ಬೆಂಗಳೂರು:ನಕಲಿ ಜನ್ಮ ದಿನಾಂಕ ದಾಖಲೆ ನೀಡಿ ಕೆಲಸ ಪಡೆದ ಆರೋಪದಡಿ ಸಬ್ಇನ್ಸ್ಪೆಕ್ಟರ್ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರು ಪೊಲೀಸ್ ಇಲಾಖೆಯ ಆಡಳಿತ ವಿಭಾಗದ ಅಧಿಕಾರಿ ಎಸ್. ಟಿ. ಚಂದ್ರಶೇಖರ್ ನೀಡಿರುವ ದೂರಿನ ಮೇರೆಗೆ ಬ್ಯಾಡರಹಳ್ಳಿ ಠಾಣೆಯ ಪಿಎಸ್ಐ ಕಾಶಿಲಿಂಗೇಗೌಡ ಎಸ್. ಬಿ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ.
ಪಿಎಸ್ಐ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು 30 ವರ್ಷ ಮೀರಿರಬಾರದು ಎಂದು ಸರ್ಕಾರದ ಅಧಿಸೂಚನೆಯಿದೆ. ಅರ್ಹ ಅಭ್ಯರ್ಥಿಯಲ್ಲದಿದ್ದರೂ ಸಹ ಕಾಶಿಲಿಂಗೇಗೌಡ ತಮ್ಮ ಜನ್ಮ ದಿನಾಂಕವನ್ನು 15/04/1988 ಎಂದು ನೀಡುವ ಮೂಲಕ 2017-18ರ ಸಾಲಿನ ಸಬ್ಇನ್ಸ್ಪೆಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸಿ, ನೇಮಕವಾಗಿದ್ದಾರೆ ಎಂದು ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿಗೆ ವಕೀಲರೊಬ್ಬರು ದೂರು ನೀಡಿದ್ದರು.