರ್ಕಾರಿ ನೌಕರಿ ಪಡೆಯುವ ತವಕದಲ್ಲಿ ಅಕ್ರಮವೆಸಗಿದ ಆರೋಪದ ಮೇಲೆ ಕೆಲಸಕ್ಕೆ ಸೇರಿ ಒಂದೇ ತಿಂಗಳಲ್ಲಿ ಹಾಸ್ಟೆಲ್ ವಾರ್ಡನ್ ಜೈಲು ಪಾಲಾಗಿರುವ ಘಟನೆ ನಡೆದಿದೆ. ಸಮಾಜ ಕಲ್ಯಾಣ ಇಲಾಖೆಯ ಚಿಕ್ಕಬಳ್ಳಾಪುರದ ವೃತ್ತಿಪರ ಹಾಸ್ಟೆಲ್ ವಾರ್ಡನ್ ಬಸವರಾಜ್ ಯಾಳವಾರ್ ಬಂಧಿತ ಆರೋಪಿ. ಕೆಇಎ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಮೇಲ್ವಿಚಾರಕರಿಗೆ 40 ಲಕ್ಷ ರೂ ನೀಡಿದ ಆರೋಪದಡಿ ಇವರನ್ನು ಬಂಧಿಸಲಾಗಿದೆ.

ಬಸವರಾಜ್ ಯಾಳವಾರ್ ವಿರುದ್ಧ ಕಲಬುರಗಿಯ ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸಿಐಡಿ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.

ಇದನ್ನೂ ಓದಿ:ಆನೇಕಲ್: ಬಿ.ಟೆಕ್‌ ವಿದ್ಯಾರ್ಥಿಯ ಶವ ನೀಲಗಿರಿ ತೋಪಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಪತ್ತೆ

ABOUT THE AUTHOR

...view details