ದಾವಣಗೆರೆ : ಸ್ನೇಹಿತರ ಹೆಸರಿನಲ್ಲಿ ಖಾತೆಗಳನ್ನು ತೆರೆದು ತಮ್ಮದೇ ಫೈನಾನ್ಸ್ ಕಂಪನಿಯಲ್ಲಿ ನಕಲಿ ಚಿನ್ನಾಭರಣಗಳನ್ನು ಅಡವಿಟ್ಟು, ಲಕ್ಷಾಂತರ ರೂಪಾಯಿ ವಂಚಿಸಿದ್ದ ಆರೋಪದಡಿ ಮ್ಯಾನೇಜರ್ವೊಬ್ಬರನ್ನು ಜಗಳೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜಗಳೂರು ಪಟ್ಟಣದ ಕೆಎಲ್ಎಂ ಆ್ಯಕ್ಸಿವ್ ಫಿನ್ ವೆಸ್ಟ್ ಫೈನಾನ್ಸ್ ಕಂಪನಿಯ ವ್ಯವಸ್ಥಾಪಕ ಅರವಿಂದ ಹನುಮಂತ ಬಂಧಿತ ಆರೋಪಿ.
ಬಂಧಿತ ಆರೋಪಿಯು ಫೈನಾನ್ಸ್ ಕಂಪನಿಯಲ್ಲಿ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸುತ್ತಿದ್ದು, ಸ್ನೇಹಿತರ ಹೆಸರಿನಲ್ಲಿ ಖಾತೆಗಳನ್ನು ತೆರೆದು ನಕಲಿ ಬಂಗಾರದ ಆಭರಣಗಳನ್ನು ಅಡವಿಟ್ಟಿದ್ದರು. ಬಳಿಕ ಲಕ್ಷಾಂತರ ರೂಪಾಯಿ ಹಣವನ್ನು ಪಡೆದು ಕಂಪನಿಗೆ ವಂಚಿಸಿ ಪರಾರಿಯಾಗಿದ್ದನು. ಈ ಬಗ್ಗೆ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಅವರದ್ದೇ ಸಂಸ್ಥೆಯ ಪ್ರಾದೇಶಿಕ ವ್ಯವಸ್ಥಾಪಕರು ನೀಡಿದ ದೂರಿನನ್ವಯ ಪ್ರಕರಣ ದಾಖಲಿಕೊಂಡು ಅರವಿಂದ ಹನುಮಂತನನ್ನು ಬಂಧಿಸಿರುವುದಾಗಿ ಜಗಳೂರು ಠಾಣೆಯ ಪಿಐ ರಾಷ್ಟ್ರಪತಿ ರಾಜು ಅವರು ಈಟಿವಿ ಭಾರತಕ್ಕೆ ತಿಳಿಸಿದ್ದಾರೆ.