ಕರ್ನಾಟಕ

karnataka

ETV Bharat / state

ಅನಧಿಕೃತವಾಗಿ ಐಎಎಸ್ ಅಧಿಕಾರಿಯ ಸಿಡಿಆರ್ ಪಡೆದ ಆರೋಪ; ಮಾಜಿ ಐಪಿಎಸ್ ಅಧಿಕಾರಿ, ಇನ್ಸ್‌ಪೆಕ್ಟರ್ ವಿರುದ್ಧ ಎಫ್ಐಆರ್ - CDR Case - CDR CASE

ಅನಧಿಕೃತವಾಗಿ ಐಎಎಸ್ ಅಧಿಕಾರಿಯ ಸಿಡಿಆರ್ ಪಡೆದ ಆರೋಪದ ಮೇಲೆ ಮಾಜಿ ಐಪಿಎಸ್ ಅಧಿಕಾರಿ, ಇನ್ಸ್‌ಪೆಕ್ಟರ್ ವಿರುದ್ಧ ಎಫ್ಐಆರ್ ದಾಖಲಾಗಿದೆ.

fir against former ips officer
ಸಾಂದರ್ಭಿಕ ಚಿತ್ರ (Pic: IANS)

By ETV Bharat Karnataka Team

Published : May 25, 2024, 10:38 AM IST

ಬೆಂಗಳೂರು:ಮಾಜಿ ಐಪಿಎಸ್ ಹಾಗೂ ಐಎಎಸ್ ಅಧಿಕಾರಿಯೊಬ್ಬರ ನಡುವಿನ ಕೌಟುಂಬಿಕ ವಿವಾದದಲ್ಲಿ ಅನಧಿಕೃತ ಸಿಡಿಆರ್ (ಕರೆ ವಿವರಗಳ ದಾಖಲೆ) ಪಡೆದ ಆರೋಪ ಕೇಳಿ ಬಂದಿದೆ. ಈ ಸಂಬಂಧ ಮಾಜಿ ಐಪಿಎಸ್​ ಅಧಿಕಾರಿ ಹಾಗೂ ಪಿಎಸ್​​ಐ ಸೇರಿದಂತೆ ಐವರ ವಿರುದ್ಧ ಪ್ರಕರಣ ದಾಖಲಾಗಿದೆ.

ಐಎಎಸ್ ಅಧಿಕಾರಿ ಡಾ. ಆಕಾಶ್ ಎಸ್. ನೀಡಿರುವ ದೂರಿನ ಅನ್ವಯ ಮಾಜಿ ಐಪಿಎಸ್ ಅಧಿಕಾರಿ ಸುರೇಶ್ ಟಿ.ಆರ್., ಹೆಬ್ಬಗೋಡಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಐಯ್ಯಣ್ಣ ರೆಡ್ಡಿ ಸೇರಿದಂತೆ ಐವರ ವಿರುದ್ಧ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ದೂರಿನ ವಿವರ:ಕೌಟುಂಬಿಕ ವಿವಾದಕ್ಕೆ ಸಂಬಂಧಿಸಿದಂತೆ ಸುರೇಶ್ ಟಿ.ಆರ್. ಹಾಗೂ ಪ್ರಸ್ತುತ ಹೆಬ್ಬಗೋಡಿ ಠಾಣೆಯ ಇನ್ಸ್‌ಪೆಕ್ಟರ್ ಆಗಿರುವ ಐಯ್ಯಣ್ಣ ರೆಡ್ಡಿ ಸೇರಿ 2022ರ ಫೆಬ್ರವರಿಯಿಂದ 2023ರ ಜನವರಿಯವರೆಗಿನ ತಮ್ಮ ಕರೆಯ ವಿವರಗಳನ್ನ ಪಡೆದುಕೊಂಡಿದ್ದಾರೆ. ಆ ಮೂಲಕ ನನಗೆ ಕಿರುಕುಳ ನೀಡಲು, ಬೆದರಿಕೆ ಹಾಕಲು ಬಳಸಿಕೊಂಡಿದ್ದಾರೆ ಎಂದು ಐಎಎಸ್ ಅಧಿಕಾರಿ ಡಾ. ಆಕಾಶ್ ಎಸ್. ದೂರಿದ್ದಾರೆ. ಈ ದೂರಿನ ಅನ್ವಯ ಸೈಬರ್ ಕ್ರೈಂ ಠಾಣೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

ಸದ್ಯ ಹೆಬ್ಬಗೋಡಿ ಠಾಣೆಯ ಇನ್ಸ್‌ಪೆಕ್ಟರ್ ಆಗಿರುವ ಐಯ್ಯಣ್ಣ ರೆಡ್ಡಿಯವರ ವಿರುದ್ಧ ಈಗಾಗಲೇ ರೇವ್ ಪಾರ್ಟಿ ಪ್ರಕರಣದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್.ಪಿ ಚಾರ್ಜ್ ಮೆಮೋ ನೀಡಿದ್ದಾರೆ. ಅದರ ಬೆನ್ನಲ್ಲೇ ಅನಧಿಕೃತವಾಗಿ ಸಿಡಿಆರ್ ತೆಗೆದಿರುವ ಆರೋಪ ಕೇಳಿ ಬಂದಿದೆ.

ಇದನ್ನೂ ಓದಿ:ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಎನ್‌ಐಎ ಅಧಿಕಾರಿಗಳಿಂದ ಹುಬ್ಬಳ್ಳಿಯ ನಿವಾಸಿ ಅರೆಸ್ಟ್​ - Rameshwaram Cafe Blast Case

ABOUT THE AUTHOR

...view details